IND vs BAN: ಬಾಂಗ್ಲಾ ವಿರುದ್ಧದ ಟಿ20 ಸರಣಿಗೆ ಭಾರತ ಮಹಿಳಾ ತಂಡ ಪ್ರಕಟ; ಶ್ರೇಯಾಂಕಾ ಪಾಟೀಲ್‌ಗೆ ಸ್ಥಾನ
ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ 16 ಸದಸ್ಯರ ಬಲಿಷ್ಠ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದ್ದು, ಲೆಗ್-ಸ್ಪಿನ್ನರ್ ಆಶಾ ಸೋಭನಾ ಮತ್ತು ಆಲ್‌ರೌಂಡರ್ ಸಜೀವನ್ ಸಜನಾ ಅವರು ರಾಷ್ಟ್ರೀಯ ತಂಡದಿಂದ ಮೊದಲ ಕರೆ ಪಡೆದರು.
33 ವರ್ಷದ ಆಶಾ ಸೋಭನಾ ಅವರು 2024ರ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ನಲ್ಲಿ ಆರ್‌ಸಿಬಿ ಪರ ಆಡಿದರು ಮತ್ತು ಯುಪಿ ವಾರಿಯರ್ಜ್ ವಿರುದ್ಧ 5 ವಿಕೆಟ್ ಗಳಿಸಿದ ನಂತರ ಗಮನ ಸೆಳೆದರು. 15.14ರ ಸರಾಸರಿಯಲ್ಲಿ 12 ವಿಕೆಟ್‌ಗಳೊಂದಿಗೆ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ್ತಿಯಾಗಿ ಪಂದ್ಯಾವಳಿ ಮುಗಿಸಿದರು.

ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಆಶಾ ಸೋಭನಾ ಅವರು ಮರಿಜಾನ್ನೆ ಕಾಪ್ ಮತ್ತು ಜೆಸ್ ಜೊನಾಸೆನ್ ಅವರ ನಿರ್ಣಾಯಕ ವಿಕೆಟ್ ಪಡೆದರು ಮತ್ತು 3 ಓವರ್‌ಗಳಲ್ಲಿ 14 ರನ್ ನೀಡಿ 2 ವಿಕೆಟ್‌ಗಳ ಅಂಕಿಅಂಶ ಹೊಂದಿದ್ದರು.
ಮತ್ತೊಂದೆಡೆ, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸಿದ ನಂತರ ಸಜೀವನ್ ಸಜನಾ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲುವು ತಂದರು.

ಇನ್ನು ಗಾಯದಿಂದಾಗಿ ಒಂದೆರಡು ಪಂದ್ಯಗಳಿಂದ ಹೊರಗುಳಿದಿದ್ದರೂ, ಒಟ್ಟಾರೆ 13 ವಿಕೆಟ್‌ಗಳೊಂದಿಗೆ 2024ರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಪರ್ಪಲ್ ಕ್ಯಾಪ್ ಗೆದ್ದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಅವರನ್ನು ಬಾಂಗ್ಲಾದೇಶ ವಿರುದ್ಧದ ಸರಣಇಗೆ ಆಯ್ಕೆ ಮಾಡಲಾಗಿದೆ.
21 ವರ್ಷದ ಅಲ್‌ರೌಂಡರ್ ಶ್ರೇಯಾಂಕಾ ಪಾಟೀಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಫೈನಲ್‌ನಲ್ಲಿ 4 ವಿಕೆಟ್‌ಗಳನ್ನು ಪಡೆದ ಹೊರತಾಗಿಯೂ, ಪಂದ್ಯಶ್ರೇಷ್ಠ ಆಟಗಾರ್ತಿ ಪ್ರಶಸ್ತಿಯನ್ನು ಸೋಫಿ ಮೊಲಿನೆಕ್ಸ್ ಗೆದ್ದರು.

ಬಾಂಗ್ಲಾದೇಶದಲ್ಲಿ ನಡೆಯುವ ಸರಣಿಯಲ್ಲಿ ಹರ್ಮನ್‌ಪ್ರೀತ್ ಕೌರ್ ಭಾರತ ಮಹಿಳಾ ತಂಡವನ್ನು ಮುನ್ನಡೆಸಲಿದ್ದರೆ, ಸ್ಮೃತಿ ಮಂಧಾನ ಉಪನಾಯಕಿಯಾಗಿ ಆಯ್ಕೆಯಾಗಿದ್ದಾರೆ.
5 ಪಂದ್ಯಗಳ ಸರಣಿಯು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್‌ಗೆ ಭಾರತ ತಂಡದ ತಯಾರಿಯ ಭಾಗವಾಗಿದೆ. ಏಪ್ರಿಲ್ 28ರಿಂದ ಮೇ 9ರವರೆಗೆ ಸಿಲ್ಹೆಟ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಿ20 ಸರಣಿ ನಡೆಯಲಿದೆ.
ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಭಾರತ ಮಹಿಳಾ ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದಯಾಲನ್ ಹೇಮಲತಾ, ಸಜನಾ ಸಜೀವನ್, ರಿಚಾ ಘೋಷ್ (ವಿಕೆಟ್ ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಾಧಾ ಯಾದವ್, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಅಮನ್‌ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಸೈಕಾ ಇಶಾಕ್, ಆಶಾ ಸೋಭನಾ, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications