Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs ENG 2nd ODI: ಬದಲಾಯಿತು ಪಂದ್ಯದ ಸಮಯ, ಪ್ಲೇಯಿಂಗ್ ಇಲೆವೆನ್‌, ನೇರಪ್ರಸಾರದ ಮಾಹಿತಿ

ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಏಕದಿನ ಪಂದ್ಯ ಕಾರ್ಡಿಫ್‌ನಲ್ಲಿ ಗುರುವಾರ ನಡೆಯಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 1-0 ಮುನ್ನಡೆ ಸಾಧಿಸಿದ್ದು, ಎರಡನೇ ಪಂದ್ಯವನ್ನು ಗೆದ್ದು ಸರಣಿಯನ್ನು ಕೈ ವಶ ಮಾಡಿಕೊಳ್ಳುವ ಪ್ಲ್ಯಾನ್ ಮಾಡಿಕೊಂಡಿದೆ. ಆದರೆ ಎರಡನೇ ಏಕದಿನ ಪಂದ್ಯ ನಡೆಯುವ ಸಮಯ ಬದಲಾಗಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಮೊದಲ ಏಕದಿನ ಪಂದ್ಯ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದಿತ್ತು. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3.30ಕ್ಕೆ ಆರಂಭವಾಗಿತ್ತು. ಆದರೆ ಕಾರ್ಡಿಫ್‌ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯದ ಸಮಯ ಬದಲಾಗಿದೆ. ಎರಡನೇ ಏಕದಿನ ಪಂದ್ಯ ನಡೆಯುವುದು ಯಾವಾಗ ಎಂಬ ಬಗ್ಗೆ ಕಂಪ್ಲೀಟ್ ಮಾಹಿತಿ ಇಲ್ಲಿದೆ.

IND vs ENG 2nd ODI

ಎರಡನೇ ಏಕದಿನ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 5.30ಕ್ಕೆ ಆರಂಭವಾಗಲಿದೆ. ಪಂದ್ಯ ಆರಂಭಕ್ಕೂ ಅರ್ಧಗಂಟೆ ಮುನ್ನ ಮಹತ್ವದ ಟಾಸ್ ನಡೆಯಲಿದೆ. ಈ ಪಂದ್ಯದಲ್ಲಿ ಪುಟಿದೇಳುವ ಯೋಚನೆ ಹ್ಯಾರಿ ಬ್ರೂಕ್ ಪಡೆಯದ್ದಾಗಿದೆ.

ವಿರಾಟ್, ರೋಹಿತ್ ಆಕರ್ಷಣೆ

ಟೀಮ್ ಇಂಡಿಯಾದ ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಕನಸು ಕಾಣುತ್ತಿದೆ. ಈ ವೇಳೆ ಎಲ್ಲರ ಕಣ್ಣುಗಳು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರ ಮೇಲೆ ನೆಟ್ಟಿರಲಿವೆ. ಇವರು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದಿದ್ದ ಮೊದಲ ಏಕದಿನ ಪಂದ್ಯದಲ್ಲಿ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾಗಿದ್ದರು. ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿ ತಂಡ ತಮ್ಮ ಮೇಲೆ ಇಟ್ಟ ನಂಬಿಕೆಯನ್ನು ಉಳಿಸಿಕೊಳ್ಳುವ ಇರಾದೆ ಈ ಆಟಗಾರರದ್ದಾಗಿದೆ.

ದಾಖಲೆಯ ಮೇಲೆ ಪ್ರಸಿದ್ಧ್ ಕಣ್ಣು

ಈ ಪಂದ್ಯದಲ್ಲಿ ಪ್ರಸಿದ್ಧ್ ಕೃಷ್ಣ ಸಹ ದೊಡ್ಡ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಇವರು ಈ ಪಂದ್ಯದಲ್ಲಿ ಮೂರು ವಿಕೆಟ್‌ ಪಡೆಯುವಲ್ಲಿ ಸಫಲರಾದರೆ, ಏಕದಿನ ಕ್ರಿಕೆಟ್‌ನಲ್ಲಿ 50 ವಿಕೆಟ್‌ಗಳನ್ನು ಪೂರೈಸಿದ ದಾಖಲೆಯನ್ನು ನಿರ್ಮಿಸಲಿದ್ದಾರೆ.

ಹೇಗಿರಲಿದೆ ಭಾರತದ ಪ್ಲೇಯಿಂಗ್ ಇಲೆವೆನ್‌?

ರೋಹಿತ್ ಶರ್ಮಾ, ಶುಭಮನ್‌ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್‌, ಕೆಎಲ್ ರಾಹುಲ್‌, ವಾಷಿಂಗ್ಟನ್‌ ಸುಂದರ್‌, ಶಿವಂ ದುಬೆ, ಜಸ್ಪ್ರೀತ್ ಬುಮ್ರಾ, ಗುರ್ನೂರ್ ಬ್ರಾರ್‌, ಪ್ರಸಿದ್ಧ್‌ ಕೃಷ್ಣ,

ಇಂಗ್ಲೆಂಡ್‌ ಪ್ಲೇಯಿಂಗ್ ಇಲೆವೆನ್‌ನಲ್ಲಿ ಈ ಆಟಗಾರರಿಗೆ ಅವಕಾಶ

ಬೆನ್‌ ಡಕೆಟ್‌, ಜಾಕೊಬ್ ಬೆಥೆಲ್‌, ಜೋ ರೂಟ್‌, ಹ್ಯಾರಿ ಬ್ರೂಕ್‌, ಜೋಸ್ ಬಟ್ಲರ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಜೋಫ್ರಾ ಆರ್ಚರ್, ಜೋಶ್‌ ಟಂಗ್‌/ಬ್ರೈಡನ್ ಕಾರ್ಸೆ, ಸಕೀಬ್‌ ಮೊಹಮ್ಮದ್‌, ಆದಿಲ್‌ ರಶೀದ್‌,

ಪಂದ್ಯದ ನೇರ ಪ್ರಸಾರವನ್ನು ನೋಡುವುದು ಎಲ್ಲಿ?

ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಏಕದಿನ ಪಂದ್ಯವನ್ನು ಸೋನಿ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ. ಅಲ್ಲದೆ ಜಿಯೋ ಹಾಟ್‌ ಸ್ಟಾರ್ ಆಪ್‌ನಲ್ಲಿ ಆನ್‌ಲೈನ್‌ನಲ್ಲಿ ಈ ಪಂದ್ಯವನ್ನು ನೋಡಬಹುದಾಗಿದೆ.

Story first published: Thursday, July 16, 2026, 6:50 [IST]
Other articles published on Jul 16, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+