IND vs BAN: ಟಿ20 ವಿಶ್ವಕಪ್ ಪಂದ್ಯದಲ್ಲಿ ನಮ್ಮೆಲ್ಲರ ಗಲ್ಲಿ ಕ್ರಿಕೆಟ್ ನೆನಪಿಸಿದ ವಿರಾಟ್ ಕೊಹ್ಲಿ; ವಿಡಿಯೋ ವೈರಲ್
ಶನಿವಾರ, ಜೂನ್ 22ರಂದು ಆಂಟಿಗುವಾದಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ಸೂಪರ್ 8ರ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಬಾಂಗ್ಲಾದೇಶ ವಿರುದ್ಧ 50 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು.
ಬಾಂಗ್ಲಾದೇಶದ ವಿರುದ್ಧ ಭಾರತದ ಗೆಲುವು 2024ರ ಟಿ20 ವಿಶ್ವಕಪ್‌ನ ಸೂಪರ್-8ರ ಹಂತದಲ್ಲಿ ಆಡಿದ ಎರಡು ಪಂದ್ಯಗಳಲ್ಲಿ ಸತತ ಎರಡನೇ ಗೆಲುವು ದಾಖಲಿಸಿತು.

ಸೆಮಿಫೈನಲ್ ರೇಸ್‌ಗೆ ಸಂಬಂಧಿಸಿದಂತೆ ಬಾಂಗ್ಲಾದೇಶ ತಂಡದ ಸನ್ನಿವೇಶ ಅನಿಶ್ಚಿತ ಸ್ಥಿತಿಯಲ್ಲಿದ್ದರೆ, ಈ ಗೆಲುವು ಟಿ20 ವಿಶ್ವಕಪ್‌ನ ಪಂದ್ಯಾವಳಿಯ ಸೆಮಿಫೈನಲ್‌ಗೆ ಪ್ರವೇಶಿಸಲು ಟೀಮ್ ಇಂಡಿಯಾವನ್ನು ಇನ್ನಷ್ಟು ಸಮೀಪದಲ್ಲಿರಿಸಿದೆ.
ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ತಮ್ಮ ಗಲ್ಲಿ ಕ್ರಿಕೆಟ್ ವರ್ತನೆಯೊಂದಿಗೆ ನಮ್ಮೆಲ್ಲರ ಬಾಲ್ಯದ ನೆನಪುಗಳನ್ನು ಬಡಿದೆಬ್ಬಿಸಿದರು. ಮೈದಾನದಲ್ಲಿ ನೆರೆದಿದ್ದ ಅಭಿಮಾನಿಗಳು ಕೂಡ ಈ ತಮಾಷೆಯ ಕ್ಷಣಕ್ಕೆ ಸಾಕ್ಷಿಯಾದರು.

ಅಕ್ಷರ್ ಪಟೇಲ್ ಎಸೆದ ಬೌಲಿಂಗ್‌ನಲ್ಲಿ ಬಾಂಗ್ಲಾದೇಶ ಬ್ಯಾಟರ್ ರಿಶಾದ್ ಹೊಸೈನ್ ಬೃಹತ್ ಸಿಕ್ಸರ್ ಬಾರಿಸಿದರು. ಚೆಂಡು ಬೌಂಡರಿ ಹೊರಗೆ ಇರಿಸಿದ್ದ ಚೌಕಟ್ಟಿನ ಕೆಳಗೆ ಹೋಯಿತು. ಆದರೆ, ಸಾರ್ವಕಾಲಿಕ ಅಂತಾರಾಷ್ಟ್ರೀಯ ಶ್ರೇಷ್ಠ ಕ್ರಿಕೆಟಿಗ ವಿರಾಟ್ ಕೊಹ್ಲಿ ಯಾವುದೇ ಹಿಂಜರಿಕೆ ಇಲ್ಲದೆ ಚೆಂಡನ್ನು ಹುಡುಕಲು ಕೆಳಗೆ ನುಗ್ಗಿದರು.
ಚೌಕಟ್ಟಿನ ಕೆಳಗೆ ಒದ್ದಾಡುತ್ತಾ ಚೆಂಡನ್ನು ಹುಡುಕಿದ ವಿರಾಟ್ ಕೊಹ್ಲಿ ತಮ್ಮ ಬಾಲ್ಯದ ನೆನಪು ಮತ್ತು ಗಲ್ಲಿ ಕ್ರಿಕೆಟ್ ಅನ್ನು ಟಿ20 ವಿಶ್ವಕಪ್ ಪಂದ್ಯದಲ್ಲಿ ಮರುಕಳಿಸಿದರು. ಇದು ಒಬ್ಬ ನಿಜವಾದ ಕ್ರಿಕೆಟಿಗನ ಬದ್ಧತೆ ಮತ್ತು ಸಮರ್ಪಣೆಯನ್ನು ಎತ್ತಿತೋರಿಸುತ್ತದೆ.
ಬಾಂಗ್ಲಾದೇಶದ ವಿರುದ್ಧ ಸುಲಭ ಗೆಲುವು ದಾಖಲಿಸಿದ ಭಾರತ
ಪಂದ್ಯದ ಕುರಿತು ಹೇಳುವುದಾದರೆ, ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ ತಂಡದ ನಿರ್ಧಾರವು ಹಿನ್ನಡೆಯಾಯಿತು. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ 196 ರನ್ ಗಳಿಸಿತು ಮತ್ತು ಬಾಂಗ್ಲಾದೇಶದ ಬೌಲಿಂಗ್ ವಿಭಾಗದ ವಿರುದ್ಧ ಹೆಚ್ಚು ತೊಂದರೆ ಅನುಭವಿಸಲಿಲ್ಲ.

ನಾಯಕ ರೋಹಿತ್ ಶರ್ಮಾ ಉತ್ತಮವಾಗಿ ಆರಂಭ ನೀಡಿದರು ಮತ್ತು 11 ಎಸೆತಗಳಲ್ಲಿ 23 ರನ್ ಗಳಿಸಿ ಔಟಾದರು. ವಿರಾಟ್ ಕೊಹ್ಲಿ 28 ಎಸೆತಗಳಲ್ಲಿ 1 ಬೌಂಡರಿ ಮತ್ತು 3 ಸಿಕ್ಸರ್‌ಗಳೊಂದಿಗೆ 37 ರನ್ ಗಳಿಸಿದರು.
ತಂಝಿಮ್ ಹಸನ್ ಸಾಕಿಬ್ ಮೂರು ಎಸೆತಗಳ ಅಂತರದಲ್ಲಿ ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಅವರ ವಿಕೆಟ್ ಪಡೆದು ಬಾಂಗ್ಲಾದೇಶಕ್ಕೆ ಮುನ್ನಡೆ ತಂದುಕೊಟ್ಟರು.
ನಂತರ ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ಐದನೇ ವಿಕೆಟ್‌ಗೆ 53 ರನ್‌ಗಳ ಜೊತೆಯಾಟ ನೀಡಿದರು. ಈ ಇಬ್ಬರು ಭಾರತೀಯ ಬ್ಯಾಟರ್‌ಗಳು ಎದುರಾಳಿ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಹಾರ್ದಿಕ್ ಪಾಂಡ್ಯ 27 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಮೇತ ಅಜೇಯ 50 ರನ್ ಗಳಿಸಿದರು.
197 ರನ್‌ಗಳನ್ನು ಬೆನ್ನಟ್ಟಿದ ಬಾಂಗ್ಲಾದೇಶ ತಂಡದ ಬ್ಯಾಟರ್‌ಗಳು ಭಾರತೀಯ ಬೌಲರ್‌ಗಳ ಎದುರು ಪರದಾಡಿದರು. ನಿಯಮಿತವಾಗಿ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಸಾಗಿದರು. ನಾಯಕ ನಜ್ಮುಲ್ ಹೊಸೈನ್ ಶಾಂಟೊ ಮಾತ್ರ 32 ಎಸೆತಗಳಲ್ಲಿ 40 ರನ್ ಗಳಿಸಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಉಳಿದಂತೆ ರಿಶಾದ್ ಹೊಸೈನ್ 10 ಎಸೆತಗಳಲ್ಲಿ 24 ರನ್ ಸೇರಿಸುವ ಮೂಲಕ ಕೊಡುಗೆ ನೀಡಿದರು.
ಜಸ್ಪ್ರೀತ್ ಬುಮ್ರಾ 4 ಓವರ್‌ಗಳಲ್ಲಿ 13 ರನ್ ನೀಡಿ 2 ವಿಕೆಟ್ ಪಡೆಯುವ ಮೂಲಕ ಮತ್ತೊಮ್ಮೆ ಅತ್ಯುತ್ತಮ ಪ್ರದರ್ಶನ ನೀಡಿದರೆ, ಕುಲದೀಪ್ ಯಾದವ್ 4 ಓವರ್‌ಗಳ ಕೋಟಾದಲ್ಲಿ 19 ರನ್ ನೀಡಿ 3 ವಿಕೆಟ್ ಕಬಳಿಸುವ ಮೂಲಕ ಭಾರತವನ್ನು ಸುಲಭವಾಗಿ ಗೆಲ್ಲಲು ಸಹಾಯ ಮಾಡಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications