IND vs BAN: ಹೊಸ ಮೈಲಿಗಲ್ಲು ತಲುಪಲು ಕುಲ್‌ದೀಪ್ ಯಾದವ್ ತಯಾರಿ
ಸೆಪ್ಟೆಂಬರ್ 19 ರಿಂದ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಆಟಗಾರರು ಹಲವು ದಾಖಲೆಗಳನ್ನು ಸೃಷ್ಟಿಸುವ ಅವಕಾಶವನ್ನು ಹೊಂದಿದ್ದಾರೆ.
ಟೀಮ್ ಇಂಡಿಯಾ ಸ್ಟಾರ್ ಸ್ಪಿನ್ನರ್ ಕುಲ್‌ದೀಪ್ ಯಾದವ್ ಕೂಡ ತಮ್ಮ ದೊಡ್ಡ ದಾಖಲೆ ಸೃಷ್ಟಿಸಲು ಸಜ್ಜಾಗಿದ್ದಾರೆ. ಈ ಚೈನಾಮನ್ ಸ್ಪಿನ್ನರ್ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾಗೆ ಬ್ರಹ್ಮಾಸ್ತ್ರ ಎಂದು ಸಾಬೀತುಪಡಿಸಲಿದ್ದಾರೆ. ಟೆಸ್ಟ್ ಸರಣಿಯಲ್ಲಿ ಅವರು ಏಕಾಂಗಿಯಾಗಿ ಇಡೀ ಬಾಂಗ್ಲಾದೇಶ ತಂಡವನ್ನು ಕಟ್ಟಿ ಹಾಕುವ ಸಾಮರ್ಥ್ಯವನ್ನು ಹೊಂದಿದ್ದಾರೆ.

ಹೊಸ ಮೈಲಿಗಲ್ಲು
ಕುಲದೀಪ್ ಯಾದವ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೊಡ್ಡ ಯಶಸ್ಸನ್ನು ಸಾಧಿಸಲು ಬಹಳ ಉತ್ಸಾಹದಲ್ಲಿದ್ದಾರೆ. ಭಾರತ ಪರ ಅವರು 158 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 294 ವಿಕೆಟ್ ಪಡೆದಿದ್ದಾರೆ. ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಅವರು 6 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರೆ, ಇತಿಹಾಸ ನಿರ್ಮಿಸಲಿದ್ದಾರೆ.
ಕುಲದೀಪ್ ಯಾದವ್ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 300 ವಿಕೆಟ್ ಪೂರೈಸಲಿದ್ದಾರೆ. ಟೆಸ್ಟ್ ಸರಣಿಯ ಎರಡು ಪಂದ್ಯಗಳು ಚೆನ್ನೈ ಮತ್ತು ಕಾನ್ಪುರದಲ್ಲಿ ನಡೆಯಲಿದೆ. ಈ ಎರಡು ಪಿಚ್‌ಗಳು ಸ್ಪಿನ್ನರ್‌ಗಳಿಗೆ ಬೌಲಿಂಗ್ ಮಾಡಲು ನೆರವಾಗಲಿದ್ದು, ಇದರ ಸಹಾಯವನ್ನು ಪಡೆದು ಕುಲ್‌ದೀಪ್ ಯಾದವ್ ದಾಖಲೆ ಬರೆಯುವ ನಿರೀಕ್ಷೆಯಿದೆ.
ಟೆಸ್ಟ್ ಕ್ರಿಕೆಟ್ ಪ್ರದರ್ಶನ
ಚೆನ್ನೈನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಕುಲದೀಪ್ ಯಾದವ್ ಅವರ ತಮ್ಮ ಮಾರಕ ಚೈನಾಮನ್ ಸ್ಪಿನ್ ಬೌಲಿಂಗ್ ಮೂಲಕ ಅದ್ಭುತ ಪ್ರದರ್ಶನ ನೀಡುವ ಸಾಧ್ಯತೆಯಿದೆ. ಅವರು ಟೀಮ್ ಇಂಡಿಯಾದ ದೊಡ್ಡ ಮ್ಯಾಚ್ ವಿನ್ನರ್. ಇದುವೆರಗೆ ಭಾರತದ ಪರ 12 ಟೆಸ್ಟ್ ಪಂದ್ಯಗಳಲ್ಲಿ 53 ವಿಕೆಟ್ ಪಡೆದಿದ್ದಾರೆ. 4 ಬಾರಿ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಇದಲ್ಲದೇ ಕುಲದೀಪ್ ಯಾದವ್ ಏಕದಿನ ಕ್ರಿಕೆಟ್‌ನಲ್ಲಿ 106 ಪಂದ್ಯಗಳಲ್ಲಿ 172 ವಿಕೆಟ್ ಉರುಳಿಸಿದ್ದು, ಇಲ್ಲಿಯೂ ಎರಡು ಬಾರಿ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 2 ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆದ ದಾಖಲೆಯನ್ನು ಮಾಡಿದ್ದಾರೆ. ಇನ್ನು 40 ಟಿ20 ಪಂದ್ಯಗಳನ್ನಾಡಿರುವ ಅವರು 69 ವಿಕೆಟ್ ಕಬಳಿಸಿದ್ದು, ಟಿ20 ಕ್ರಿಕೆಟ್‌ನಲ್ಲಿಯೂ ಎರಡು ಬಾರಿ 5 ವಿಕೆಟ್ ಪಡೆದು ಮಿಂಚಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications