For Quick Alerts
ALLOW NOTIFICATIONS  
For Daily Alerts
 

Ind vs Eng: ಲಾರ್ಡ್ಸ್‌ನಲ್ಲಿ ಮಿಂಚಿದ ಚಾಹಲ್: ಭಾರತಕ್ಕೆ 247 ರನ್‌ಗಳ ಗುರಿ ನೀಡಿದ ಇಂಗ್ಲೆಂಡ್

Ind vs Eng: 2nd ODI, Team India need 247 runs to win 2nd match and series

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿಯೂ ಭಾರತ ತಂಡದ ಬೌಲಿಂಗ್ ವಿಭಾಗ ಮಿಂಚಿದೆ. ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತದ ಪರವಾಗಿ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಅದ್ಭುತ ಪ್ರದರ್ಶನ ನೀಡಿದ್ದು ಇಂಗ್ಲೆಂಡ್‌ನ ಪ್ರಮುಖ ದಾಂಡಿಗರಿಗೆ ಆಘಾತ ನೀಡಿದರು. ಕೆಳ ಕ್ರಮಾಂಕದಲ್ಲಿ ಮೊಯೀನ್ ಅಲಿ ಹಾಗೂ ಡೇವಿಡ್ ವಿಲ್ಲಿ ಅವರಿಂದ ಬಂದ ಅದ್ಭುತ ಪ್ರದರ್ಶನದ ಕಾರಣದಿಂದಾಗಿ ಇಂಗ್ಲೆಂಡ್ ತಂಡ 247 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು.

ಇಂಗ್ಲೆಂಡ್ ತಂಡದ ಅಗ್ರ ಕ್ರಮಾಂಕ ಈ ಪಂದ್ಯದಲ್ಲಿಯೂ ಮಿಂಚಲು ವಿಫಲವಾಯಿತು. ಪ್ರಮುಖ ದಾಂಡಿಗರು ದೊಡ್ಡ ಮೊತ್ತದ ಕೊಡುಗೆಯನ್ನು ನೀಡಲು ಸಂಪೂರ್ಣವಾಗಿ ವಿಫಲವಾದರು. 102 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು ಇಂಗ್ಲೆಂಡ್.

ಚಾಹಲ್ ಆಘಾತ
ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಆಘಾತ ನೀಡಿದ್ದು ಯುಜುವೇಂದ್ರ ಚಾಹಲ್. ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಅವರು ಪ್ರಮುಖ ಆಟಗಾರರು ಕ್ರೀಸ್‌ನಲ್ಲಿ ನೆಲೆಯೂರದಂತೆ ನೋಡಿಕೊಂಡರು. ಅಪಾಯಕಾರಿಯಾಗುವ ಸೂಚನೆ ನಿಡಿದ್ದ ಜಾನಿ ಬೈರ್‌ಸ್ಟೋವ್ ಅವರನ್ನು 38 ರನ್‌ಗಳಿಸಿದ್ದಾಗ ಔಟ್ ಮಾಡಿದ ಚಾಹಲ್ ನಂತರ ಜೋ ರೂಟ್, ಬೆನ್ ಸ್ಟೋಕ್ಸ್ ವಿಕೆಟ್ ಕೂಡ ಪಡೆದರು. ಬಳಿಕ ಅರ್ಧ ಶತಕದ ಜೊತೆಯಾಟ ನಿಡಿ ಮುನ್ನುಗ್ಗುತ್ತಿದ್ದ ಮೊಯೀನ್ ಅಲಿ ಹಾಗೂ ಡೇವಿಡ್ ವಿಲ್ಲಿ ಅವರನ್ನು ಬೆರ್ಪಡಿಸಿದ್ದು ಕೂಡ ಚಾಹಲ್. 47 ರನ್‌ಗಳಿಸಿದ್ದ ಅಲಿ ಚಾಹಲ್‌ಗೆ ಬಲಿಯಾದರು.

ಇಂಗ್ಲೆಂಡ್‌ಗೆ ಆಸರೆಯಾಯ್ತು ಅಲಿ-ವಿಲ್ಲಿ ಜೊತೆಯಾಟ: ಇನ್ನು ಇಂಗ್ಲೆಂಡ್ ತಂಡ ಈ ಪಂದ್ಯದಲ್ಲಿಯೂ ಕನಿಷ್ಠ ಮೊತ್ತಕ್ಕೆ ಆಲೌಟ್ ಆಗದಂತೆ ಕಾಪಾಡಿದ್ದು ಕೆಳ ಕ್ರಮಾಂಕದ ಆಟಗಾರರು. ಅದರಲ್ಲೂ ಮೊಯೀನ್ ಅಲಿ ಹಾಗೂ ಡೇವಿಡ್ ವಿಲ್ಲಿ. ಈ ಇಬ್ಬರು ಆಟಗಾರರು ಸೇರಿ ಅರ್ಧ ಶತಕದ ಜೊತೆಯಾಟ ನೀಡುವ ಮೂಲಕ ಇಂಗ್ಲೆಂಡ್ ತಂಡವನ್ನು ರಕ್ಷಿಸಿದರು. ಮೊಯೀನ್ ಅಲಿ 47 ರನ್‌ಗಳ ಕೊಡುಗೆ ನೀಡಿದರೆ ವಿಲ್ಲಿ 41 ರನ್ ಗಳಸಿದರು. ಉಳಿದಂತೆ ಆರಂಭಿಕ ಆಟಗಾರ ಜಾನಿ ಬೈರ್‌ಸ್ಟೋವ್ 38 ರನ್‌ಗಳಸಿದರು.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿಫಲವಾಗಿದ್ದು ಭಾರೀ ಅಂತರದಿಂದ ಸೋಲು ಕಂಡಿದೆ. ಲಾರ್ಡ್ಸ್ ಮೈದಾನದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ಇಂಗ್ಲೆಂಡ್ ತಂಡ ಭಾರತವನ್ನು 146 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ 100 ರನ್‌ಗಳ ಬೃಹತ್ ಅಂತರದಿಂದ ಪಂದ್ಯವನ್ನು ಗೆದ್ದುಕೊಂಡಿದೆ. ಈ ಮೂಲಕ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ತಂಡ ಸಮಬಲ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಇಂಗ್ಲೆಂಡ್ ನೀಡಿದ್ದ 247 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಆರಂಬದಿಂದಲೇ ಕಂಟುತ್ತಾ ಸಾಗಿತ್ತು. ನಂತರ ಒಂದರ ಬಳಿಕ ಒಂದರಂತೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಭಾರತ ತಂಡಕ್ಕೆ ಉತ್ತಮ ಜೊತೆಯಾಟ ದೊರೆಯಲಿಲ್ಲ. ಅಂತಿಮವಾಗಿ ಭಾರತ 146 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿತು.

ಭಾರತ ಆಡುವ ಬಳಗ

ಇಂಗ್ಲೆಂಡ್ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಹೀನಾಯ ಸೋಲು | *Cricket | OneIndia Kannada

ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ಬೆಂಚ್: ಅಕ್ಷರ್ ಪಟೇಲ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಶ್ರೇಯಸ್ ಐಯ್ಯರ್, ಶಾರ್ದೂಲ್ ಠಾಕೂರ್
ಇಂಗ್ಲೆಂಡ್: ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾಯಕ, ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ
ಬೆಂಚ್: ಮ್ಯಾಥ್ಯೂ ಪಾರ್ಕಿನ್ಸನ್, ಸ್ಯಾಮ್ ಕರಾನ್, ಫಿಲಿಪ್ ಸಾಲ್ಟ್, ಹ್ಯಾರಿ ಬ್ರೂಕ್

Story first published: Friday, July 15, 2022, 10:08 [IST]
Other articles published on Jul 15, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+