Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs ENG: ಟಾಸ್‌ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ: ವೈಭವ್ ಸೂರ್ಯವಂಶಿಗೆ ಇಲ್ಲ ಸ್ಥಾನ

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನು ಬುಧವಾರ ಆಡಲು ಸಜ್ಜಾಗಿದೆ. ಐರ್ಲೆಂಡ್ ಪ್ರವಾಸದ ಕಹಿಯನ್ನು ಮರೆಯಲು, ಶ್ರೇಯಸ್ ಅಯ್ಯರ್ ಪಡೆಗೆ ಒಳ್ಳೆಯ ಅವಕಾಶ ಲಭಿಸಿದೆ. ಈ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ಮಾಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲೂ ಟೀಮ್‌ ಇಂಡಿಯಾ ಪ್ಲೇಯಿಂಗ್ ಇಲೆವೆನ್‌ನಲ್ಲಿ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರಿಗೆ ಸ್ಥಾನ ಲಭಿಸಿಲ್ಲ.

ಟೀಮ್ ಇಂಡಿಯಾ ಈ ಮಹತ್ವದ ಪಂದ್ಯಕ್ಕಾಗಿ ಮೂರು ಸ್ಪಿನ್ ಬೌಲರ್‌ಗಳು ಹಾಗೂ ಇಬ್ಬರು ವೇಗದ ಬೌಲರ್‌ಗಳೊಂದಿಗೆ ಕಣಕ್ಕೆ ಇಳಿಯಲಿದೆ. ಇನ್ನು ಟೀಮ್ ಇಂಡಿಯಾ ಆರಂಭಿಕರಾಗಿ ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್‌ ಕಾಣಿಸಿಕೊಳ್ಳಲಿದ್ದಾರೆ. ವಿಶ್ವದ ನಂಬರ್ ಟಿ20 ಬ್ಯಾಟರ್ ಇಶಾನ್‌ ಕಿಶನ್‌ ಮೂರನೇ ಕ್ರಮಾಂಕದಲ್ಲಿದ್ದಾರೆ. ಇನ್ನು ನಾಲ್ಕನೇ ಶ್ರೇಯಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದಾರೆ.

IND vs ENG 1st T20I

ಇಂಗ್ಲೆಂಡ್‌ ಪ್ರವಾಸಕ್ಕೆ ಪ್ರಕಟಿತ ತಂಡದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ ಅವರಿಗೆ ಸ್ಥಾನ ನೀಡಲಾಗಿತ್ತು. ಇವರಿಗೆ ಐರ್ಲೆಂಡ್‌ ವಿರುದ್ಧದ ಸರಣಿಯಲ್ಲಿ ಆಡುವ ಅವಕಾಶ ಸಿಗಬಹುದು ಎಂದು ಲೆಕ್ಕಾಚಾರ ಹಾಕಿಕೊಳ್ಳಲಾಗಿತ್ತು. ಆದರೆ ಐರ್ಲೆಂಡ್‌ನಲ್ಲಿ ನಡೆದ 2 ಟಿ20 ಸರಣಿಗಳಲ್ಲಿ ಇವರಿಗೆ ಆಡುವ ಅವಕಾಶ ಲಭಿಸಲಿಲ್ಲ. ಹೀಗಾಗಿ ಇವರಿಗೆ ಇಂಗ್ಲೆಂಡ್ ಸರಣಿಯ ವೇಳೆ ಅವಕಾಶ ಲಭಿಸಬಹುದು ಎಂಬ ಲೆಕ್ಕಾಚಾರ ಹಾಕಿಕೊಳ್ಳಲಾಗಿತ್ತು. ಆದರೆ ಈ ಆಸೆ ಮೊದಲ ಪಂದ್ಯದಲ್ಲಿ ನುಚ್ಚುನೂರಾಗಿದೆ.

ವರುಣ್‌ ಚಕ್ರವರ್ತಿ ಬ್ಯಾಕ್‌

ಟೀಮ್ ಇಂಡಿಯಾದ ಸ್ಪಿನ್ ಬೌಲರ್‌ ವರುಣ್ ಚಕ್ರವರ್ತಿ ತಂಡ ಸೇರಿಕೊಂಡಿದ್ದಾರೆ. ಇವರು ಐರ್ಲೆಂಡ್‌ ವಿರುದ್ಧದ ಟಿ20 ಸರಣಿಯಲ್ಲಿ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ. ಇವರು ಇಂಗ್ಲೆಂಡ್‌ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ. ಇವರೊಂದಿಗೆ ರವಿ ಬಿಷ್ಣೋಯಿ ಹಾಗೂ ಅಕ್ಷರ್ ಪಟೇಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಟೀಮ್ ಇಂಡಿಯಾ ಪ್ಲೇಯಿಂಗ್ XI: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ, ಹರ್ಷಿತ್ ರಾಣಾ, ಶಿವಂ ದುಬೆ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಶ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ.

ಇಂಗ್ಲೆಂಡ್ ಪ್ಲೇಯಿಂಗ್ XI: ಫಿಲ್ ಸಾಲ್ಟ್, ಜೋಸ್ ಬಟ್ಲರ್, ಹ್ಯಾರಿ ಬ್ರೂಕ್, ಜೇಕಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರ್ರನ್, ವಿಲ್ ಜ್ಯಾಕ್ಸ್, ಲಿಯಾಮ್ ಡಾಸನ್, ಆದಿಲ್ ರಶೀದ್, ಲ್ಯೂಕ್ ವುಡ್, ಸಾಕಿಬ್ ಮಹ್ಮೂದ್.

Story first published: Wednesday, July 1, 2026, 21:46 [IST]
Other articles published on Jul 1, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+