ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಬಾಂಗ್ಲಾದೇಶ: 2ನೇ ಏಕದಿನ ಪಂದ್ಯಕ್ಕೂ ಮುನ್ನ ಒತ್ತಡದಲ್ಲಿದ್ದಾರೆ ಭಾರತದ 3 ಆಟಗಾರರು!

Ind vs Ban: These 3 Indian cricketers will be under pressure ahead of 2nd ODI against Bangladesh

ಟೀಮ್ ಇಂಡಿಯಾ ವೈಟ್‌ಬಾಲ್ ಮಾದರಿಯಲ್ಲಿ ಒಂದಾದ ಬಳಿಕ ಮತ್ತೊಂದರಂತೆ ನಿರಾಸೆ ಅನುಭವಿಸುತ್ತಿದೆ. ಅದರಲ್ಲೂ ಏಕದಿನ ಮಾದರಿಯಲ್ಲಿ ಕಿವೀಸ್ ವಿರುದ್ಧ ಸರಣಿ ಕಳೆದುಕೊಂಡಿದ್ದ ಭಾರತ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದ್ದು ಸಂಕಷ್ಟದಲ್ಲಿದೆ. ಇದೀಗ ಎರಡನೇ ಪಂದ್ಯಕ್ಕೆ ಸಜ್ಜಾಗಿರುವ ಟೀಮ್ ಇಂಡಿಯಾ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಅನುಭವಿಸಿದ ಬಳಿಕ ಟೀಮ್ ಇಂಡಿಯಾ ಎರಡನೇ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಲೇ ಬೇಕಿದೆ. ಈ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರ ಮೇಲೆ ಸಾಕಷ್ಟು ಒತ್ತಡವಿದ್ದು ಉತ್ತಮ ಪ್ರದರ್ಶನವನ್ನು ನೀಡಲೇ ಬೇಕಿದೆ. ಇಲ್ಲವಾದರೆ ಟೀಮ್ ಇಂಡಿಯಾ ಸೋಲು ಅನುಭವಿಸುವುದರ ಜೊತೆಗೆ ಸರಣಿಯನ್ನೂ ಕಳೆದುಕೊಳ್ಳಲಿದೆ. ಹಾಗಾದರೆ ಒತ್ತಡದಲ್ಲಿರುವ ಆ ಮೂವರು ಆಟಗಾರರು ಯಾರು? ಮುಂದೆ ಓದಿ...

Pak vs Eng: ಸೋಲಿನ ಬೆನ್ನಲ್ಲೇ ಪಾಕಿಸ್ತಾನಕ್ಕೆ ಮತ್ತೊಂದು ಆಘಾತ, ಎರಡನೇ ಟೆಸ್ಟ್‌ನಿಂದ ಪ್ರಮುಖ ಬೌಲರ್ ಹೊರಕ್ಕೆPak vs Eng: ಸೋಲಿನ ಬೆನ್ನಲ್ಲೇ ಪಾಕಿಸ್ತಾನಕ್ಕೆ ಮತ್ತೊಂದು ಆಘಾತ, ಎರಡನೇ ಟೆಸ್ಟ್‌ನಿಂದ ಪ್ರಮುಖ ಬೌಲರ್ ಹೊರಕ್ಕೆ

ಮಾಜಿ ನಾಯಕ ವಿರಾಟ್ ಕೊಹ್ಲಿ

ಮಾಜಿ ನಾಯಕ ವಿರಾಟ್ ಕೊಹ್ಲಿ

ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತ್ಯುನ್ನತ ದಾಖಲೆಗಳನ್ನು ಬರೆದಿದ್ದು ಆಧುನಿಕ ಕ್ರಿಕೆಟ್‌ನ ಶ್ರೇಷ್ಠ ಆಟಗಾರ ಎನಿಸಿಕೊಂಡಿದ್ದಾರೆ. 254 ಇನ್ನಿಂಗ್ಸ್‌ಗಳಲ್ಲಿ 64 ಅರ್ಧ ಶತಕ ಹಾಗೂ 43 ಶತಕ ಸಿಡಿಸಿರುವ ಕೊಹ್ಲಿ 92.8ರ ಸ್ಟ್ರೈಕ್‌ರೇಟ್‌ನಲ್ಲಿ 57.46ರ ಸರಾಸರಿಯಲ್ಲಿ ರನ್‌ಗಳಿಸಿದ್ದಾರೆ. ಆದರೆ ಈ ವರ್ಷ ವಿರಾಟ್ ಕೊಹ್ಲಿ ಅವರ ಏಕದಿನ ಮಾದರಿಯಲ್ಲಿನ ಪ್ರದರ್ಶನ ಅಷ್ಟೇನೂ ಉತ್ತಮವಾಗಿಲ್ಲ. ಫಾರ್ಮ್ ಕಳೆದುಕೊಂಡು ಕಠಿಣ ಸಂದರ್ಭವನ್ನು ಎದುರಿಸಿದ್ದ ಕೊಹ್ಲಿ ಟಿ20 ಮಾದರಿಯಲ್ಲಿ ಮತ್ತೆ ಫಾರ್ಮ್ ಕಂಡುಕೊಂಡು ಮಿಂಚುತ್ತಿದ್ದಾರೆ. ಆದರೆ ಏಕದಿನ ಮಾದರಿಯಲ್ಲಿಯೂ ಕೊಹ್ಲಿಯಿಂದ ಅದ್ಭುತ ಪ್ರದರ್ಶನದ ನಿರೀಕ್ಷೆಯಿದ್ದು ಬಾಂಗ್ಲಾದೇಶ ವಿರುದ್ಧದ ಎರಡನೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಭಾರತ ತಂಡಕ್ಕೆ ಮತ್ತೊಮ್ಮೆ ಆಸರೆಯಾಗಬೇಕಿದೆ.

ಯುವ ವೇಗಿ ಕುಲ್ದೀಪ್ ಸೇನ್

ಯುವ ವೇಗಿ ಕುಲ್ದೀಪ್ ಸೇನ್

ಯುವ ಆಟಗಾರ ಕುಲ್ದೀಪ್ ಸೇನ್ 14 ಲಿಸ್ಟ್ ಎ ಪಂದ್ಯಗಳಲ್ಲಿ ಆಡಿದ್ದಾರೆ. ವಿಜಯ್ ಹಜಾರೆ ಟೂರ್ನಿಯಲ್ಲಿ ಮಧ್ಯ ಪ್ರದೇಶ ತಂಡದ ಪರವಾಗಿ ಈ ಆವೃತ್ತಿಯಲ್ಲಿ ನೀಡಿದ ಪ್ರದರ್ಶನದಿಂದಾಗಿ ಭಾರತ ತಂಡದಲ್ಲಿ ಮೊದಲ ಬಾರಿಗೆ ಅವಕಾಶ ಪಡೆದುಕೊಂಡಿದ್ದಾರೆ. ಕಳೆದ ಪಂದ್ಯದಲ್ಲಿ ಚೊಚ್ಚಲ ಬಾರಿಗೆ ಭಾರತ ತಮಡದಲ್ಲಿ ಆಡಿದ ಕುಲ್ದೀಪ್ ಸೇನ್ ಎರಡು ವಿಕೆಟ್ ಪಡೆದು ಮಿಂಚಿದ್ದಾರೆ. ಆದರೆ ಕುಲ್ದೀಪ್ ಸೇನ್ ಬೌಲಿಂಗ್ ಪರಿಣಾಮಕಾರಿ ಎನಿಸಿಲ್ಲ. ಹೀಗಾಗಿ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಆಡುವ ಮತ್ತೊಂದು ಅವಕಾಶ ದೊರೆತರೆ ಅದನ್ನು ಎರಡೂ ಕೈಗಳಿಒಂದ ಬಾಚಿಕೊಳ್ಳಬೇಕಾದ ಅಗತ್ಯವಿದೆ. ಇಲ್ಲವಾದಲ್ಲಿ ಮುಂದಿನ ಪಂದ್ಯದಲ್ಲಿ ಬೆಂಚ್ ಕಾಯಬೇಕಾಗುತ್ತದೆ.

ಅನುಭವಿ ಆಟಗಾರ ಶಿಖರ್ ಧವನ್

ಅನುಭವಿ ಆಟಗಾರ ಶಿಖರ್ ಧವನ್

ಟೀಮ್ ಇಂಡಿಯಾದ ಅನುಭವಿ ಆಟಗಾರ ಶಿಖರ್ ಧವನ್ ಸದ್ಯ ಏಕದಿನ ಮಾದರಿಯಲ್ಲಿ ಮಾತ್ರವೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಈ ವರ್ಷ ಶಿಖರ್ ಧವನ್ ಸ್ಥಿರ ಪ್ರದರ್ಶನ ನೀಡಲು ವಿಫಲವಾಗಿದ್ದಾರೆ. ಆರಂಭಿಕ ಸ್ಥಾನಕ್ಕೆ ಸಾಕಷ್ಟು ಪೈಪೋಟಿಗಳಿದ್ದು ರೋಹಿತ್ ಶರ್ಮಾ ಜೊತೆಗೆ ಆರಂಭಿಕನಾಗು ಕಣಕ್ಕಿಳಿಯಲು ಯುವ ಆಟಗಾರರ ಪೈಪೋಟಿ ಜೋರಾಗಿದೆ. ಶುಬ್ಮನ್ ಗಿಲ್, ಋತುರಾಜ್ ಗಾಯಕ್ವಾಡ್ ಅವರಂತಾ ಆಟಗಾರರು ಪೈಪೋಟಿಯೊಡ್ಡುತ್ತಿದ್ದಾರೆ. ಹೀಗಾಗಿ ಶಿಖರ್ ಧವನ್ ಬಾಂಗ್ಲಾದೇಶ ವಿರುದ್ದದ ಎರಡನೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬೇಕಿದೆ.

Story first published: Tuesday, December 6, 2022, 20:52 [IST]
Other articles published on Dec 6, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X