
ಭಾರತ ತಂಡಕ್ಕೆ 80ರಷ್ಟು ದಂಡ
ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ನಿಧಾನಗತಿಯ ಬೌಲಿಂಗ್ ನಡೆಸಿದೆ. ಈ ಕಾರಣದಿಂದಾಗಿ ಟೀಮ್ ಇಂಡಿಯಾಗೆ ಪಂದ್ಯದ ಸಂಭಾವನೆಯ ಶೇಕಡಾ 80ರಷ್ಟು ದಂಡವನ್ನು ವಿಧಿಸಲಾಗಿದೆ. ನಿಗದಿತ ಸಮಯಕ್ಕಿಂತ ಭಾರತ ತಂಡ 4 ಓವರ್‌ಗಳ ಹಿಂದಿದ್ದ ಕಾರಣ ಮ್ಯಾಚ್ ರೆಫ್ರಿ ರಂಜನ್ ಮದುಗಲ್ಲೆ ಭಾರತ ತಂಡಕ್ಕೆ ಈ ದಂಡವನ್ನು ವಿಧಿಸಿದ್ದಾರೆ. ಈ ಬಗ್ಗೆ ಐಸಿಸಿ ಅಧಿಕೃತವಾಗಿ ಮಾಹಿತಿ ನೀಡಿದೆ. ಇನ್ನು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಪ್ಪೊಪ್ಪಿಕೊಂಡಿರುವ ಕಾರಣದಿಂದಾಗಿ ಔಪಚಾರಿಕ ವಿಚಾರಣೆ ನಡೆಸದೆ ದಂಡ ವಿಧಿಸಲಾಗಿದೆ.

ಒಂದು ವಿಕೆಟ್‌ಗಳ ಅಂತರದಿಂದ ಗೆದ್ದ ಬಾಂಗ್ಲಾ
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲಿಗೆ ಬ್ಯಾಟಿಂಗ್ ನಡೆಸಿ 186 ರನ್‌ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಕಾರಣದಿಂದಾಗಿ ಈ ಮೊತ್ತವನ್ನು ಗಳಿಸಲು ಸಾಧ್ಯವಾಯಿತು. ಈ ಪಂದ್ಯದಲ್ಲಿ ರಾಹುಲ್ 73 ರನ್‌ಗಳ ಕೊಡುಗೆ ನೀಡಿದ್ದರು. ಇದನ್ನು ಬೆನ್ನಟ್ಟಿದ ಬಾಂಗ್ಲಾದೇಶ ತಂಡ ಕೂಡ ಹಿನ್ನಡೆ ಅನುಭವಿಸಿತ್ತು. ಟೀಮ್ ಇಂಡಿಯಾ ಬಹುತೇಕ ಗೆಲುವು ಸಾಧಿಸುವ ಹಂತಕ್ಕೆ ಬಂದಿತ್ತು. ಆದರೆ ಅಂತಿಮ ವಿಕೆಟ್‌ಗೆ ಮೆಹದಿ ಹಸನ್ ಹಾಗೂ ಮುಸ್ತಪಿಜುರ್ ರಹ್ಮಾನ್ ವಿಕೆಟ್ ಕಳೆದುಕೊಳ್ಳದೆ 51 ರನ್‌ಗಳ ಜೊತೆಯಾಟ ನೀಡುವ ಮೂಲಕ ಬಾಂಗ್ಲಾದೇಶಕ್ಕೆ ರೋಚಕ ಗೆಲುವಿಗೆ ಕಾರಣವಾದರು.

ಇತ್ತಂಡಗಳ ಆಡುವ ಬಳಗ
ಬಾಂಗ್ಲಾದೇಶ: ಲಿಟನ್ ದಾಸ್ (ನಾಯಕ), ಅನಾಮುಲ್ ಹಕ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್
ಬೆಂಚ್: ನೂರುಲ್ ಹಸನ್, ಯಾಸಿರ್ ಅಲಿ, ತಸ್ಕಿನ್ ಅಹ್ಮದ್, ನಸುಮ್ ಅಹ್ಮದ್
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಕುಲದೀಪ್ ಸೇನ್
ಬೆಂಚ್: ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಉಮ್ರಾನ್ ಮಲಿಕ್