Ind vs Ban 3rd ODI : ಅಂತಿಮ ಏಕದಿನ ಪಂದ್ಯಕ್ಕಾಗಿ ಚಿತ್ತಗಾಂಗ್‌ಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು

ಭಾರತ ಹಾಗೂ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯ ಶನಿವಾರ ನಡೆಯಲಿದೆ. ಮೊದಲ ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸೋಲು ಅನುಭವಿಸಿರುವ ಕಾರಣ ಈಗಾಗಲೇ ಸರಣಿಯನ್ನು ಆತಿಥೇಯ ಬಾಂಗ್ಲಾದೇಶ ಗೆದ್ದುಕೊಂಡಿದೆ. ಇದೀಗ ಟೀಮ್ ಇಂಡಿಯಾ ವೈಟ್‌ವಾಶ್ ಮುಖಭಂಗದಿಂದ ಪಾರಾಗಲು ಹೋರಾಟ ನಡೆಸಲಿದೆ.
ಅಂತಿಮ ಪಂದ್ಯ ನಡೆಯಲಿರುವ ಚಿತ್ತಗಾಂಗ್‌ಗೆ ಭಾರತ ಈಗಾಗಲೇ ಆಗಮಿಸಿದೆ. ಮೊದಲ ಎರಡು ಪಂದ್ಯಗಳು ಢಾಕಾದಲ್ಲಿ ನಡೆದಿದ್ದವು. ಇದೀಗ ಅಂತಿಮ ಪಂದ್ಯ ಚಿತ್ತಗಾಂಗ್‌ನಲ್ಲಿ ನಡೆಯಲಿದ್ದು ಈ ಪಂದ್ಯಕ್ಕಾಗು ಭಾರತೀಯ ಆಟಗಾರರು ಬಂದಿಳಿದಿದ್ದಾರೆ. ಜಹೂರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯ ಆಯೋಜನೆಯಾಗಲಿದೆ.
ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಆಟಗಾರರು ಗಾಯಕ್ಕೊಳಗಾಗಿವುದು ಆಘಾತ ನೀಡಿದೆ. ಕನಿಷ್ಠ ಮೂವರು ಆಟಗಾರರು ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಿಂದ ಹೊರಗುಳಿಯುವುದು ಸ್ಪಷ್ಟವಾಗಿದೆ. ಕೋಚ್ ರಾಹುಲ್ ದ್ರಾವಿಡ್ ಈ ಬಗ್ಗೆ ಖಚಿತ ಮಾಹಿತಿ ನೀಡಿದ್ದಾರೆ. ನಾಯಕ ರೋಹಿತ್ ಶರ್ಮಾ ವೇಗಿಗಳಾದ ದೀಪಕ್ ಚಹರ್ ಹಾಗೂ ಕುಲ್‌ದೀಪ್ ಸೇನ್ ಗಾಯದ ಕಾರಣದಿಂದಾಗಿ ಅಂತಿಮ ಪಂದ್ಯದಿಂದ ಹೊರಗುಳಿಯಲಿದ್ದಾರೆ.
ರೋಹಿತ್ ಶರ್ಮಾ ಫಿಲ್ಡಿಂಗ್ ವೇಳೆ ಚೆಂಡು ಕೈಗೆ ತಾಗಿ ಗಾಯಗೊಂಡಿದ್ದರು. ಫಿಲ್ಡಿಂಗ್ ಸಂದರ್ಭದಲ್ಲಿ ಮೈದಾನದಿಂದ ಹೊರಗುಳಿದಿದ್ದ ರೋಹಿತ್ ಬಳಿಕ ಬ್ಯಾಟಿಂಗ್‌ನಲ್ಲಿ ಅಂತಿಮ ಹಂತದಲ್ಲಿ ಕಣಕ್ಕಿಳಿದಿದ್ದರು. ಇನ್ನು ವೇಗಿ ದೀಪಕ್ ಚಹರ್ ಬೌಲಿಂಗ್ ಸಂದರ್ಭದಲ್ಲಿ ಗಾಯಗೊಂಡಿದ್ದು ಕೇವಲ 3 ಓವರ್‌ಗಳ ಬೌಲಿಂಗ್ ಮಾತ್ರವೇ ನಡೆಸಿದ್ದಾರೆ. ಇನ್ನು ಕುಲ್‌ದೀಪ್ ಸೇನ್ ಮೊದಲ ಪಂದ್ಯದಲ್ಲಿ ಗಾಯಗೊಂಡಿರುವ ಕಾರಣದಿಂದಾಗಿ ಎರಡನೇ ಪಂದ್ಯದಲ್ಲಿಯೂ ಆಡಿರಲಿಲ್ಲ.
ಬಾಂಗ್ಲಾದೇಶ ತಂಡ: ಲಿಟನ್ ದಾಸ್ (ನಾಯಕ), ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್, ಯಾಸಿರ್ ಅಲಿ, ಮೆಹಿದಿ ಹಸನ್ ಮಿರಾಜ್, ಮುಸ್ತಾಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ನಸುಮ್ ಅಹ್ಮದ್, ಮಹಮ್ಮದುಲ್ಲಾ, ನಜ್ಮುಲ್ ಹೊಸೈನ್ ಶಾಂಟೋ, ನೂರುಲ್ ಹಸನ್
ಭಾರತ ತಂಡ: ಕೆಎಲ್ ರಾಹುಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಶಹಬಾಜ್ ಅಹ್ಮದ್, ಉಮ್ರಾನ್ ಮಲಿಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications