IND vs BAN 1st Test: ಭಾರತದ ಸಂಭಾವ್ಯ ಆಡುವ 11ರ ಬಳಗ; 12 ವರ್ಷಗಳ ನಂತರ ಈ ಬೌಲರ್‌ಗೆ ಸ್ಥಾನ?

ಅಂದಿನ ಚಿತ್ತಗಾಂಗ್, ಇಂದಿನ ಚಟ್ಟೋಗ್ರಾಮ್‌ನಲ್ಲಿ ಬುಧವಾರ (ಡಿಸೆಂಬರ್ 14) ಆರಂಭವಾಗಲಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾ ಕಾಯಂ ನಾಯಕ ರೋಹಿತ್ ಶರ್ಮಾ ಅಧಿಕೃತವಾಗಿ ಹೊರಗುಳಿದಿದ್ದಾರೆ.
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಭಾರತ ತಂಡವನ್ನು ಮುನ್ನಡೆಸಲಿದ್ದು, ಅನುಭವಿ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಅವರಿಗೆ ಉಪನಾಯಕನ ಪಟ್ಟ ಕಟ್ಟಲಾಗಿದೆ.
"ರೋಹಿತ್ ಶರ್ಮಾ ಭಾರತ ತಂಡಕ್ಕೆ ಅತ್ಯಂತ ಪ್ರಮುಖ ಆಟಗಾರ ಮತ್ತು ನಮ್ಮ ತಂಡದ ಅನುಭವಿ ಆಟಗಾರ. ನಾವು ಅವರನ್ನು ನಾಯಕ ಮತ್ತು ಬ್ಯಾಟ್ಸ್‌ಮನ್ ಆಗಿ ಮಿಸ್ ಮಾಡಿಕೊಳ್ಳಲಿದ್ದೇವೆ. ಅವರು 2ನೇ ಟೆಸ್ಟ್ ಪಂದ್ಯದ ವೇಳೆಗೆ ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಮತ್ತು ತಂಡಕ್ಕೆ ಮರಳುವ ಭರವಸೆ ಇದೆ," ಎಂದು ಸೋಮವಾರ ಪಂದ್ಯದ ಪೂರ್ವ ಸುದ್ದಿಗೋಷ್ಠಿಯಲ್ಲಿ ಕೆಎಲ್ ರಾಹುಲ್ ಹೇಳಿದರು.

ಕೆಎಲ್ ರಾಹುಲ್ ಜೊತೆ ಶುಭಮನ್ ಗಿಲ್ ಇನ್ನಿಂಗ್ಸ್ ಆರಂಭ
ಇನ್ನು ರೋಹಿತ್ ಶರ್ಮಾ ಇಲ್ಲದ ಕಾರಣ ಯುವ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಅವರು ಹಂಗಾಮಿ ನಾಯಕ ಕೆಎಲ್ ರಾಹುಲ್ ಅವರೊಂದಿಗೆ ಬ್ಯಾಟಿಂಗ್ ಇನ್ನಿಂಗ್ಸ್ ತೆರೆಯಲು ಸಿದ್ಧರಾಗಿದ್ದಾರೆ. ಶುಭಮನ್ ಗಿಲ್ ಅವರು ತಮ್ಮ 11 ಪಂದ್ಯಗಳ ಟೆಸ್ಟ್ ಕ್ರಿಕೆಟ್‌ನಲ್ಲಿ ಅಸ್ಥಿರವಾದ ಪ್ರದರ್ಶನ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 91 ಮತ್ತು ನಾಲ್ಕು ಅರ್ಧ ಶತಕಗಳೊಂದಿಗೆ 30.47 ಸರಾಸರಿಯನ್ನು ಹೊಂದಿದ್ದಾರೆ.
ಬಾಂಗ್ಲಾದೇಶ ವಿರುದ್ಧ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಶುಭಮನ್ ಗಿಲ್ ಎದುರು ನೋಡುತ್ತಿದ್ದಾರೆ. ಎರಡನೇ ಪಂದ್ಯದ ವೇಳೆಗೆ ರೋಹಿತ್ ಶರ್ಮಾ ಹಿಂದಿರುಗಿದರೆ, ಅವರ ಜೊತೆ ಇನ್ನಿಂಗ್ಸ್ ತೆರೆಯಲು ಕೆಎಲ್ ರಾಹುಲ್‌ಗೆ ಸವಾಲೊಡ್ಡಬೇಕಾದರೆ ದೊಡ್ಡ ಮೊತ್ತ ಗಳಿಸಬೇಕಿದೆ.

ರಿಷಭ್ ಪಂತ್ ಮೊದಲ ಟೆಸ್ಟ್ ಪಂದ್ಯಕ್ಕೆ ವಿಕೆಟ್ ಕೀಪಿಂಗ್
ಇನ್ನು ಫಿಟ್‌ನೆಸ್ ಸಮಸ್ಯೆಯಿಂದಾಗಿ ಮೂರು ಪಂದ್ಯಗಳ ಏಕದಿನ ಸರಣಿಯಿಂದ ವಿಶ್ರಾಂತಿ ಪಡೆದ ನಂತರ ರಿಷಭ್ ಪಂತ್ ಮೊದಲ ಟೆಸ್ಟ್ ಪಂದ್ಯಕ್ಕೆ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿಭಾಯಿಸುವ ನಿರೀಕ್ಷೆಯಿದೆ.
ಆಲ್‌ರೌಂಡರ್ ರವೀಂದ್ರ ಜಡೇಜಾ ಇನ್ನೂ ಚೇತರಿಕೆ ಕಾಣದಿರುವುದರಿಂದ ಬಾಂಗ್ಲಾದೇಶ ವಿರುದ್ಧ ಭಾರತ "ಎ' ತಂಡಕ್ಕಾಗಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಉತ್ತರಪ್ರದೇಶದ ಸೌರಭ್ ಕುಮಾರ್ ಚೊಚ್ಚಲ ಪಂದ್ಯವನ್ನು ಆಡಬಹುದದಾಗಿದೆ.

ವೇಗದ ಬೌಲಿಂಗ್ ವಿಭಾಗದಲ್ಲಿ ಜಯದೇವ್ ಉನದ್ಕತ್‌ಗೆ ಸ್ಥಾನ
ವೇಗದ ಬೌಲಿಂಗ್ ವಿಭಾಗದಲ್ಲಿ ಸೌರಾಷ್ಟ್ರ ನಾಯಕ ಜಯದೇವ್ ಉನದ್ಕತ್ ಕೂಡ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಉನದ್ಕತ್ 12 ವರ್ಷಗಳ ನಂತರ ತಮ್ಮ ಎರಡನೇ ಟೆಸ್ಟ್ ಪಂದ್ಯವನ್ನು ಆಡಲು ಎದುರು ನೋಡುತ್ತಿದ್ದಾರೆ. ಅವರು 2010ರಲ್ಲಿ ಸೆಂಚುರಿಯನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ್ದರು.
ಜಯದೇವ್ ಉನದ್ಕತ್ ಹೊರತಾಗಿ ವೇಗದ ದಾಳಿಯಲ್ಲಿ ಮೊಹಮ್ಮದ್ ಸಿರಾಜ್ ಅವಕಾಶ ಪಡೆಯುವ ನಿರೀಕ್ಷೆಯಿದೆ. ಅವರು ಈ ಹಿಂದೆ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿದ್ದರು ಮತ್ತು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇವರನ್ನು ಹೊರತುಪಡಿಸಿ ಅನುಭವಿ ವೇಗಿ ಉಮೇಶ್ ಯಾದವ್ ಕೂಡ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ಸ್ಪಿನ್ ವಿಭಾಗವನ್ನು ಬಲಪಡಿಸಲು ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಜೊತೆ ಚೈನಾಮನ್ ಬೌಲರ್ ಕುಲದೀಪ್ ಯಾದವ್ ಅವರು ಸ್ಥಾನ ಪಡೆಯುವ ನಿರೀಕ್ಷೆ ಇದೆ.

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತದ ಸಂಭಾವ್ಯ 11ರ ಬಳಗ
ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ (ಉಪನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಸೌರಭ್ ಕುಮಾರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications