ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind vs Ban 2nd Test: ಬಾಂಗ್ಲಾದೇಶದಲ್ಲಿ ಮುಂದುವರಿದ ಕೆಎಲ್ ರಾಹುಲ್ ಕಳಪೆ ಆಟ

Ind vs Ban: KL Rahul bad form continues in Bangladesh out for 2 in 2nd innings

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕನಾಗಿ ಕೆಎಲ್ ರಾಹುಲ್ ಅದ್ಭುತವಾಗಿ ಮುನ್ನಡೆಸಿದ್ದಾರೆ ನಿಜ. ಆದರೆ ಬ್ಯಾಟಿಂಗ್‌ನಲ್ಲಿ ಮಾತ್ರ ರಾಹುಲ್ ಪ್ರದರ್ಶನ ಅತ್ಯಂತ ಕಳಪೆ. ಎರಡನೇ ಟೆಸ್ಟ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಕೇವಲ 2 ರನ್‌ಗಳಿಸಿ ವಿಕೆಟ್ ಕಳೆದುಕೊಂಡಿದ್ದಾರೆ. ಈ ಮೂಲಕ ಬಾಂಗ್ಲಾದೇಶ ನೆಲದಲ್ಲಿ ಭಾರೀ ನಿಒರಾಸೆ ಅನುಭವಿಸಿದ್ದಾರೆ.

ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಕೆಎಲ್ ರಾಹುಲ್ ಟೀಮ್ ಇಂಡಿಯಾವನ್ನು ಮುನ್ನಡೆಸುವ ಜವಾಬ್ಧಾರಿ ವಹಿಸಿಕೊಂಡಿದ್ದಾರೆ. ಆದರೆ ಕೆಎಲ್ ರಾಹುಲ್ ಆಡಿದ ನಾಲ್ಕು ಇನ್ನಿಂಗ್ಸ್‌ನಲ್ಲಿ ಕನಿಷ್ಠ ಒಂದು ಅರ್ಧ ಶತಕ ದಾಖಲಿಸಲು ಕೂಡ ವಿಫಲವಾಗಿದ್ದಾರೆ.

ಐಪಿಎಲ್ 2023: ಮಿನಿ ಹರಾಜಿನ ಬಳಿಕ ಆರ್‌ಸಿಬಿ ಸಂಪೂರ್ಣ ತಂಡ ಹೇಗಿದೆ? ಇಲ್ಲಿದೆ ಮಾಹಿತಿಐಪಿಎಲ್ 2023: ಮಿನಿ ಹರಾಜಿನ ಬಳಿಕ ಆರ್‌ಸಿಬಿ ಸಂಪೂರ್ಣ ತಂಡ ಹೇಗಿದೆ? ಇಲ್ಲಿದೆ ಮಾಹಿತಿ

2ನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾಗೆ ಬಾಂಗ್ಲಾದೇಶ 145 ರನ್‌ಗಳ ಸುಲಭ ಗುರಿ ನಿಗದಿಪಡಿಸಿತು. ಇದನ್ನು ಬೆನ್ನಟ್ಟಿರುವ ಭಾರತ ತಂಡ ದೊಡ್ಡ ಆಘಾತವನ್ನು ಅನುಭವಿಸಿದೆ. ಆರಂಭದಲ್ಲಿಯೇ ನಾಯಕ ಕೆಎಲ್ ರಾಹುಲ್ ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾ ಕುಸಿತ ಕಾಣಲು ಆರಂಭಿಸಿತು. ಕೆಎಲ್ ರಾಹುಲ್ ಬಳಿಕ ಚೇತೇಶ್ವರ್ ಪೂಜಾರ, ಶುಬ್ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಕೂಡ ವಿಕೆಟ್ ಕಳೆದುಕೊಂಡರು. ಈ ಮೂಲಕ ಸುಲಭ ಸವಾಲನ್ನು ಟೀಮ್ ಇಂಡಿಯಾ ದುರ್ಗಮಗೊಳಿಸಿದೆ.

ಎರಡನೇ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾದೇಶದ ಬ್ಯಾಟಿಂಗ್ ವಿಭಾಗ ನೀರಸ ಪ್ರದರ್ಶನ ನೀಡಿದೆ. ಜಾಕಿರ್ ಹಸನ್ ಹಾಗೂ ಲಿಟನ್ ದಾಸ್ ಅರ್ಧ ಶತಕಗಳಿಸುವ ಮೂಲಕ ಬಾಂಗ್ಲಾದೇಶ 200ರ ಗಡಿದಾಟಲು ಕಾರಣವಾದರು. ಇನ್ನು ಕೆಳ ಕ್ರಮಾಂಕದಲ್ಲಿ ನೂರುಲ್ ಹಸನ್ ಹಾಗೂ ಟಸ್ಕಿನ್ ಅಹ್ಮದ್ ಅದ್ಭುತ ಪ್ರದರ್ಶನ ನೀಡಿದ. ಇವರಿಬ್ಬರು ಕೂಡ ತಲಾ 31 ರನ್‌ಗಳ ಕೊಡುಗೆ ನೀಡಿದ್ದು ಬಾಂಗ್ಲಾದೇಶ ಇನ್ನಿಂಗ್ಸ್‌ನ ಪ್ರಮುಖ ಅಂಶವಾಗಿದೆ.

ಟೀಮ್ ಇಂಡಿಯಾದ ಬೌಲಿಂಗ್ ಪಡೆ ಮತ್ತೊಮ್ಮೆ ಸಾಂಘಿಕ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಯಿತು. ಅಕ್ಷರ್ ಪಟೇಲ್ ಮೂರು ವಿಕೆಟ್ ಕಿತ್ತರೆ ಆರ್ ಅಶ್ವಿನ್ ಹಾಗೂ ಮೊಹಮ್ಮದ್ ಸಿರಾಜ್ ಎರಡು ವಿಕೆಟ್ ಪಡೆದರು. ಇನ್ನು ಉಮೇಶ್ ಯಾದವ್ ಹಾಗೂ ಉನಾದ್ಕಟ್ ತಲಾ ಒಂದು ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಬಾಂಗ್ಲಾದೇಶ ತಂಡದ ವಿರುದ್ಧ ಮತ್ತೊಮ್ಮೆ ಹಿನ್ನಡೆ ಅನುಭವಿಸಲು ಕಾರಣವಾದರು.

ಐಪಿಎಲ್ ಹರಾಜು: ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮಿನಿ ಹರಾಜಿನ ಬಳಿಕ ಹೇಗಿದೆ?ಐಪಿಎಲ್ ಹರಾಜು: ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮಿನಿ ಹರಾಜಿನ ಬಳಿಕ ಹೇಗಿದೆ?

ಇತ್ತಂಡಗಳ ಆಡುವ ಬಳಗ ಟೀಮ್ ಇಂಡಿಯಾ
ಕೆಎಲ್ ರಾಹುಲ್(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ರಿಷಬ್ ಪಂತ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಜಾಕಿರ್ ಹಸನ್, ಮೊಮಿನುಲ್ ಹಕ್, ಲಿಟ್ಟನ್ ದಾಸ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್(ನಾಯಕ), ನೂರುಲ್ ಹಸನ್(ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ತಸ್ಕಿನ್ ಅಹ್ಮದ್

Story first published: Sunday, December 25, 2022, 5:55 [IST]
Other articles published on Dec 25, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X