For Quick Alerts
ALLOW NOTIFICATIONS  
For Daily Alerts
 

Ind vs Ban : ಟೀಮ್ ಇಂಡಿಯಾದ ಮತ್ತೊಂದು ಸರಣಿಗೆ ಕ್ಷಣಗಣನೆ: ಬಾಂಗ್ಲಾದೇಶಕ್ಕೆ ಹಾರಿದ ಕೊಹ್ಲಿ, ಪೂಜಾರ, ಉಮೇಶ್

Ind vs Bangla: Virat Kohli, Cheteshwar Pujara and Umesh Yadav fly to Bangladesh ahead of ODI and Test series

ಭಾರತ ಕ್ರಿಕೆಟ್ ತಂಡ ನ್ಯೂಜಿಲೆಂಡ್ ಪ್ರವಾಸ ಅಂತ್ಯಗೊಳಿಸಿದ್ದು ಇದೀಗ ಬಾಂಗ್ಲಾದೇಶ ವಿರುದ್ಧ ಸರಣಿಗೆ ಸಜ್ಜಾಗಿದೆ. ಈ ಸರಣಿಯಲ್ಲಿ ಭಾಗಿಯಾಗುವ ಸಲುವಾಗಿ ಟೀಮ್ ಇಂಡಿಯಾದ ಅನುಭವಿ ಆಟಗಾರರು ಬಾಂಗ್ಲಾದೇಶಕ್ಕೆ ಪ್ರಯಾಣಿಸಿದ್ದಾರೆ. ಟೀಮ್ ಇಂಡಿಯಾದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ಉಮೇಶ್ ಯಾದವ್ ಹಾಗೂ ಚೇತೇಶ್ವರ್ ಪೂಜಾರ ಬಾಂಗ್ಲಾದೇಶಕ್ಕೆ ಪ್ರಯಾಣವನ್ನು ಬೆಳೆಸಿದ್ದು ನಾಜಿ ನಾಯಕ ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಭಾರತ ತಂಡ ಬಾಂಗ್ಲಾದೇಶದಲ್ಲಿ ಬಹುತೇಕ ಒಂದು ತಿಂಗಳುಗಳ ಕಾಲ ಎರಡು ಮಾದರಿಯ ಸರಣಿಯಲ್ಲಿ ಸೆಣೆಸಾಟ ನಡೆಸಲಿದೆ. ಎರಡು ಟೆಸ್ಟ್ ಪಂದ್ಯ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಲಿದೆ.

ಇತ್ತೀಚೆಗೆ ಅಂತ್ಯವಾದ ನ್ಯೂಜಿಲೆಂಡ್ ಪ್ರವಾಸದಲ್ಲಿ ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಭಾರತ ತಂಡ ಕಣಕ್ಕಿಳಿದಿದ್ದರೆ ಏಕದಿನ ಸರಣಿಯಲ್ಲಿ ಶಿಖರ್ ಧವನ್ ನಾಯಕತ್ವದಲ್ಲಿ ಭಾರತ ತಂಡ ಆಡಿತ್ತು. ಹಲವು ಯುವ ಆಟಗಾರರು ಈ ಸರಣಿಯಲ್ಲಿಆಡುವ ಅವಕಾಶ ಗಳಿಸಿಕೊಂಡಿದ್ದರು. ಇದೀಗ ಬಾಂಗ್ಲಾದೇಶದ ವಿರುದ್ಧದ ಸರಣಿಯಲ್ಲಿ ಹಿರಿಯ ಆಟಗಾರರು ಮತ್ತೆ ತಂಡಕ್ಕೆ ವಾಪಾಸಾಗಿದ್ದಾರೆ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಮೊಹಮ್ಮದ್ ಶಮಿ ಮತ್ತು ಅಕ್ಷರ್ ಪಟೇಲ್ ಟಿ20 ವಿಶ್ವಕಪ್ ನಂತರ ನ್ಯೂಜಿಲೆಂಡ್ ಪ್ರವಾಸದಿಂದ ವಿಶ್ರಾಂತಿ ಪಡೆದುಕೊಂಡು ಭಾರತಕ್ಕೆ ವಾಪಾಸಾಗಿದ್ದರು. ಉಳಿದಂತೆ ಕಿವೀಸ್ ಪ್ರವಾಸದಲ್ಲಿ ಭಾಗಿಯಾಗಿದ್ದ ಶಿಖರ್ ಧವನ್ (ಕೇವಲ ಏಕದಿನ ಸರಣಿಗೆ), ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್ ಮತ್ತು ರಿಷಬ್ ಪಂತ್ ಕೂಡ ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಆಡಲಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಶ್ವಕಪ್‌ನಲ್ಲಿ ಆಡಿದ 6 ಪಂದ್ಯಗಳಲ್ಲಿ 296 ರನ್ ಗಳಿಸಿ ಈ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. ವಿಶ್ವಕಪ್ ಮುಕ್ತಾಯದ ಬಳಿಕ ಭಾರತಕ್ಕೆ ವಾಪಾಸಾಗಿದ್ದ ಅವರು ಪತ್ನಿ ಅನುಷ್ಕಾ ಶರ್ಮಾ ಮತ್ತು ಮಗಳು ವಾಮಿಕಾ ಅವರೊಂದಿಗೆ ಉತ್ತರಾಖಂಡದಲ್ಲಿ ಕೆಲ ಪ್ರವಾಸಿ ತಾಣಗಳಿಗೆ ಬೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಅಭಿಮಾನಿಗಳೊಂದಿಗೆ ಛಾಯಾಚಿತ್ರಗಳಿಗೆ ಪೋಸ್ ನೀಡಿದ್ದು, ಕೆಲ ದೇವಸ್ಥಾನಗಳಿಗೂ ಅವರು ಭೇಟಿ ನೀಡಿದ್ದಾರೆ.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (WK), ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಕುಲದೀಪ್ ಸೇನ್

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ರವಿಚಂದ್ರನ್ ಅಶ್ವಿನ್, ಕೆಎಸ್ ಭರತ್ (ವಿಕೆಟ್ ಕೀಪರ್), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಚೇತೇಶ್ವರ್ ಪೂಜಾರ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಉಮೇಶ್ ಯಾದವ್

Story first published: Thursday, December 1, 2022, 17:17 [IST]
Other articles published on Dec 1, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+