IND vs ENG 1st T20: ಶ್ರೇಯಸ್ ಅಯ್ಯರ್ ನಾಯಕತ್ವದ ಚೊಚ್ಚಲ ಗೆಲುವಿನ ಆಸೆಗೆ ತಣ್ಣೀರೆರಚಿದ ಮಳೆ!
ಚೆಸ್ಟರ್-ಲೆ-ಸ್ಟ್ರೀಟ್: ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಸೋಲಿನ ಸರಪಳಿ ಕಳಚಿಕೊಳ್ಳುವ ಯೋಜನೆಯನ್ನು ರೂಪಿಸಿಕೊಂಡಿದ್ದ ಶ್ರೇಯಸ್ ಅಯ್ಯರ್ ಅವರ ಆಸೆ ಕಮರಿದೆ. ಟೀಮ್ ಇಂಡಿಯಾ 20 ಓವರ್ ಪೂರ್ಣ ಬ್ಯಾಟಿಂಗ್ ನಡೆಸಿ 190 ರನ್‌ಗಳ ಗುರಿಯನ್ನು ಇಂಗ್ಲೆಂಡ್ ತಂಡಕ್ಕೆ ನೀಡಿತು. ಆದರೆ ಇಂಗ್ಲೆಂಡ್ ಬ್ಯಾಟಿಂಗ್ ಬರುವ ಮುನ್ನವೇ ಮಳೆ ಆರಂಭವಾಗಿ ಪಂದ್ಯಕ್ಕೆ ಅಡ್ಡಿ ಪಡಿಸಿತು. ಪರಿಣಾಮ ಮೊದಲ ಪಂದ್ಯ ರದ್ದಾಯಿತು.
ಈಗಾಗಲೇ ಐರ್ಲೆಂಡ್ ಪ್ರವಾಸದಲ್ಲಿ ಆಡಿದ ಎರಡು ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸೋಲು ಕಂಡಿತ್ತು. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾ, ಮೊದಲ ಪಂದ್ಯದಲ್ಲಿ 34 ರನ್ ಸೋಲು ಹಾಗೂ ಎರಡನೇ ಪಂದ್ಯದಲ್ಲಿ 1 ರನ್ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಹೀಗಾಗಿ ಶ್ರೇಯಸ್ ಅಯ್ಯರ್ ನಾಯಕನಾಗಿ ಮೊದಲ ಗೆಲುವಿನ ನಗೆ ಬೀರುವ ಕನಸು ಇಂಗ್ಲೆಂಡ್‌ಗೆ ಶಿಫ್ಟ್ ಆಗಿತ್ತು.

ಮೊದಲ ಪಂದ್ಯದಲ್ಲೂ ಟೀಮ್ ಇಂಡಿಯಾ ಇದಕ್ಕೆ ಭರ್ಜರಿ ವೇದಿಕೆಯನ್ನು ಕಲ್ಪಿಸಿಕೊಂಡಿತ್ತು. ಟಾಸ್ ಗೆಲ್ಲುತ್ತಿದ್ದಂತೆ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ಮಾಡಿತು. ಆದರೆ ಈ ಪಂದ್ಯದಲ್ಲೂ ಟೀಮ್ ಇಂಡಿಯಾ ವೈಭವ್ ಸೂರ್ಯವಂಶಿ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ನೀಡಲಿಲ್ಲ. ಶ್ರೇಯಸ್ ಅಯ್ಯರ್ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಅವರ ಮೇಲೆ ವಿಶ್ವಾಸ ಇಟ್ಟರು.
ಸಂಜು ವೈಫಲ್ಯ
ಆದರೆ ಸಂಜು ಸ್ಯಾಮ್ಸನ್ ಇಂಗ್ಲೆಂಡ್ ಪ್ರವಾಸದ ಮೊದಲ ಪಂದ್ಯದಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾದರು. ಮೊದಲ ಪಂದ್ಯದಲ್ಲಿ ಸಂಜು ಕೇವಲ 1 ರನ್‌ಗಳಿಗೆ ಔಟ್ ಆದರು. ಇನ್ನು ಬುಧವಾರ ಟಿ20 ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನವನ್ನು ಅಲಂಕರಿಸಿದ್ದ ಇಶಾನ್ ಕಿಶನ್, ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆದರು. 6 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಶ್ರೇಯಸ್ ಅಯ್ಯರ್ ಹಾಗೂ ಅಭಿಷೇಕ್ ಶರ್ಮಾ ಆಧಾರವಾದರು.
ಅಭಿಷೇಕ್, ಶ್ರೇಯಸ್ ಅರ್ಧಶತ
ಮೂರನೇ ವಿಕೆಟ್‌ಗೆ ಅಭಿಷೇಕ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ 38 ಎಸೆತಗಳಲ್ಲಿ 82 ರನ್ ಸಿಡಿಸಿದರು. ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ ಅಭಿಷೇಕ್ ಶರ್ಮಾ 24 ಎಸೆತಗಳಲ್ಲಿ 6 ಬೌಂಡರಿ, 4 ಸಿಕ್ಸರ್ ಸಹಾಯದಿಂದ 59 ರನ್ ಬಾರಿಸಿದರು. ನಾಲ್ಕನೇ ವಿಕೆಟ್‌ಗೆ ಶ್ರೇಯಸ್ ಜೊತೆಗೂಡಿದ ತಿಲಕ್ ವರ್ಮಾ 36 ರನ್‌ಗಳ ಜೊತೆಯಾಟ ನೀಡಿತು. ತಿಲಕ್ ವರ್ಮಾ 13 ರನ್ ಬಾರಿಸಿ ಔಟ್ ಆದರು. ಶ್ರೇಯಸ್ ಅಯ್ಯರ್ 47 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಸಹಾಯದಿಂದ 68 ರನ್ ಬಾರಿಸಿ ಔಟ್ ಆದರು.
ಆಲ್‌ರೌಂಡರ್ ಶಿವಂ ದುಬೆ ಅಬ್ಬರ ನಡೆಸಿದರು. ಇವರು 21 ಎಸೆತಗಳಲ್ಲಿ ಅಜೇಯ 42 ರನ್ ಬಾರಿಸಿದರು. ಈ ವೇಳೆ 2 ಬೌಂಡರಿ, 3 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಅಂತಿಮಾಗಿ ಭಾರತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 189 ರನ್ ಸೇರಿಸಿತು. ಆದರೆ ಇಂಗ್ಲೆಂಡ್ ಬ್ಯಾಟಿಂಗ್ ಮಾಡುವಾಗ ಮಳೆ ಆರಂಭವಾಗಿ ಪಂದ್ಯಕ್ಕೆ ಅಡ್ಡಿ ಪಡಿಸಿತು. ಉಭಯ ದೇಶಗಳ ನಡುವಣ ಎರಡನೇ ಟಿ20 ಪಂದ್ಯ ಶನಿವಾರ (ಜುಲೈ 4) ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ. ಎರಡನೇ ಟಿ20 ಪಂದ್ಯದ ಸಂಜೆ 7 ಗಂಟೆಗೆ ಆರಂಭವಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications

