IND vs BAN: ಮೊದಲ ಏಕದಿನ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಭಾರತ ಮತ್ತು ಬಾಂಗ್ಲಾದೇಶ ನಡುವೆ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯ ಇಂದು (ಡಿಸೆಂಬರ್ 4, ಭಾನುವಾರ) ಢಾಕಾದ ಷೇರ್ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ಲಿಟನ್ ದಾಸ್ ಮೊದಲ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಟಾಸ್ ಗೆದ್ದ ನಂತರ ಮಾತನಾಡಿದ ಬಾಂಗ್ಲಾದೇಶದ ನಾಯಕ ಲಿಟನ್ ದಾಸ್, ನಾವು ಮೊದಲು ಬೌಲಿಂಗ್ ಮಾಡುತ್ತೇವೆ ಎಂದು ಹೇಳಿದರು. ಪಿಚ್ ಸ್ವಲ್ಪ ಜಿಗುಟಾದಂತೆ ಕಾಣುತ್ತದೆ ಮತ್ತು ಅದು ಮೊದಲ 10 ಓವರ್‌ಗಳಲ್ಲಿ ಅವರಿಗೆ ಸಹಾಯ ಮಾಡಬಹುದು ಎಂದು ವಿವರಿಸಿದರು. ನಮ್ಮ ಬಳಿ ಮೂವರು ಸ್ಪಿನ್ನರ್‌ಗಳು ಮತ್ತು ಇಬ್ಬರು ವೇಗಿಗಳನ್ನು ಆಡಿಸುವುದಾಗಿ ತಿಳಿಸಿದರು.
ಭಾರತ ತಂಡದ ಪರ ಕುಲದೀಪ್ ಸೇನ್ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ವಿಕೆಟ್ ಕೀಪರ್ ಜವಾಬ್ದಾರಿಯನ್ನು ಕೆಎಲ್ ರಾಹುಲ್ ಹೆಗಲಿಗೆ ವಹಿಸಲಾಗಿದೆ.
ಆಲ್‌ರೌಂಡರ್ ಅಕ್ಷರ್ ಪಟೇಲ್ ಮೊದಲ ಪಂದ್ಯದಲ್ಲಿ ಸ್ಥಾನ ವಂಚಿತರಾಗಿದ್ದಾರೆ ಮತ್ತು ರಿಷಭ್ ಪಂತ್ ಅವರನ್ನು ಏಕದಿನ ಸರಣಿಯಿಂದ ಬಿಡುಗಡೆ ಮಾಡಲಾಗಿದ್ದು, ಟೆಸ್ಟ್ ಸರಣಿಯಲ್ಲಿ ತಂಡದಲ್ಲಿ ಇರಲಿದ್ದಾರೆ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
ಬಾಂಗ್ಲಾದೇಶ ಮತ್ತು ಭಾರತ ತಂಡಗಳ ಆಡುವ 11ರ ಬಳಗ
ಭಾರತ : ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್, ಕುಲದೀಪ್ ಸೇನ್ (ಪದಾರ್ಪಣೆ).
ಬಾಂಗ್ಲಾದೇಶ: ಲಿಟನ್ ದಾಸ್ (ನಾಯಕ), ಅನಾಮುಲ್ ಹಕ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್, ಹಸನ್ ಮಹಮ್ಮದ್, ಮುಸ್ತಾಫಿಜುರ್ ರೆಹಮಾನ್, ಎಬಾಡೋತ್ ಹೊಸೈನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications