Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Virat Kohli: ಮೈದಾನದಲ್ಲಿ ಶಕೀಬ್ ಅಲ್ ಹಸನ್ ಕಾಲೆಳೆದ ವಿರಾಟ್ ಕೊಹ್ಲಿ; ವಿಡಿಯೋ ವೈರಲ್

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಪ್ರಾಬಲ್ಯ ಸಾಧಿಸಿದೆ. ಭಾರೀ ನಿರೀಕ್ಷೆಯೊಂದಿಗೆ ಭಾರತ ಪ್ರವಾಸ ಕೈಗೊಂಡಿರುವ ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯದಲ್ಲೇ ಮಂಕಾಗಿದೆ.

ಈ ಪಂದ್ಯದ ಎರಡನೇ ದಿನ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಬಾಂಗ್ಲಾದೇಶದ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ನಡುವೆ ನಡೆದ ಸಂಭಾಷಣೆ ವಿಡಿಯೋ ವೈರಲ್ ಆಗಿದೆ. ಟೀಮ್ ಇಂಡಿಯಾದ ಎರಡನೇ ಇನ್ನಿಂಗ್ಸ್ ವೇಳೆ ಬ್ಯಾಟಿಂಗ್ ಮಾಡುತ್ತಿರುವಾಗ ಈ ವಿಡಿಯೋ ಸೆರೆಯಾಗಿದೆ.

IND vs BAN Shakib Al Hasan - Virat Kohli Funny Video Viral

ಬಾಂಗ್ಲಾದೇಶ ವಿರುದ್ಧದ ಚೆನ್ನೈ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ಹೆಚ್ಚು ರನ್ ಗಳಿಸಲು ಸಾಧ್ಯವಾಗಿಲ್ಲ. ಅವರು ಮೊದಲ ಇನ್ನಿಂಗ್ಸ್‌ನಲ್ಲಿ 6 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 17 ರನ್ ಗಳಿಸಿ ಔಟಾಗಿದ್ದಾರೆ. ಆದರೂ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.

ವಿಡಿಯೋದಲ್ಲಿ ಏನಿದೆ?

ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನ ಅಭಿಮಾನಿಗಳಿಗೆ ವಿಚಿತ್ರ ಘಟನೆಯನ್ನು ನೋಡಿದ್ದಾರೆ. ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುತ್ತಿದ್ದಾಗ ಮೈದಾನದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಶಕೀಬ್ ಅಲ್ ಹಸನ್‌ಗೆ ಡಿಕ್ಕಿ ಹೊಡೆದರು.

ಬಳಿಕ ಇಬ್ಬರ ನಡುವಿನ ತಮಾಷೆಯ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇಬ್ಬರ ನಡುವಿನ ಸಂಭಾಷಣೆ ಕೂಡ ಸ್ಟಂಪ್ ಮೈಕ್‌ನಲ್ಲಿ ಸೆರೆಯಾಗಿದೆ. ವೀಡಿಯೊದಲ್ಲಿ ಶಕೀಬ್ ಅಲ್ ಹಸನ್‌ಗೆ ವಿರಾಟ್ ಕೊಹ್ಲಿ ಕಾಲೆಳೆದಿದ್ದಾರೆ.

ಶಕೀಬ್ ನಿರಂತರವಾಗಿ ಕೊಹ್ಲಿಗೆ ಅವರ ಕಾಲುಗಳ ಬಳಿ ಬೌಲಿಂಗ್ ಮಾಡುತ್ತಿದ್ದರು. ಇದಾದ ಬಳಿಕ ಓವರ್ ಮುಗಿಸಿ ಶಕೀಬ್ ಫೀಲ್ಡಿಂಗ್ ಮಾಡುತ್ತಿದ್ದಾಗ ಕೊಹ್ಲಿ ತಮಾಷೆಯಾಗಿ, 'ನೀನು ಮಾಲಿಂಗ ಆದೆ, ಯಾರ್ಕರ್ ಮೇಲೆ ಯಾರ್ಕರ್ ಹಾಕುತ್ತಿದ್ದೀಯಾ' ಎಂದು ಹೇಳಿದ್ದಾರೆ. ಕೊಹ್ಲಿ ಹೇಳಿರುವುದು ಸ್ಟಂಪ್ ಮೈಕ್‌ನಲ್ಲಿ ರೆಕಾರ್ಡ್ ಆಗಿದೆ.

ಶತಕ ಕಾಣದ ಕೊಹ್ಲಿ

ವಿರಾಟ್ ಕೊಹ್ಲಿ ಕಳೆದ 14 ತಿಂಗಳಲ್ಲಿ ಕೇವಲ 3 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು ತಮ್ಮ ಬ್ಯಾಟ್‌ನಿಂದ ಒಂದೇ ಒಂದು ಶತಕವನ್ನು ಸಿಡಿಸಿಲ್ಲ. ಅವರು ತಮ್ಮ ಕೊನೆಯ ಟೆಸ್ಟ್ ಶತಕವನ್ನು ವೆಸ್ಟ್ ಇಂಡೀಸ್ ವಿರುದ್ಧ 2023ರ ಜುಲೈ 20 ರಂದು ಪೋರ್ಟ್ ಆಫ್ ಸ್ಪೇನ್‌ನಲ್ಲಿ ಬಾರಿಸಿದ್ದರು. ಆಗ ವಿರಾಟ್ ಕೊಹ್ಲಿ 121 ರನ್ ಗಳ ಅಮೋಘ ಇನ್ನಿಂಗ್ಸ್ ಆಡಿದ್ದರು. ಇದಾದ ನಂತರ, ವಿರಾಟ್ ಕೊಹ್ಲಿ 3 ಟೆಸ್ಟ್ ಪಂದ್ಯಗಳ 6 ಇನ್ನಿಂಗ್ಸ್‌ಗಳಲ್ಲಿ 38, 76, 46, 12, 6 ಮತ್ತು 17 ರನ್ ಗಳಿಸಿದ್ದಾರೆ.

Story first published: Saturday, September 21, 2024, 15:49 [IST]
Other articles published on Sep 21, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+