For Quick Alerts
ALLOW NOTIFICATIONS  
For Daily Alerts
 

IND vs BAN T20 Asia Cup: ಅಭಿಷೇಕ್ ಶರ್ಮಾ ಅರ್ಧಶತಕದ ಸೊಬಗು

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭ ಭರ್ಜರಿಯಾಗಿತ್ತು. ಭಾರತದ ಆರಂಭಿಕರಾದ ಶುಭಮನ್‌ ಗಿಲ್‌ ಹಾಗೂ ಅಭಿಷೇಕ್‌ ಶರ್ಮಾ ಆರಂಭದಲ್ಲಿ ತಾಳ್ಮೆಯಿಂದ ಆಡಿ ಬಳಿಕ ರನ್‌ ವೇಗಕ್ಕೆ ಚುರುಕು ಮುಟ್ಟಿಸಿದರು. ಈ ಜೋಡಿಯನ್ನು ಕಟ್ಟಿಹಾಕುವಲ್ಲಿ ಬಾಂಗ್ಲಾ ಆರಂಭದಲ್ಲಿ ವಿಫಲವಾಯಿತು. ಈ ಜೋಡಿ ಮೊದಲ ವಿಕೆಟ್‌ಗೆ 6.2 ಓವರ್‌ಗಳಲ್ಲಿ 77 ರನ್‌ ಸೇರಿಸಿತು. ಈ ವೇಳೆ ಶುಭಮನ್‌ ಗಿಲ್‌ ಇಲ್ಲದ ಹೊಡೆತಕ್ಕೆ ಮುಂದಾಗಿ 29 ರನ್‌ ಬಾರಿಸಿದ್ದಾಗ ಔಟ್ ಆದರು. ಇವರ ಮನಮೋಹಕ ಇನಿಂಗ್ಸ್‌ನಲ್ಲಿ 2 ಬೌಂಡರಿ, 1 ಸಿಕ್ಸರ್ ಸೇರಿವೆ.

ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಶಿವಂ ದುಬೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು. ಶಿವಂ ದುಬೆ ರಿಶದ್‌ ಹುಸೇನ್‌ 2 ರನ್‌ ಬಾರಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು. ಟೀಮ್ ಇಂಡಿಯಾದ ಸ್ಟಾರ್ ಆರಂಭಿಕ ಆಟಗಾರ ಅಭಿಷೇಕ್‌ ಶರ್ಮಾ ಬ್ಯಾಕ್‌ ಟು ಬ್ಯಾಕ್‌ ಅರ್ಧಶತಕವನ್ನು ಬಾರಿಸಿ ಅಬ್ಬರಿಸಿದರು. ಇವರು 37 ಎಸೆತಗಳಲ್ಲಿ 6 ಬೌಂಡರಿ, 5 ಸಿಕ್ಸರ್ ಸಹಾಯದಿಂದ 75 ರನ್‌ ಸಿಡಿಸಿದ್ದಾಗ ಇಲ್ಲದ ರನ್‌ ಕದಿಯಲು ಹೋಗಿ ಔಟ್ ಆದರು.

IND vs BAN T20 Asia Cup Team India Bats First After Losing Toss

ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ಕೇವಲ 5 ರನ್‌ಗಳಿಗೆ ಆಟ ಮುಗಿಸಿದರು. ಭರವಸೆಯ ಆಟಗಾರ ತಿಲಕ್ ವರ್ಮಾ ಸಹ 5 ರನ್‌ ಬಾರಿಸಿ ಪೆವಿಲಿಯನ್ ಸೇರಿದರು. ಮಧ್ಯಮ ಕ್ರಮಾಂಕದಲ್ಲಿ ಸ್ಟಾರ್‌ ಆಟಗಾರರು ಒತ್ತಡವನ್ನು ಮೆಟ್ಟಿನಿಲ್ಲುವಲ್ಲಿ ಟೀಮ್ ಇಂಡಿಯಾ ಆಟಗಾರರು ವಿಫಲರಾದರು. ಸ್ಟಾರ್‌ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ 29 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್‌ ನೆರವಿನಿಂದ 38 ರನ್‌ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಅಂತಿಮವಾಗಿ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 168 ರನ್‌ ಸೇರಿಸಿತು.

ಬಾಂಗ್ಲಾದೇಶದ ಸ್ಟಾರ್ ಬೌಲರ್‌ಗಳು ಬಿಗುವಿನ ದಾಳಿ ನಡೆಸಿ ತಂಡಕ್ಕೆ ನೆರವಾದರು. ರಿಷದ್ ಹೊಸೇನ್ 2 ವಿಕೆಟ್‌ ಪಡೆದರೆ, ತಂಜಿಮ್‌ ಹುಸೇನ್‌, ಮುಸ್ತಾಫಿಜುರ್ ರೆಹಮಾನ್‌, ಮೊಹಮ್ಮದ್ ಸೈಫುದ್ದಿನ್ ತಲಾ ಒಂದು ವಿಕೆಟ್‌ ಪಡೆದರು.

ಮುಸ್ತಾಫಿಜುರ್ ದಾಖಲೆ

ಬಾಂಗ್ಲಾದೇಶ ತಂಡದ ಸ್ಟಾರ್ ಬೌಲರ್‌ ಮುಸ್ತಾಫಿಜುರ್ ರೆಹಮಾನ್‌ ಏಷ್ಯಾ ಕಪ್‌ ಟಿ20 ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ಅವರ ವಿಕೆಟ್ ಪಡೆಯುತ್ತಿದ್ದಂತೆ ಇತಿಹಾಸ ಬರೆದರು. ಚುಟುಕು ಕ್ರಿಕೆಟ್‌ನಲ್ಲಿ ಬಾಂಗ್ಲಾದೇಶದ ಪರ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಮೂಲಕ ಇವರು ಸ್ಟಾರ್ ಆಲ್‌ರೌಂಡರ್ ಶಕೀಬ್‌ ಅಲ್‌ ಹಸನ್ ದಾಖಲೆ ಮುರಿದರು. ಶಕೀಬ್‌ ಟಿ20 ಕ್ರಿಕೆಟ್‌ನಲ್ಲಿ 149 ವಿಕೆಟ್‌ ಪಡೆದಿದ್ದರು. ಈಗ ಮುಸ್ತಾಫಜುರ್ 150 ವಿಕೆಟ್‌ ಪಡೆದು ಬೀಗಿದ್ದಾರೆ.

Story first published: Wednesday, September 24, 2025, 21:11 [IST]
Other articles published on Sep 24, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+