ಭಾರತ vs ಬಾಂಗ್ಲಾದೇಶ: ಬೌಲಿಂಗ್ ಮಧ್ಯೆ ಮೈದಾನ ತೊರೆದ ಆಟಗಾರ: ಟೀಮ್ ಇಂಡಿಯಾಗೆ ಗಾಯದ ಆತಂಕ
ಪುಣೆಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾದೇಶ ಅದ್ಭುತ ಆರಂಭ ಪಡೆದುಕೊಂಡಿದೆ. ಆರಂಭಿಕ ಆಟಗಾರರು ಭಾರತದ ಬೌಲಿಂಗ್ ದಾಳಿಯ ವಿರುದ್ಧ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಟೀಮ್ ಇಂಡಿಯಾದ ಬೌಲರ್‌ಗಳು ಆರಂಭದಲ್ಲಿಯೇ ಬಾಂಗ್ಲಾ ವಿಕೆಟ್ ಪಡೆಯುವಲ್ಲಿ ವಿಫಲವಾಗಿದ್ದಾರೆ. ಇದೇ ಸಂದರ್ಭದಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಗಾಯದಿಂದಾಗಿ ಮೈದಾನ ತೊರೆದಿದ್ದು ಗಾಯದ ಆತಂಕ ಮೂಡಿಸಿದೆ.
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರೇ ಈ ಪಂದ್ಯದಲ್ಲಿ ಗಾಯದಿಂದಾಗಿ ಮೈದಾನ ತೊರೆದ ಆಟಗಾರನಾಗಿದ್ದಾರೆ. ಬೌಲಿಂಗ್ ದಾಳಿ ನಡೆಸುತ್ತಿದ್ದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ಮೊಣಕಾಲಿನ ನೋವಿಗೆ ಒಳಗಾದರು. ಬಳಿಕ ಓವರ್ ಪೂರ್ಣಗೊಳಿಸದೆಯೇ ಹಾರ್ದಿಕ್ ಪಾಂಡ್ಯ ಫೆವಿಲಿಯನ್‌ಗೆ ವಾಪಾಸಾಗಿದ್ದಾರೆ.

ಹಾರ್ದಿಕ್ ಪಾಂಡ್ಯ ಈ ಪಂದ್ಯದ 9ನೇ ಓವರ್ ಬೌಲಿಂಗ್ ಮಾಡುತ್ತಿದ್ದರು. ಹಾರ್ದಿಕ್ ಪಾಂಡ್ಯ ಅವರ ಮೊದಲ ಓವರ್ ಕೂಡ ಇದೇ ಆಗಿತ್ತು. ಮೊದಲ ಎಸೆತದಲ್ಲಿ ಯಾವುದೇ ರನ್ ಬಾರದಿದ್ದರೂ ನಂತರದ ಎರಡು ಎಸೆತಗಳಲ್ಲಿ ಲಿಟನ್ ದಾಸ್ ಸತತ ಎರಡು ಬೌಂಡರಿ ಬಾರಿಸಿದ್ದಾರೆ. ಆದರೆ ಈ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ಮೊನಕಾಲಿನಲ್ಲಿ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಇಸಿಯೋ ಮೈದಾನಕ್ಕೆ ಆಗಮಿಸಿ ಪರೀಕ್ಷಿಸಿದರು. ನಂತರ ಹೆಚ್ಚಿ ಚಿಕಿತ್ಸೆಗಾಗಿ ಹಾರ್ದಿಕ್ ಪಾಂಡ್ಯ ಮೈದಾನ ತೊರೆದಿದ್ದಾರೆ.
ಇನ್ನು ಹಾರ್ದಿಕ್ ಪಾಂಡ್ಯ ಗಾಯದಿಂದಾಗಿ ಓವರ್ ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ಈ ಓವರ್‌ನ ಉಳಿದ ಮೂರು ಎಸೆತಗಳನ್ನು ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿದ್ದಾರೆ. ವಿರಾಟ್ ಕೊಹ್ಲಿ ಎಸೆತ ಅಂತಿಮ ಮೂರು ಎಸೆತಗಳಲ್ಲಿ ಕೆವಲ ಎರಡು ರನ್‌ಗಳನ್ನು ಮಾತ್ರವೇ ಬಿಟ್ಟುಟ್ಟುಕೊಟ್ಟರು.
ಇನ್ನು ಹಾರ್ದಿಕ್ ಪಾಂಡ್ಯ ಅವರ ಈ ಗಾಯದ ತೀವ್ರತೆಯ ಬಗ್ಗೆ ಇನ್ನಷ್ಟೇ ಸ್ಪಷ್ಟತೆ ದೊರೆಯಬೇಕಿದೆ. ಹಾರ್ದಿಕ್ ಪಾಂಡ್ಯ ಆಲ್‌ರೌಂಡರ್ ಆಗಿದ್ದು ವೇಗದ ಬೌಲಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ಅದ್ಭುತವಾಗಿ ಕೊಡುಗೆ ನೀಡುವ ಸಾಮರ್ಥ್ಯವಿರುವ ಆಟಗಾರ. ಆದರೆ ಇಂಥಾ ಆಟಗಾರ ಗಾಯಗೊಂಡಿರುವುದು ತಂಡದ ಸಂಯೋಜನೆಯ ಮೇಲೆ ಹೆಚ್ಚಿನ ಒತ್ತಡ ಬೀರಲಿದೆ.
ಇನ್ನು ಈ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅಲ್ಲದೆ ಉತ್ತಮ ಆರಂಭವೂ ಪಡೆಯುವ ಮೂಲಕ ದೊಡ್ಡ ಮೊತ್ತದತ್ತ ಹೆಜ್ಜೆಯಿಟ್ಟಿದೆ ಬಾಂಗ್ಲಾದೇಶ. ಮೊದಲ 15 ಓವರ್‌ಗಲ್ಲಿ ಭಾರತ ಕೇವಲ ಒಂದು ವಿಕೆಟ್ ಪಡೆಯಲು ಮಾತ್ರವೇ ಯಶಸ್ವಿಯಾಗಿದೆ.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬೆಂಚ್: ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್
ಬಾಂಗ್ಲಾದೇಶ ಆಡುವ ಬಳಗ: ಲಿಟನ್ ದಾಸ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೋ (ನಾಯಕ), ಮೆಹಿದಿ ಹಸನ್ ಮಿರಾಜ್, ತೌಹಿದ್ ಹೃದಯ್, ಮುಶ್ಫಿಕುರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ನಸುಮ್ ಅಹ್ಮದ್, ಹಸನ್ ಮಹಮೂದ್, ಮುಸ್ತಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ
ಬೆಂಚ್: ಶಕೀಬ್ ಅಲ್ ಹಸನ್, ತಂಜಿಮ್ ಹಸನ್ ಸಾಕಿಬ್, ಮಹೇದಿ ಹಸನ್, ತಸ್ಕಿನ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications