ಮೂರು ಪಂದ್ಯಗಳಲ್ಲಿ ವಿಫಲವಾಗಿದ್ದರೂ ಕಳವಳಗೊಂಡಿರಲಿಲ್ಲ: ಕೆಎಲ್ ರಾಹುಲ್ ಹೇಳಿಕೆ

ಭಾರತ ಹಾಗೂ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದು ಬಾಂಗ್ಲಾದೇಶ ತಂಡಕ್ಕೆ ಸವಾಲಿನ ಗುರಿ ನಿಗದಿಪಡಿಸಿದೆ. ಟೀಮ್ ಇಂಡಿಯಾ ಪರವಾಗಿ ಈ ಪಂದ್ಯದಲ್ಲಿ ಆರಂಭಿಕ ಆಟಗಾರ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಭರ್ಜರಿ ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ.
ಟೀಮ್ ಈ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿದ ಬಳಿಕ ಟೀಮ್ ಇಂಡಿಯಾ ಆರಂಭಿಕ ಆಟಗಾರ ಕೆಎಲ್ ರಾಹುಲ್ ಮಾತನಾಡಿದ್ದಾರೆ. ಮೊದಲ ಮೂರು ಪಂದ್ಯಗಳಲ್ಲಿ ವಿಫಲವಾಗಿದ್ದರು ಕೂಡ ಅದರಿಂದಾಗ ತಾನು ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ ಎಂದಿದ್ದಾರೆ ರಾಹುಲ್. ಪಾಕಿಸ್ತಾನ, ನೆದರ್ಲೆಂಡ್ಸ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಸಂಪೂರ್ಣ ವೈಫಲ್ಯ ಅನುಭವಿಸಿ ಸಾಕಷ್ಟು ಟೀಕೆಗೆ ಒಳಗಾಗಿದ್ದರು.
ಆದರೆ ಟೀಮ್ ಇಂಡಿಯಾದ ಅನುಭವಿ ಆರಂಭಿಕ ಆಟಗಾರನ ಮೇಲೆ ತಂಡದ ಮ್ಯಾನೇಜ್‌ಮೆಂಟ್ ನಂಬಿಕೆಯಿರಿಸಿದ್ದು ಬೆಂಬಲವನ್ನು ನೀಡಿತ್ತು. ತಂಡದ ಕೋಚ್ ರಾಹುಲ್ ದ್ರಾವಿಡ್ ಕೂಡ ಈ ಬಗ್ಗೆ ಮಾತನಾಡಿ ತಾವು ರಾಹುಲ್ ಫಾರ್ಮ್ ಕಂಡುಕೊಳ್ಳಲು ಬೆಂಬಲ ನೀಡುವುದಾಗಿ ಹೇಳಿಕೊಂಡಿದ್ದರು. ಅದಕ್ಕೆ ಪೂರಕವಾಗಿ ಕೆಎಲ್ ರಾಹುಲ್ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿ ತಂಡಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.
31 ಎಸೆತಗಳನ್ನು ಎದುರಿಸಿದ ಟೀಮ್ ಇಂಡಿಯಾ ದಾಂಡಿಗ ನಾಲ್ಕು ಸಿಕ್ಸರ್ ಹಾಗೂ ಮೂರು ಬೌಂಡರಿ ಸಿಡಿಸಿದ್ದಾರೆ. ಅರ್ಧ ಶತಕಗಳಿಸಿದ ಬಳಿಕ ರನ್ ಗತಿ ಮತ್ತಷ್ಟು ಏರಿಸುವ ಭರದಲ್ಲಿ ಶಕೀಬ್ ಅಲ್ ಹಸನ್‌ಗೆ ರಾಹುಲ್ ವಿಕೆಟ್ ಒಪ್ಪಿಸಿ ಹೊರನಡೆದರು. ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿರುವುದು ಖುಷಿ ನೀಡಿದೆ ಎಂದಿದ್ದಾರೆ ಭಾರತದ ಆರಂಭಿಕ ಆಟಗಾರ ಕೆಎಲ್ ರಾಹುಲ್.
"ಇಲ್ಲಿ ಮಿಶ್ರ ಅನುಭವವಾಗುತ್ತಿದೆ. ಆಸ್ಟ್ರೇಲಿಯಾಗೆ ಬರುವುದಕ್ಕೂ ಮುನ್ನ ಕೆಲ ಉತ್ತ ಇನ್ನಿಂಗ್ಸ್‌ಗಳನ್ನು ಆಡಲು ಸಾಧ್ಯವಾಗಿತ್ತು. ಆದರೆ ಮೊದಲ ಮೂರು ಪಂದ್ಯಗಳು ನನ್ನ ಪರವಾಗಿ ಆಗಿರಲಿಲ್ಲ. ನಾನು ಸಾಕಷ್ಟು ಉತ್ತಮ ಪ್ರದರ್ಶನವನ್ನು ಮೊದಲು ನೀಡಿದ್ದೆ. ಹೀಗಾಗಿ ಕಳೆದ ಮೂರು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನಿಡಲು ಸಾಧ್ಯವಾಗದ್ದಕ್ಕೆ ಕಳವಳಗೊಳ್ಳಲಿಲ್ಲ. ಇಂದು ನನ್ನಿಂದ ಉತ್ತಮ ಇನ್ನಿಂಗ್ಸ್ ಬಂದಿರುವುದು ಖುಷಿ ನೀಡಿದೆ" ಎಂದಿದ್ದಾರೆ ಕೆಎಲ್ ರಾಹುಲ್.
ಟೀಮ್ ಇಂಡಿಯಾ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್
ಬೆಂಚ್: ರಿಷಬ್ ಪಂತ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್, ದೀಪಕ್ ಹೂಡಾ
ಬಾಂಗ್ಲಾದೇಶ ಆಡುವ ಬಳಗ: ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್, ಶಾಕಿಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಯಾಸಿರ್ ಅಲಿ, ಮೊಸದ್ದೆಕ್ ಹೊಸೈನ್, ನೂರುಲ್ ಹಸನ್ (ವಿಕೆಟ್ ಕೀಪರ್), ಮುಸ್ತಾಫಿಜುರ್ ರೆಹಮಾನ್, ಹಸನ್ ಮಹ್ಮದ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ
ಬೆಂಚ್: ಮೆಹಿದಿ, ಎಹಮಿನ್‌ಬಾ ಹಸನ್, ಮಿಸ್ಸಾ ಮಿಸ್ , ಸೌಮ್ಯ ಸರ್ಕಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications