Hardik Pandya: ಹಾರ್ದಿಕ್ ಪಾಂಡ್ಯ 'ನೋ ಲುಕ್ ಶಾಟ್'ಗೆ ಕ್ರಿಕೆಟ್ ಫ್ಯಾನ್ಸ್ ಶಾಕ್
ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ಶುಭಾರಂಭ ಮಾಡಿದೆ. ಭಾನುವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್‌ಗಳ ಜಯ ಸಾಧಿಸಿದೆ. ಬಾಂಗ್ಲಾದೇಶ ನೀಡಿದ 128 ರನ್‌ಗಳ ಗುರಿಯನ್ನು ಭಾರತ 11.5 ಓವರ್‌ಗಳಲ್ಲಿ ಸಾಧಿಸಿತು. ಆದರೆ, ಈ ಪಂದ್ಯದ ಪ್ರಮುಖ ಆಕರ್ಷಣೆ ಎಂದರೆ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಬ್ಯಾಟಿಂಗ್.
ಬಾಂಗ್ಲಾದೇಶ ಬೌಲರ್‌ಗಳನ್ನು ಬೆಂಡತ್ತಿದ ಹಾರ್ದಿಕ್ 16 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 39 ರನ್ ಗಳಿಸಿದರು. ಈ ಇನ್ನಿಂಗ್ಸ್‌ನಲ್ಲಿ ಹಾರ್ದಿಕ್ ಹೊಡೆದ ಶಾಟ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಹಾರ್ದಿಕ್ ಪಾಂಡ್ಯ ಅವರ 'ನೋ ಲುಕ್ ಶಾಟ್' ನೋಡಿದ ಕ್ರಿಕೆಟ್ ಅಭಿಮಾನಿಗಳು ಶಾಕ್ ಆಗಿದ್ದಾರೆ.

ರಾಕೆಟ್ ರೀತಿ ಹಾರಿದ ಚೆಂಡು
ಟೀಮ್ ಇಂಡಿಯಾ ಬ್ಯಾಟಿಂಗ್ ವೇಳೆ 12ನೇ ಓವರ್ ಮಾಡಲು ಬಂದ ತಸ್ಕಿನ್ ಅಹ್ಮದ್ ಬೌಲಿಂಗ್‌ನಲ್ಲಿ ಹಾರ್ದಿಕ್ ಪಾಂಡ್ಯ ಬೌಂಡರಿ ಬಾರಿಸಿದರು. ಆದರೆ ಹಾರ್ದಿಕ್ ಪಾಂಡ್ಯ ಬೌಂಡರಿ ಹೊಡೆದ ರೀತಿಗೆ ಎಲ್ಲಾ ಕ್ರಿಕೆಟ್ ಅಭಿಮಾನಿಗಳು ಶಾಕ್ ಆಗಿದ್ದಾರೆ. 12ನೇ ಓವರ್‌ನಲ್ಲಿ ಕ್ರೀಸ್‌ನಲ್ಲಿದ್ದ ಹಾರ್ದಿಕ್ ಅವರು, ಟಾಸ್ಕಿನ್ ಎಸೆದ ಮೂರನೇ ಎಸೆತದಲ್ಲಿ ಸ್ಕೂಪ್ ಶಾಟ್ ಆಡಿದರು. ಚೆಂಡು ವಿಕೆಟ್‌ಕೀಪರ್ ತಲೆ ಮೇಲೆ ರಾಕೆಟ್ ರೀತಿ ಹಾರಿತು.
ಇತ್ತ ಶಾಟ್ ಆಡಿವ ಬಳಿಕ ಹಾರ್ದಿಕ್ ಹಿಂತಿರುಗಿ ನೋಡಲೇ ಇಲ್ಲ. ಏಕೆಂದರೆ ಆ ಶಾಟ್‌ನಲ್ಲಿ ಹಾರ್ದಿಕ್ ಪಾಂಡ್ಯಗೆ ಆತ್ಮವಿಶ್ವಾಸವಿತ್ತು. ಇದನ್ನು ಪಾಂಡ್ಯ ಅವರ 'ನೋ ಲುಕ್ ಶಾಟ್' ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಮಾಡಿದ್ದಾರೆ. ಅದೇ ಓವರ್‌ನಲ್ಲಿ ಪಾಂಡ್ಯ ಮುಂದಿನ ಎರಡು ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಸಿಕ್ಸರ್ ಬಾರಿಸಿ 11.5 ಓವರ್‌ಗಳಲ್ಲಿ ಪಂದ್ಯವನ್ನು ಕೊನೆಗೊಳಿಸಿದರು.
ಶ್ರೀಲಂಕಾ ಪ್ರವಾಸದ ನಂತರ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ರಜಾ ದಿನಗಳನ್ನು ಕಳೆದಿದ್ದರು. ಇದಾದ ಬಳಿಕ ಶುರುವಾದ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಸ್ಥಾನ ಪಡೆದಿರಲಿಲ್ಲ. ಈ ಸಂದರ್ಭದಲ್ಲಿ ಅವರು ಕಠಿಣ ಅಭ್ಯಾಸ ನಡೆಸಿದ್ದರು. ಅವರ ಅಭ್ಯಾಸದ ಕೆಲವು ಫೋಟೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಎಲ್ಲರು ಟೆಸ್ಟ್ ಕ್ರಿಕೆಟ್‌ಗೆ ಮರಳಲು ಹಾರ್ದಿಕ್ ಪಾಂಡ್ಯ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ ಎಂದು ಕೊಂಡಿದ್ದರು. ಈಗ ಅಭ್ಯಾಸದ ಪ್ರತಿಫಲವಾಗಿ ಹಾರ್ದಿಕ್ ಪಾಂಡ್ಯ ಮೊದಲ ಟಿ20 ಪಂದ್ಯದಲ್ಲಿ ಅಬ್ಬರಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications