ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs BAN 1st ODI: ಮೊದಲ ಪಂದ್ಯಕ್ಕೆ ಮಳೆ ಭೀತಿ?; ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ ಬಳಗ

IND vs BAN: Rain Threat For 1st ODI Match?; Fantasy Dream Team And Teams Full Squad

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯ ಇಂದು (ಡಿಸೆಂಬರ್ 4, ಭಾನುವಾರ) ಢಾಕಾದ ಷೇರ್ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರೋಚಕ ಕದನಕ್ಕಾಗಿ ಎರಡೂ ದೇಶಗಳ ಅಭಿಮಾನಿಗಳು ಕಾಯುತ್ತಿದ್ದಾರೆ.

ಭಾರತ ತಂಡವನ್ನು ಮುನ್ನಡೆಸಲು ರೋಹಿತ್ ಶರ್ಮಾ ಮರಳಿದ್ದಾರೆ. 2022ರ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ಸೋಲಿನ ನಂತರ ರೋಹಿತ್ ಶರ್ಮಾ ಸೇರಿದಂತೆ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ವಿಶ್ರಾಂತಿ ಪಡೆದಿದ್ದರು. ಈ ಅವಧಿಯಲ್ಲಿ ರೋಹಿತ್ ವಿಶ್ರಾಂತಿ ಪಡೆಯದೆ, ಜಿಮ್‌ನಲ್ಲಿ ಬೆವರು ಸುರಿಸಿರುವುದು ಕಂಡುಬಂದಿದೆ.

IND vs BAN: ಒಂದು ಐಪಿಎಲ್‌ನಲ್ಲಿ ಮಿಂಚಿದ ಮಾತ್ರಕ್ಕೆ ಭಾರತದ ಕ್ಯಾಪ್ ನೀಡುವ ಅಗತ್ಯವಿಲ್ಲ; ಮಾಜಿ ಕ್ರಿಕೆಟಿಗ

ತವರಿನಲ್ಲಿ ಬಾಂಗ್ಲಾದೇಶ ತಂಡವನ್ನು ಅಷ್ಟು ಸುಲಭವಾಗಿ ಸೋಲಿಸಲು ಸಾಧ್ಯವಿಲ್ಲ. ವಿಶ್ವದ ಅತ್ಯುತ್ತಮ ತಂಡವನ್ನು ಸೋಲಿಸುವ ಶಕ್ತಿ ಮತ್ತು ಸಾಮರ್ಥ್ಯವನ್ನು ಅವರು ಹೊಂದಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಏಳು ವರ್ಷಗಳ ಹಿಂದೆ ಎಂಎಸ್ ಧೋನಿ ನಾಯಕತ್ವದ ಭಾರತ ತಂಡವನ್ನು 2-1 ಅಂತರದಲ್ಲಿ ಸೋಲಿಸಿ ಏಕದಿನ ಸರಣಿ ಗೆದ್ದಿತ್ತು.

ಭುಜದ ಗಾಯದಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ

ಭುಜದ ಗಾಯದಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ

ನಾಯಕ ತಮೀಮ್ ಇಕ್ಬಾಲ್ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಲಿಟ್ಟನ್ ದಾಸ್ ಬಾಂಗ್ಲಾದೇಶದ ಏಕದಿನ ತಂಡವನ್ನು ಈ ಸರಣಿಯಲ್ಲಿ ಮುನ್ನಡೆಸಲಿದ್ದಾರೆ. ಇದೇ ವೇಳೆ ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ ಮತ್ತು ಮುಸ್ತಫಿಜುರ್ ರಹಮಾನ್ ಅವರ ಪಾತ್ರವು ಪ್ರಮುಖವಾಗಿದೆ. ಟಿ20 ವಿಶ್ವಕಪ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದ ವೇಗಿ ತಸ್ಕಿನ್ ಅಹ್ಮದ್ ಅವರು ತಂಡದಲ್ಲಿಲ್ಲದಿರುವುದು ಬಾಂಗ್ಲಾದೇಶಕ್ಕೆ ಅಲ್ಪ ಹಿನ್ನಡೆಯಾಗಿದೆ.

ಇನ್ನು ಭಾರತ ತಂಡವೂ ಅನುಭವಿ ವೇಗಿ ಮೊಹಮ್ಮದ್ ಶಮಿ ಭುಜದ ಗಾಯದಿಂದ ಹೊರಗುಳಿದಿರುವುದು, ಕೊಂಚ ಹಿನ್ನಡೆ ತಂದುಕೊಟ್ಟಿದೆ. ಅವರ ಬದಲಾಗಿ ಇತ್ತೀಚೆಗಷ್ಟೇ ನ್ಯೂಜಿಲೆಂಡ್‌ನಲ್ಲಿ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಉಮ್ರಾನ್ ಮಲಿಕ್ ಅವರಿಗೆ ಮತ್ತೊಮ್ಮೆ ಸ್ಥಾನ ನೀಡಲಾಗಿದೆ.

ಢಾಕಾದಲ್ಲಿನ ಹವಾಮಾನ ವರದಿ ಹೇಗಿದೆ?

ಢಾಕಾದಲ್ಲಿನ ಹವಾಮಾನ ವರದಿ ಹೇಗಿದೆ?

ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಈಗ ಚಳಿಗಾಲದ ಸಮಯ. ಹಗಲಿನಲ್ಲಿ ಸ್ವಲ್ಪ ಮಂಜು ಕವಿದಿರುತ್ತದೆ. ಹಾಗಂತ ಪಂದ್ಯದ ಮೇಲೆ ಮಳೆ ಪರಿಣಾಮ ಬೀರಲಿದೆಯೇ? ಎಂದು ಕೇಳಿದರೆ ಇಲ್ಲವೆನ್ನಬಹುದು.

ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಬಾಂಗ್ಲಾದೇಶ ಮೊದಲ ಏಕದಿನ ಪಂದ್ಯದ ಸಮಯದಲ್ಲಿ ಮಳೆ ಬೀಳುವ ಸಾಧ್ಯತೆ ಕೇವಲ 2 ಪ್ರತಿಶತದಷ್ಟು ಮಾತ್ರ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ 100 ಓವರ್‌ಗಳ ಪೂರ್ಣ ಪಂದ್ಯವನ್ನು ಯಾವುದೇ ಮಳೆಯ ಅಡಚಣೆಯಿಲ್ಲದೆ ಆಡುವ ನಿರೀಕ್ಷೆಯಿದೆ.

ಭಾರತ vs ಬಾಂಗ್ಲಾದೇಶ ಫ್ಯಾಂಟಸಿ ಡ್ರೀಮ್ ಟೀಂ

ಭಾರತ vs ಬಾಂಗ್ಲಾದೇಶ ಫ್ಯಾಂಟಸಿ ಡ್ರೀಮ್ ಟೀಂ

ವಿಕೆಟ್‌ಕೀಪರ್‌ಗಳು: ರಿಷಭ್ ಪಂತ್, ಮುಶ್ಫಿಕರ್ ರಹೀಮ್

ಬ್ಯಾಟ್ಸ್‌ಮನ್‌ಗಳು: ಶಿಖರ್ ಧವನ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ತಮೀಮ್ ಇಕ್ಬಾಲ್

ಆಲ್‌ರೌಂಡರ್‌ಗಳು: ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್

ಬೌಲರ್‌ಗಳು: ಮೊಹಮ್ಮದ್ ಸಿರಾಜ್, ಮುಸ್ತಾಫಿಜುರ್ ರೆಹಮಾನ್, ಎಬಾಡೋತ್ ಹೊಸೈನ್

ಬಾಂಗ್ಲಾದೇಶ ಮತ್ತು ಭಾರತ ತಂಡಗಳ ಸಂಭಾವ್ಯ ಆಡುವ ಬಳಗ

ಬಾಂಗ್ಲಾದೇಶ ಮತ್ತು ಭಾರತ ತಂಡಗಳ ಸಂಭಾವ್ಯ ಆಡುವ ಬಳಗ

ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಲಿಟನ್ ದಾಸ್ (ನಾಯಕ), ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ಮುಸ್ತಫಿಜುರ್ ರಹಮಾನ್.

ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್.

Story first published: Sunday, December 4, 2022, 10:17 [IST]
Other articles published on Dec 4, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X