Ind vs Eng: ಲಾರ್ಡ್ಸ್‌ನಲ್ಲಿ ಭಾರತಕ್ಕೆ ಭಾರೀ ಸೋಲು: ಸರಣಿ ಸಮಬಲಗೊಳಿಸಿದ ಇಂಗ್ಲೆಂಡ್

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿಫಲವಾಗಿದ್ದು ಭಾರೀ ಅಂತರದಿಂದ ಸೋಲು ಕಂಡಿದೆ. ಲಾರ್ಡ್ಸ್ ಮೈದಾನದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ಇಂಗ್ಲೆಂಡ್ ತಂಡ ಭಾರತವನ್ನು 146 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ 100 ರನ್‌ಗಳ ಬೃಹತ್ ಅಂತರದಿಂದ ಪಂದ್ಯವನ್ನು ಗೆದ್ದುಕೊಂಡಿದೆ. ಈ ಮೂಲಕ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ತಂಡ ಸಮಬಲ ಸಾಧಿಸುವಲ್ಲಿ ಯಶಸ್ವಿಯಾಗಿದೆ.
ಇಂಗ್ಲೆಂಡ್ ನೀಡಿದ್ದ 247 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಆರಂಬದಿಂದಲೇ ಕಂಟುತ್ತಾ ಸಾಗಿತ್ತು. ನಂತರ ಒಂದರ ಬಳಿಕ ಒಂದರಂತೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಭಾರತ ತಂಡಕ್ಕೆ ಉತ್ತಮ ಜೊತೆಯಾಟ ದೊರೆಯಲಿಲ್ಲ. ಅಂತಿಮವಾಗಿ ಭಾರತ 146 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿತು.

ಭಾರತಕ್ಕೆ ತಡೆಯಾದ ಟಾಪ್ಲಿ
ಇಂಗ್ಲೆಂಡ್ ತಂಡದ ಪರವಾಗಿ ಅದ್ಭುತ ಬೌಲಿಂಗ್ ದಾಳಿ ನಡೆಸುವ ಮೂಲಕ ಭಾರತಕ್ಕೆ ಅಡ್ಡಿಯಾಗಿದ್ದು ರೀಸ್ ಟಾಪ್ಲಿ. ಅದ್ಭುತ ಬೌಲಿಂಗ್ ದಾಳಿ ನಡೆಸಿದ ಅವರು ಭಾರತದ ಆರು ವಿಕೆಟ್ ಕಿತ್ತು ಮಿಂಚಿದರು. ಭಾರತದ ಅಗ್ರ ಕ್ರಮಾಂಕದ ದಾಂಡಿಗರಾದ ರೋಹಿತ್ ಶರ್ಮಾ, ಶಿಖರ್ ಧವನ್, ಸೂರ್ಯಕುಮಾರ್ ಯಾದವ್ ವಿಕೆಟ್ ಪಡೆದು ಮಿಂಚಿದ ಟಾಪ್ಲಿ ಬಳಿಕ ಕೆಳ ಕ್ರಮಾಂಕದ ಆಟಗಾರರಾದ ಮೊಹಮ್ಮದ್ ಶಮಿ, ಯುಜುವೇಂದ್ರ ಚಾಹಲ್ ಹಾಗೂ ಪ್ರಸಿದ್ಧ್ ಕೃಷ್ಣ ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ಲಾರ್ಡ್ಸ್ ಅಂಗಳದ ಇತಿಹಾಸದಲ್ಲಿ ಏಕದಿನ ಮಾದರಿಯಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಇಂಗ್ಲೀಷ್ ಆಟಗಾರ ಎನಿಸಿಕೊಂಡಿದ್ದಾರೆ.

ಮಿಂಚಿದ ಭಾರತದ ಬೌಲಿಂಗ್ ವಿಭಾಗ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿಯೂ ಭಾರತ ತಂಡದ ಬೌಲಿಂಗ್ ವಿಭಾಗ ಮಿಂಚಿತು. ಲಾರ್ಡ್ಸ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತದ ಪರವಾಗಿ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಅದ್ಭುತ ಪ್ರದರ್ಶನ ನೀಡಿದ್ದು ಇಂಗ್ಲೆಂಡ್‌ನ ಪ್ರಮುಖ ದಾಂಡಿಗರಿಗೆ ಆಘಾತ ನೀಡಿದರು. ಕೆಳ ಕ್ರಮಾಂಕದಲ್ಲಿ ಮೊಯೀನ್ ಅಲಿ ಹಾಗೂ ಡೇವಿಡ್ ವಿಲ್ಲಿ ಅವರಿಂದ ಬಂದ ಅದ್ಭುತ ಪ್ರದರ್ಶನದ ಕಾರಣದಿಂದಾಗಿ ಇಂಗ್ಲೆಂಡ್ ತಂಡ 247 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು.

ಇಂಗ್ಲೆಂಡ್‌ಗೆ ನೆರವಾದ ಅಲಿ-ವಿಲ್ಲಿ ಜೊತೆಯಾಟ
ಇನ್ನು ಇಂಗ್ಲೆಂಡ್ ತಂಡ ಈ ಪಂದ್ಯದಲ್ಲಿಯೂ ಕನಿಷ್ಠ ಮೊತ್ತಕ್ಕೆ ಆಲೌಟ್ ಆಗದಂತೆ ಕಾಪಾಡಿದ್ದು ಕೆಳ ಕ್ರಮಾಂಕದ ಆಟಗಾರರು. ಅದರಲ್ಲೂ ಮೊಯೀನ್ ಅಲಿ ಹಾಗೂ ಡೇವಿಡ್ ವಿಲ್ಲಿ. ಈ ಇಬ್ಬರು ಆಟಗಾರರು ಸೇರಿ ಅರ್ಧ ಶತಕದ ಜೊತೆಯಾಟ ನೀಡುವ ಮೂಲಕ ಇಂಗ್ಲೆಂಡ್ ತಂಡವನ್ನು ರಕ್ಷಿಸಿದರು. ಮೊಯೀನ್ ಅಲಿ 47 ರನ್‌ಗಳ ಕೊಡುಗೆ ನೀಡಿದರೆ ವಿಲ್ಲಿ 41 ರನ್ ಗಳಸಿದರು. ಉಳಿದಂತೆ ಆರಂಭಿಕ ಆಟಗಾರ ಜಾನಿ ಬೈರ್‌ಸ್ಟೋವ್ 38 ರನ್‌ಗಳಸಿದರು.

ಭಾರತ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ಬೆಂಚ್: ಅಕ್ಷರ್ ಪಟೇಲ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಶ್ರೇಯಸ್ ಐಯ್ಯರ್, ಶಾರ್ದೂಲ್ ಠಾಕೂರ್
ಇಂಗ್ಲೆಂಡ್: ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾಯಕ, ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ
ಬೆಂಚ್: ಮ್ಯಾಥ್ಯೂ ಪಾರ್ಕಿನ್ಸನ್, ಸ್ಯಾಮ್ ಕರಾನ್, ಫಿಲಿಪ್ ಸಾಲ್ಟ್, ಹ್ಯಾರಿ ಬ್ರೂಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications