IND vs BAN 1st ODI : ಭಾರತ ವಿರುದ್ಧ ಈ ಸಾಧನೆ ಮಾಡಿದ ಬಾಂಗ್ಲಾದ ಮೊದಲ ಸ್ಪಿನ್ನರ್ ಶಕೀಬ್ ಅಲ್ ಹಸನ್

ಢಾಕಾದ ಷೇರ್ ಬಾಂಗ್ಲಾ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಕಡಿಮೆ ಮೊತ್ತಕ್ಕೆ ಆಲೌಟ್ ಆಯಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಪೂರ್ಣ 50 ಓವರ್‌ಗಳ ಬ್ಯಾಟಿಂಗ್ ಮಾಡಲು ವಿಫಲವಾಗಿ, 41.2 ಓವರ್‌ಗಳಲ್ಲಿ 186 ರನ್‌ಗಳಿಗೆ ಸರ್ವಪತನ ಕಂಡಿತು. ಉಪನಾಯಕ ಕೆಎಲ್ ರಾಹುಲ್ ಮಾತ್ರ ಏಕಾಂಗಿಯಾಗಿ ಬ್ಯಾಟಿಂಗ್ ಮಾಡಿದರು.
ಇನ್ನು ಈ ಪಂದ್ಯದಲ್ಲಿ ಬಾಂಗ್ಲಾದೇಶದ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಭಾರತದ ವಿರುದ್ಧ ಏಕದಿನ ಪಂದ್ಯಗಳಲ್ಲಿ ಐದು ವಿಕೆಟ್ ಗೊಂಚಲು ಸಾಧನೆ ಮಾಡಿದರು. ಈ ಮೂಲಕ ಐದು ವಿಕೆಟ್ ಪಡೆದ ಬಾಂಗ್ಲಾದೇಶದ ಮೊದಲ ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು ಮತ್ತು ಏಕದಿನ ಇತಿಹಾಸದಲ್ಲಿ ಶಕೀಬ್ ಅಲ್ ಹಸನ್ ಭಾರತದ ವಿರುದ್ಧ ಐದು ವಿಕೆಟ್ ಗೊಂಚಲು ಕಬಳಿಸಿದ 8ನೇ ಸ್ಪಿನ್ನರ್ ಎನಿಸಿಕೊಂಡರು.

ಸ್ಪಿನ್ನರ್‌ಗಳ ಪಟ್ಟಿಯಲ್ಲಿ ಶಕೀಬ್ ಅಲ್ ಹಸನ್ ಹೆಸರು
ಮುಷ್ತಾಕ್ ಅಹ್ಮದ್, ಸಕ್ಲೇನ್ ಮುಷ್ತಾಕ್, ಮುತ್ತಯ್ಯ ಮುರಳೀಧರನ್, ಆಶ್ಲೇ ಗೈಲ್ಸ್, ಅಜಂತಾ ಮೆಂಡಿಸ್, ಸಯೀದ್ ಅಜ್ಮಲ್ ಮತ್ತು ಅಕಿಲಾ ಧನಂಜಯ ಅವರಂತಹ ಭಾರತ ವಿರುದ್ಧ ಐದು ವಿಕೆಟ್ ಗೊಂಚಲು ಪಡೆದ ಸ್ಪಿನ್ನರ್‌ಗಳ ಪಟ್ಟಿಯಲ್ಲಿ ಶಕೀಬ್ ಅಲ್ ಹಸನ್ ಹೆಸರು ಸೇರಿಕೊಂಡಿತು.
ನ್ಯೂಜಿಲೆಂಡ್ ವಿರುದ್ಧದ ಸರಣಿ ಸೋಲಿನ ನಂತರ ಭಾರತವು ತವರಿನಲ್ಲಿ ನಡೆಯುವ ಏಕದಿನ ವಿಶ್ವಕಪ್ ತಯಾರಿಯನ್ನು ನೀರಸ ಬ್ಯಾಟಿಂಗ್ ಪ್ರದರ್ಶನದೊಂದಿಗೆ ಪ್ರಾರಂಭಿಸಿತು. ಅತ್ಯುತ್ತಮ ಬ್ಯಾಟಿಂಗ್ ಲೈನ್‌ಅಪ್‌ನೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಆರಂಭಿಕ ಜೊತೆಯಾಟದ ಮತ್ತೆ ಮುಂದುವರೆಯಿತು.

41.2 ಓವರ್‌ಗಳಲ್ಲಿ 186 ರನ್‌ಗಳಿಗೆ ನಿರ್ಬಂಧಿಸಿದರು
ಶಕೀಬ್ ಅಲ್ ಹಸನ್ 36 ರನ್‌ಗಳಿಗೆ 5 ವಿಕೆಟ್ ಮತ್ತು ಎಬಾಡೋಟ್ ಹೊಸೈನ್ 47 ರನ್‌ಗಳಿಗೆ 4 ವಿಕೆಟ್ ಪಡೆದು ಭಾರತ ತಂಡವನ್ನು 41.2 ಓವರ್‌ಗಳಲ್ಲಿ 186 ರನ್‌ಗಳಿಗೆ ನಿರ್ಬಂಧಿಸಿದರು. ಮೊದಲ 10 ಓವರ್‌ಗಳ ನಂತರ ರೋಹಿತ್ ಶರ್ಮಾ, ಶಿಖರ್ ಧವನ್ ಮತ್ತು ವಿರಾಟ್ ಕೊಹ್ಲಿ ಅವರ ವಿಕೆಟ್ ಕಳೆದುಕೊಳ್ಳುವದರೊಂದಿಗೆ ಭಾರತ ತಂಡ 49 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ನಂತರ ಜೊತೆಗೂಡಿದ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ನಿಧಾನವಾಗಿ ಇನ್ನಿಂಗ್ಸ್ ಕಟ್ಟಲು ಪ್ರಯತ್ನಿಸಿದರು. ಆದರೆ 43 ರನ್ ಜೊತೆಯಾಟದ ನಂತರ 39 ಎಸೆತಗಳಲ್ಲಿ 24 ರನ್ ಗಳಿಸಿದ್ದ ಶ್ರೇಯಸ್ ಅಯ್ಯರ್ ಔಟಾದಾಗ ಮತ್ತೆ ಹಿನ್ನಡೆ ಅನುಭವಿಸಿತು.

ಭಾರತ ತಂಡ 4 ರನ್‌ಗಳ ಅಂತರದಲ್ಲಿ 4 ವಿಕೆಟ್
ಆಗ ಕ್ರೀಸ್‌ಗೆ ಬಂದ ವಾಷಿಂಗ್ಟನ್ ಸುಂದರ್ ಅವರು ಕೆಎಲ್ ರಾಹುಲ್ ಜೊತೆ 60 ರನ್‌ಗಳ ಜೊತೆಯಾಟವನ್ನು ನೀಡಿ ಭಾರತದ ಪಾಳಯದಲ್ಲಿ ನಗು ಮೂಡಿಸಿದ್ದರು. ಇದೇ ವೇಳೆ ಪ್ರವಾಸಿ ಭಾರತ ತಂಡ 4 ರನ್‌ಗಳ ಅಂತರದಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡಿದ್ದರಿಂದ 200 ರನ್‌ಗಳ ಗಡಿ ದಾಟುವುದೂ ಕಷ್ಟವಾಯಿತು.
ಉಪನಾಯಕ ಕೆಎಲ್ ರಾಹುಲ್ ಮಾತ್ರ ಏಕಾಂಗಿಯಾಗಿ ಬ್ಯಾಟಿಂಗ್ ಮಾಡಿ 70 ಎಸೆತಗಳಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಮೇತ 73 ರನ್ ಗಳಿಸಿ ಭಾರತದ ಪರ ಹೆಚ್ಚಿನ ಸ್ಕೋರರ್ ಎನಿಸಿದರು. ಉಳಿದ ಯಾವ ಬ್ಯಾಟ್ಸ್‌ಮನಗಳು ಬಾಂಗ್ಲಾದೇಶ ಬೌಲರ್‌ಗಳನ್ನು ಎದುರಿಸಲು ವಿಫಲರಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications