ಮೊದಲ ಟೆಸ್ಟ್‌ಗೆ ಹೇಗಿರಲಿದೆ ಭಾರತ ಪ್ಲೇಯಿಂಗ್ ಇಲೆವೆನ್? ಯಾರಿಗೆಲ್ಲಾ ಸಿಗುತ್ತೇ ಚಾನ್ಸ್?
ಇದೇ 19 ರಂದು ನಡೆಯಲಿರುವ ಭಾರತ ಹಾಗೂ ಬಾಂಗ್ಲಾದೇಶದ ವಿರುದ್ಧ ಟೆಸ್ಟ್‌ಗೆ ತಂಡವನ್ನು ಪ್ರಕಟಿಸಲಾಗಿದ್ದು, ಹಲವು ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಈ ಯುವ ಆಟಗಾರರು ದೇಶೀಯ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಅವರಿಗೆ ಬಾಂಗ್ಲಾದೇಶದ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲು ಅವಕಾಶ ಸಿಗುವುದು ಬಹುತೇಕ ಅನುಮಾನವಾಗಿದೆ.
ಮೊದಲ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಆಯ್ಕೆ ಸಮಿತಿ 16 ಆಟಗಾರರ ತಂಡವನ್ನು ಪ್ರಕಟಿಸಿದೆ. ಎಡಗೈ ವೇಗದ ಬೌಲರ್ ಯಶ್ ದಯಾಳ್ ಚೊಚ್ಚಲ ಬಾರಿಗೆ ಟೀಂ ಇಂಡಿಯಾಕ್ಕೆ ಸೇರ್ಪಡೆಯಾಗಿದ್ದಾರೆ. ಕೆಎಲ್ ರಾಹುಲ್ ಕೂಡ ಸುದೀರ್ಘ ಸಮಯದ ನಂತರ ಟೆಸ್ಟ್ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಕೆಎಲ್ ರಾಹುಲ್ ಅವರಿಗೆ ಟೆಸ್ಟ್‌ನಲ್ಲಿ ಹೊಸ ಜವಾಬ್ದಾರಿಯನ್ನು ನೀಡಿ ಕಣಕ್ಕೆ ಇಳಿಸುವ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿದೆ.

ಸೀಮಿತ ಓವರ್‌ಗಳ ಪಂದ್ಯಗಳಲ್ಲಿ ಐದನೇ ಕ್ರಮಾಂಕದಲ್ಲಿ ಸ್ಥಿರ ಪ್ರದರ್ಶನ ನೀಡಿ ಭರವಸೆ ಮೂಡಿಸಿದ್ದ ಕನ್ನಡಿಗ ಕೆಎಲ್ ರಾಹುಲ್ ಟೆಸ್ಟ್ ಕ್ರಿಕೆಟ್‌ನಲ್ಲೂ ಇದೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಹುದು. ಇನ್ನು ಗಾಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಭರ್ಜರಿ ಕಮ್ ಬ್ಯಾಕ್ ಮಾಡಿರುವ ರಿಷಭ್ ಪಂತ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನವನ್ನು ಪಡೆಯುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಎರಡನೇ ವಿಕೆಟ್ ಕೀಪರ್ ಧ್ರುವ್ ಜುರೇಲ್ ಬೆಂಚ್ ಕಾಯಬೇಕಾಗುತ್ತದೆ.
ಹೇಗಿರಲಿದೆ ಪ್ಲೇಯಿಂಗ್ ಇಲೆವೆನ್
ಬಾಂಗ್ಲಾದೇಶದ ವಿರುದ್ಧ ಟೀಮ್ ಇಂಡಿಯಾ ತನ್ನ ಹಳೆಯ ಗೇಮ್ ಪ್ಲ್ಯಾನ್ ಮೂಲಕವೇ ಕಣಕ್ಕೆ ಇಳಿಯಬಹುದಾಗಿದೆ. ಅಂದರೆ ಆರಂಭಿಕರಾಗಿ ನಾಯಕ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸುವುದು ಖಚಿತ. ಇನ್ನು ಮೂರನೇ ಕ್ರಮಾಂಕದಲ್ಲಿ ಶುಭಮನ್ ಗಿಲ್ ಬ್ಯಾಟ್ ಮಾಡಿದರೆ, ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಮಾಡುವುದು ಫಿಕ್ಸ್.
ಮೂವರು ಸ್ಪಿನ್ ಬೌಲರ್‌ಗಳಿಗೆ ಅವಕಾಶ
ಇನ್ನು ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ನಾಲ್ವರು ಸ್ಪಿನ್ ಬೌಲರ್‌ಗಳಲ್ಲಿ ಮೊದಲ ಟೆಸ್ಟ್ ಪಂದ್ಯದಲ್ಲಿ ಮೂವರಿಗೆ ಅವಕಾಶ ಸಿಗುವುದು ಖಚಿತ ಎಂದು ಹೇಳಲಾಗುತ್ತಿದೆ. ಚೆನ್ನೈನ ಪಿಚ್ ಸ್ಪಿನ್ ಬೌಲರ್‌ಗಳಿಗೆ ನೆರವಾಗಲಿದ್ದು, ಈ ಪಿಚ್‌ನ ಸಂಪೂರ್ಣ ಲಾಭವನ್ನು ಪಡೆಯಲು ಭಾರತ ಪ್ಲ್ಯಾನ್ ಮಾಡಿದ್ದಾರೆ. ಅದರಂತೆ ಚೆನ್ನೈ ಹುಡುಗ ಆರ್ ಅಶ್ವಿನ್ ಕಣಕ್ಕೆ ಇಳಿಯುವುದು ಫಿಕ್ಸ್. ಇನ್ನು ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಅವರಿಗೆ ಅವಕಾಶ ಸಿಗುವು ಸಾಧ್ಯತೆ ಇದೆ.

ವೇಗದ ಬೌಲರ್ ರೂಪದಲ್ಲಿ ಜಸ್ಪ್ರಿತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಅವರಿಗೆ ಅವಕಾಶ ಕಲ್ಪಿಸಲಾಗುವುದು. ಇನ್ನು ಯಶ್ ದಯಾಳ್ ಅವರು ಇನ್ನು ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲು ಕಾಯಲೇ ಬೇಕು.
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications