ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs BAN: ಸರಣಿ ಸೋಲಿನ ನಡುವೆಯೂ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ರೋಹಿತ್ ಶರ್ಮಾ

IND vs BAN: Rohit Sharma Becomes 1st Indian Batsman To Hit 500 Sixes In International Cricket History

ಬುಧವಾರ, ಡಿಸೆಂಬರ್ 7ರಂದು ಢಾಕಾದ ಶೇರ್-ಎ-ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಮೆಹಿದಿ ಹಸನ್ ಮಿರಾಜ್ ಅವರ ಸ್ಮರಣೀಯ ಶತಕದ ಸಹಾಯದಿಂದ ಬಾಂಗ್ಲಾದೇಶ ತಂಡವು ಪ್ರವಾಸಿ ಭಾರತ ತಂಡದ ವಿರುದ್ಧ 5 ರನ್‌ಗಳ ಅದ್ಭುತ ಗೆಲುವು ಸಾಧಿಸುವುದರೊಂದಿಗೆ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿತು.

ಬಾಂಗ್ಲಾದೇಶ ನೆಲದಲ್ಲಿ ಭಾರತದ ಕಳಪೆ ಬ್ಯಾಟಿಂಗ್ ಪ್ರದರ್ಶನ ಮುಂದುವರೆಯಿತು ಮತ್ತು ಏಳು ವರ್ಷಗಳ ನಂತರವೂ ಏಕದಿನ ಸರಣಿ ಸೋತು ಮುಖಭಂಗ ಅನುಭವಿಸಿತು.

IND vs BAN: ಬಾಂಗ್ಲಾ ವಿರುದ್ಧ ಏಕದಿನ ಸರಣಿ ಸೋಲು; ಧೋನಿಯ ಅನಗತ್ಯ ದಾಖಲೆ ಸರಿಗಟ್ಟಿದ ರೋಹಿತ್IND vs BAN: ಬಾಂಗ್ಲಾ ವಿರುದ್ಧ ಏಕದಿನ ಸರಣಿ ಸೋಲು; ಧೋನಿಯ ಅನಗತ್ಯ ದಾಖಲೆ ಸರಿಗಟ್ಟಿದ ರೋಹಿತ್

ಇದೆಲ್ಲದರ ನಡುವೆ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ ಇತಿಹಾಸದಲ್ಲಿ 500 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಆಗಿ ದಾಖಲೆ ಬರೆದರು.

ರೋಹಿತ್ ಶರ್ಮಾ ತಮ್ಮ 428ನೇ ಪಂದ್ಯದಲ್ಲಿ ಈ ಬೃಹತ್ ಮೈಲಿಗಲ್ಲು ತಲುಪಿದ್ದು, 447ನೇ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಇದೇ ಸಾಧನೆ ಮಾಡಿದ್ದ ವೆಸ್ಟ್ ಇಂಡೀಸ್‌ನ ದೈತ್ಯ ಕ್ರಿಸ್ ಗೇಲ್ ಅವರ ದಾಖಲೆಯನ್ನು ರೋಹಿತ್ ಶರ್ಮಾ ಮುರಿದಿದ್ದಾರೆ. ಗಮನಾರ್ಹ ಅಂಶವೆಂದರೆ, ಟಿ20 ಸ್ವರೂಪದಲ್ಲಿಯೂ ರೋಹಿತ್ ಶರ್ಮಾ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಆಗಿದ್ದಾರೆ.

ರೋಹಿತ್ ಶರ್ಮಾ 272 ರನ್ ಚೇಸ್‌ನಲ್ಲಿ ಪ್ರಬಲ ಹೋರಾಟ

ರೋಹಿತ್ ಶರ್ಮಾ 272 ರನ್ ಚೇಸ್‌ನಲ್ಲಿ ಪ್ರಬಲ ಹೋರಾಟ

ಫೀಲ್ಡಿಂಗ್ ಮಾಡುತ್ತಿದ್ದಾಗ ಕೈಗೆ ಗಾಯವಾದ ನಂತರ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ರೋಹಿತ್ ಶರ್ಮಾ 272 ರನ್ ಚೇಸ್‌ನಲ್ಲಿ ಪ್ರಬಲ ಹೋರಾಟ ನಡೆಸಿದರು. ಮೂರು ಬೌಂಡರಿ ಮತ್ತು ಐದು ಸಿಕ್ಸರ್‌ಗಳೊಂದಿಗೆ 28 ಎಸೆತಗಳಲ್ಲಿ ಅಜೇಯ 51 ರನ್ ಗಳಿಸಿದರು.

ಭಾರತ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿದ್ದ ರೋಹಿತ್ ಶರ್ಮಾ ಕ್ರೀಸ್‌ನಲ್ಲಿದ್ದರೂ ಗೆಲುವಿನ ಗೆರೆಯನ್ನು ಮುಟ್ಟಿಸಲು ಸಾಧ್ಯವಾಗಲಿಲ್ಲ. ಮೊಹಮ್ಮದ್ ಸಿರಾಜ್ 48ನೇ ಓವರ್‌ನಲ್ಲಿ ಒಂದೂ ರನ್ ಗಳಿಸಲು ವಿಫಲರಾಗಿದ್ದು, ಭಾರತದ ಗೆಲುವಿಗೆ ಮುಳುವಾಯಿತು.

359 ಸಿಕ್ಸರ್ ಬಾರಿಸಿರುವ ಮಾಜಿ ನಾಯಕ ಎಂಎಸ್ ಧೋನಿ

359 ಸಿಕ್ಸರ್ ಬಾರಿಸಿರುವ ಮಾಜಿ ನಾಯಕ ಎಂಎಸ್ ಧೋನಿ

ಭಾರತೀಯ ನಾಯಕ ರೋಹಿತ್ ಶರ್ಮಾ ಅವರು 500 ಅಂತಾರಾಷ್ಟ್ರೀಯ ಸಿಕ್ಸರ್‌ಗಳನ್ನು ಬಾರಿಸಿದ್ದರೆ, ವೆಸ್ಟ್ ಇಂಡೀಸ್ ದಂತಕಥೆ ಕ್ರಿಸ್ ಗೇಲ್ 533 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಆದರೆ ಯಾವುದೇ ಭಾರತೀಯ ಬ್ಯಾಟರ್ 400ಕ್ಕಿಂತ ಹೆಚ್ಚು ಸಿಕ್ಸರ್‌ಗಳನ್ನು ಹೊಂದಿಲ್ಲ. 359 ಸಿಕ್ಸರ್‌ಗಳೊಂದಿಗೆ ಮಾಜಿ ನಾಯಕ ಎಂಎಸ್ ಧೋನಿ ಭಾರತೀಯ ಆಟಗಾರರ ಪೈಕಿ ರೋಹಿತ್ ಶರ್ಮಾ ನಂತರದ ಸ್ಥಾನದಲ್ಲಿದ್ದಾರೆ.

ಪಾಕಿಸ್ತಾನದ ಶಾಹಿದ್ ಅಫ್ರಿದಿ (476), ನ್ಯೂಜಿಲೆಂಡ್‌ನ ಬ್ರೆಂಡನ್ ಮೆಕಲಮ್ (398), ಮಾರ್ಟಿನ್ ಗಪ್ಟಿಲ್ (383) ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ ಕ್ರಮವಾಗಿ ಮೂರು, ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.

ಕೊನೆಯ ಎರಡು ಎಸೆತಗಳಲ್ಲಿ 12 ರನ್ ಗಳಿಸಬೇಕಿದ್ದ ಭಾರತ

ಕೊನೆಯ ಎರಡು ಎಸೆತಗಳಲ್ಲಿ 12 ರನ್ ಗಳಿಸಬೇಕಿದ್ದ ಭಾರತ

272 ರನ್‌ಗಳ ಗುರಿ ಬೆನ್ನತ್ತಿದ ಭಾರತ ಪ್ರತ್ಯುತ್ತರವಾಗಿ ತಮ್ಮ ಅಗ್ರ ಬ್ಯಾಟರ್‌ಗಳಾದ ಶಿಖರ್ ಧವನ್, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಕಳಪೆಯಾಗಿ ಔಟಾದಾಗ 65/4 ಇತ್ತು. ನಂತರ ಶ್ರೇಯಸ್ ಅಯ್ಯರ್ ಮತ್ತು ಅಕ್ಷರ್ ಪಟೇಲ್‌ ಬಾಂಗ್ಲಾ ಬೌಲರ್‌ಗಳಿಗೆ ಪ್ರತಿರೋಧ ಒಡ್ಡಿದರು.

ಬಾಂಗ್ಲಾದೇಶದ ಸ್ಪಿನ್ ದಾಳಿಯ ವಿರುದ್ಧ ಶ್ರೇಯಸ್ ಅಯ್ಯರ್ 82 ರನ್ ಗಳಿಸಿ ಭಾರತದ ಅತ್ಯುತ್ತಮ ಬ್ಯಾಟರ್ ಆಗಿ ಕಂಡುಬಂದರು. ಕೊನೆಯಲ್ಲಿ ರೋಹಿತ್ ಶರ್ಮಾ ಮೈದಾನಕ್ಕೆ ಪ್ರವೇಶಿಸುವ ಮೊದಲು ಉತ್ತಮ ಬ್ಯಾಟಿಂಗ್ ಮಾಡಿ ಔಟಾದರು.

ಅಂತಿಮ ಓವರ್‌ಗಳಲ್ಲಿ ರೋಹಿತ್ ಶರ್ಮಾ ಕೆಲವು ಬೌಂಡರಿ ಮತ್ತು ಸಿಕ್ಸರ್‌ಗಳ ಮೂಲಕ ಭಾರತದ ಗೆಲುವಿನ ಆಸೆಯನ್ನು ಚಿಗುರೊಡೆಸಿದ್ದರು. ಕೊನೆಯ ಎರಡು ಎಸೆತಗಳಲ್ಲಿ 12 ರನ್ ಗಳಿಸಬೇಕಿದ್ದಾಗ 5ನೆ ಎಸೆತದಲ್ಲಿ ಒಂದು ಸಿಕ್ಸರ್ ಬಾರಿಸಿದರು, ಆದರೆ ಕೊನೆಯ ಎಸೆತದಲ್ಲಿ ಯಾವುದೇ ರನ್ ಗಳಿಸಲು ವಿಫರಾದ ನಂತರ, ಆತಿಥೇಯ ಬಾಂಗ್ಲಾದೇಶ ಐದು ರನ್‌ಗಳಿಂದ ಗೆದ್ದು ಬೀಗಿತು.

Story first published: Wednesday, December 7, 2022, 22:47 [IST]
Other articles published on Dec 7, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X