For Quick Alerts
ALLOW NOTIFICATIONS  
For Daily Alerts
 

IND vs BAN 1st Test: ಮೊದಲ ಟೆಸ್ಟ್‌ನಿಂದ ರೋಹಿತ್ ಔಟ್; ಕೆಎಲ್ ರಾಹುಲ್‌ಗೆ ನಾಯಕತ್ವ

IND vs BAN Test Series: Rohit Sharma Ruled Out Of 1st Test; KL Rahul To Lead Team India

ಹೆಬ್ಬೆರಳಿನ ಗಾಯದಿಂದ ಚೇತರಿಸಿಕೊಳ್ಳದ ಭಾರತ ತಂಡದ ಕಾಯಂ ನಾಯಕ ರೋಹಿತ್ ಶರ್ಮಾ ಅವರು ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯಬೇಕಾಗಿದೆ. ರೋಹಿತ್ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ಇನ್ನು ರೋಹಿತ್ ಶರ್ಮಾ ಅವರ ಬ್ಯಾಕ್‌ಅಪ್ ಬ್ಯಾಟರ್ ಆಗಿ ಅಭಿಮನ್ಯು ಈಶ್ವರನ್ ಅವರನ್ನು ಡಿಸೆಂಬರ್ 14ರಂದು ಬುಧವಾರ ಪ್ರಾರಂಭವಾಗುವ ಮೊದಲ ಟೆಸ್ಟ್‌ಗೆ ಬಿಸಿಸಿಐ ಭಾನುವಾರ ಆಯ್ಕೆ ಮಾಡಿದೆ.

ಮಿರ್‌ಪುರದಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದ ಸಂದರ್ಭದಲ್ಲಿ ಫೀಲ್ಡಿಂಗ್ ಮಾಡುವಾಗ ರೋಹಿತ್ ಶರ್ಮಾ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿ ರಕ್ತ ಸೋರಿಕೆಯಾಗಿತ್ತು. ನಂತರ ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಸ್ಕ್ಯಾನ್‌ಗಾಗಿ ಕರೆದೊಯ್ಯಲಾಗಿತ್ತು. ಆದರೂ ಬೆರಳಿಗೆ ಬ್ಯಾಂಡೇಜ್ ಹಾಕಿಕೊಂಡು ಬಂದು ಬ್ಯಾಟಿಂಗ್ ಮಾಡಿದ್ದರು.

ಕೆಎಲ್ ರಾಹುಲ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ

ಕೆಎಲ್ ರಾಹುಲ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ

ಪ್ರಸ್ತುತ ಬಾಂಗ್ಲಾದೇಶ ಪ್ರವಾಸದಲ್ಲಿರುವ ಭಾರತ 'ಎ' ತಂಡದ ಪರ ಎರಡು ಪಂದ್ಯಗಳಲ್ಲಿ 299 ರನ್ ಗಳಿಸಿದ ನಂತರ ಅಭಿಮನ್ಯು ಈಶ್ವರನ್ ತಂಡಕ್ಕೆ ಆಯ್ಕೆಯಾದರು. ಎರಡನೇ ಮತ್ತು ಅಂತಿಮ ಟೆಸ್ಟ್‌ಗೆ ರೋಹಿತ್ ಶರ್ಮಾ ಅವರ ಲಭ್ಯತೆಯ ಬಗ್ಗೆ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಬಿಸಿಸಿಐ ತಿಳಿಸಿದೆ.

"ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಬಾಂಗ್ಲಾದೇಶ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಎಡಗೈ ಹೆಬ್ಬೆರಳಿನ ಗಾಯಕ್ಕೆ ತುತ್ತಾದ ನಂತರ ಮುಂಬೈನಲ್ಲಿ ತಜ್ಞ ವೈದ್ಯರನ್ನು ಭೇಟಿ ಮಾಡಿದ್ದಾರೆ. ಈ ಗಾಯಕ್ಕೆ ಸೂಕ್ತ ನಿರ್ವಹಣೆಗೆ ಅವರಿಗೆ ಸಲಹೆ ನೀಡಲಾಗಿದೆ ಮತ್ತು ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ಗೆ ಲಭ್ಯವಿರುವುದಿಲ್ಲ," ಎಂದು ಬಿಸಿಸಿಐ ಹೇಳಿದೆ.

ರೋಹಿತ್ ಶರ್ಮಾ ಬದಲಿಯಾಗಿ ಅಭಿಮನ್ಯು ಈಶ್ವರನ್ ಆಯ್ಕೆ

ರೋಹಿತ್ ಶರ್ಮಾ ಬದಲಿಯಾಗಿ ಅಭಿಮನ್ಯು ಈಶ್ವರನ್ ಆಯ್ಕೆ

"ಬಿಸಿಸಿಐ ವೈದ್ಯಕೀಯ ತಂಡವು ಎರಡನೇ ಮತ್ತು ಅಂತಿಮ ಟೆಸ್ಟ್‌ಗೆ ಅವರ ಲಭ್ಯತೆಯ ಬಗ್ಗೆ ನಂತರದ ಹಂತದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಭಾರತ ತಂಡದ ಹಿರಿಯ ಆಯ್ಕೆ ಸಮಿತಿಯು ಅಭಿಮನ್ಯು ಈಶ್ವರನ್ ಅವರನ್ನು ಮೊದಲ ಟೆಸ್ಟ್‌ಗೆ ರೋಹಿತ್ ಶರ್ಮಾ ಬದಲಿಯಾಗಿ ಆಯ್ಕೆಮಾಡಲಾಗಿದೆ," ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ವೇಳೆ ನವದೀಪ್ ಸೈನಿ ಮತ್ತು ಸೌರಭ್ ಕುಮಾರ್ ಅವರನ್ನು ಕೂಡ ಭಾರತ ಟೆಸ್ಟ್ ತಂಡಕ್ಕೆ ಸೇರಿಸಲಾಗಿದೆ. ವೇಗಿ ಮೊಹಮ್ಮದ್ ಶಮಿ ಮತ್ತು ಆಲ್‌ರೌಂಡರ್ ರವೀಂದ್ರ ಜಡೇಜಾ ಇನ್ನೂ ತಮ್ಮ ಗಾಯಗಳಿಂದ ಚೇತರಿಸಿಕೊಂಡಿಲ್ಲದೆ ಕಾರಣ, ಅನುಭವಿ ವೇಗಿ ಜಯದೇವ್ ಉನದ್ಕತ್ ಅವರನ್ನು ತಂಡಕ್ಕೆ ಕರೆತರಲಾಗಿದೆ.

ನವದೀಪ್ ಸೈನಿ ಮತ್ತು ಸೌರಭ್ ಕುಮಾರ್ ಆಯ್ಕೆ

ನವದೀಪ್ ಸೈನಿ ಮತ್ತು ಸೌರಭ್ ಕುಮಾರ್ ಆಯ್ಕೆ

"ಭಾರತ ತಂಡದ ಹಿರಿಯ ವೇಗದ ಬೌಲರ್ ಮೊಹಮ್ಮದ್ ಶಮಿ ಮತ್ತು ಆಲ್‌ರೌಂಡರ್ ರವೀಂದ್ರ ಜಡೇಜಾ ಕ್ರಮವಾಗಿ ತಮ್ಮ ಭುಜ ಮತ್ತು ಮೊಣಕಾಲಿನ ಗಾಯಗಳಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ".

"ಭಾರತ ತಂಡದ ಆಯ್ಕೆ ಸಮಿತಿಯು ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ಬದಲಿಗೆ ನವದೀಪ್ ಸೈನಿ ಮತ್ತು ಸೌರಭ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನು ಜಯದೇವ್ ಉನದ್ಕತ್ ಅವರನ್ನು ಟೆಸ್ಟ್ ಸರಣಿಗಾಗಿ ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ," ಎಂದು ಬಿಸಿಸಿಐ ಪ್ರಕಟಿಸಿದೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ ಪಂದ್ಯಗಳಿಗೆ ಭಾರತ ತಂಡ

ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ ಪಂದ್ಯಗಳಿಗೆ ಭಾರತ ತಂಡ

ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ನವದೀಪ್ ಸೈನಿ, ಸೌರಭ್ ಕುಮಾರ್, ಜಯದೇವ್ ಉನದ್ಕತ್

Story first published: Sunday, December 11, 2022, 21:49 [IST]
Other articles published on Dec 11, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+