Ind vs Eng 2nd ODI: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ತಿಳಿಯಿರಿ

ಇಂಗ್ಲೆಂಡ್ ವಿರುದ್ಧದ ಮೂರು ಏಕದಿನ ಸರಣಿಯಲ್ಲಿ ಉತ್ತಮ ಆರಂಭ ಪಡೆದಿರುವ ಟೀಂ ಇಂಡಿಯಾ ಮತ್ತೊಂದು ಪಂದ್ಯಕ್ಕೆ ಸಿದ್ಧವಾಗಿದೆ. ಗುರುವಾರ ಲಾರ್ಡ್ಸ್‌ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ರೋಹಿತ್ ಪಡೆ ಎದುರಿಸಲಿದೆ.
ಮೊದಲ ಏಕದಿನ ಪಂದ್ಯದಲ್ಲಿ ಹೀನಾಯ ಸೋಲು ಕಂಡಿರುವ ಇಂಗ್ಲೆಂಡ್ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯ ಭರವಸೆಯನ್ನು ಜೀವಂತವಾಗಿರಿಸಿಕೊಳ್ಳಲು ಬಯಸಿದೆ. ಮತ್ತೊಂದೆಡೆ ಮೊದಲ ಏಕದಿನ ಪಂದ್ಯದ ಗೆಲುವಿನ ವೇಗವನ್ನು ಮುಂದುವರಿಸಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಟಿ20 ಸರಣಿಯಂತೆಯೇ ಏಕದಿನ ಸರಣಿ ಗೆಲ್ಲಲು ಭಾರತ ಸಂಕಲ್ಪ ಮಾಡಿದೆ. ಇದರೊಂದಿಗೆ ಮೊದಲ ಏಕದಿನ ಪಂದ್ಯದಂತೆ ಈ ಪಂದ್ಯವೂ ಕುತೂಹಲ ಮೂಡಿಸಲಿದೆ.

ಓಪನರ್‌ಗಳಾಗಿ ಕಣಕ್ಕಿಳಿಯಲಿರುವ ರೋಹಿತ್-ಧವನ್ ಜೋಡಿ
ಮೊದಲ ಏಕದಿನ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ರೋಹಿತ್ ಮತ್ತು ಶಿಖರ್ ಧವನ್ ಜೋಡಿ ಎರಡನೇ ಪಂದ್ಯದಲ್ಲಿ ಇನ್ನಿಂಗ್ಸ್ ಆರಂಭಿಸಲಿದೆ. ಏಕದಿನ ಕ್ರಿಕೆಟ್‌ನಲ್ಲಿ 5000 ರನ್‌ಗಳನ್ನು ದಾಖಲಿಸಿದ ನಂತರ ಈ ಜೋಡಿ ತಮ್ಮ ಜೊತೆಯಾಟವನ್ನು ಮುಂದುವರಿಸಲು ಬಯಸುತ್ತಾರೆ. ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಅಬ್ಬರದ ಅರ್ಧಶತಕ ಬಾರಿಸಿದ್ರೆ, ಶಿಖರ್ ಧವನ್ ಅವರಿಗೆ ಬೆಂಬಲವಾಗಿ ಆಡಿದರು. ಆದರೆ ಮೊದಲ ಏಕದಿನ ಪಂದ್ಯದಲ್ಲಿ ಗುರಿ ಕಡಿಮೆಯಾಗಿದ್ದರಿಂದ ಅವರ ಕೆಲಸ ಸುಲಭವಾಯಿತು. ಎರಡನೇ ಏಕದಿನ ಪಂದ್ಯದಲ್ಲೂ ಈ ಜೋಡಿ ಉತ್ತಮ ಆರಂಭ ನೀಡುವ ನಿರೀಕ್ಷೆಯಲ್ಲಿದೆ.
ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್: ಬಾಲಕಿ ತಲೆಗೆ ಬಡಿಯಿತು ಚೆಂಡು!

2ನೇ ಏಕದಿನ ಪಂದ್ಯಕ್ಕೂ ಕೊಹ್ಲಿ ಅಲಭ್ಯ
ತೊಡೆಸಂದು ನೋವಿನಿಂದಾಗಿ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಎರಡನೇ ಏಕದಿನ ಪಂದ್ಯಕ್ಕೂ ಹೊರಗುಳಿಯಲಿದ್ದಾರೆ. ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಬದಲು ಸ್ಥಾನ ಪಡೆದಿರುವ ಶ್ರೇಯಸ್ ಅಯ್ಯರ್ ಎರಡನೇ ಏಕದಿನ ಪಂದ್ಯದಲ್ಲೂ ಮುಂದುವರಿಯಲಿದ್ದಾರೆ. ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಮಾಡಲಿದ್ದರೆ, ಶ್ರೇಯಸ್ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ವಿಕೆಟ್ ಕೀಪರ್ ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಐದು, ಆರು ಮತ್ತು ಏಳು ಸ್ಥಾನಗಳಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಈ ಮೂವರು ಫಿನಿಶರ್ ಪಾತ್ರವನ್ನು ನಿರ್ವಹಿಸಲಿದ್ದಾರೆ.
ಬೂಮ್ ಬೂಮ್ ಅಫ್ರಿದಿಯ ವಿಶ್ವದಾಖಲೆ ಮುರಿದ ರೋಹಿತ್ ಶರ್ಮಾ: ಏಕದಿನ ಕ್ರಿಕೆಟ್‌ನಲ್ಲಿ 250 ಸಿಕ್ಸರ್

ಬೌಲಿಂಗ್‌ನಲ್ಲಿ ಬದಲಾವಣೆ ಸಾಧ್ಯತೆ ಕಡಿಮೆ
ಮೊದಲ ಏಕದಿನ ಪಂದ್ಯದಲ್ಲಿ ಮಿಂಚಿನ ದಾಳಿ ನಡೆಸಿದ ಜಸ್ಪ್ರೀತ್ ಬುಮ್ರಾ (6/19) ಮತ್ತು ಮೊಹಮ್ಮದ್ ಶಮಿ (3/31) ಇಂಗ್ಲೆಂಡ್ ಅನ್ನು ಕಡಿಮೆ ಸ್ಕೋರ್‌ಗೆ ನಿರ್ಬಂಧಿಸಿದರು. ಸ್ವಿಂಗ್ ಮತ್ತು ವೇಗದ ಪರಿಸ್ಥಿತಿಗಳನ್ನು ಎರಡೂ ಕೈಗಳಿಂದ ಬಾಚಿಕೊಂಡ ಈ ಇಬ್ಬರು ಅನುಭವಿಗಳು ಇಂಗ್ಲೆಂಡ್ ಬ್ಯಾಟರ್‌ಗಳನ್ನ ಇನ್ನಿಲ್ಲದಂತೆ ಕಾಡಿದರು.
ಎರಡನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಇದೇ ವೇಗವನ್ನ ಮುಂದುವರಿಸಲಿದೆ. ಇವರೊಂದಿಗೆ ಸ್ಪಿನ್ ಮತ್ತು ವೇಗದ ಆಲ್ ರೌಂಡರ್ (ಜಡೇಜಾ, ಹಾರ್ದಿಕ್) ಲಭ್ಯವಾಗಲಿದ್ದಾರೆ. ಜಸ್ಪ್ರೀತ್ ಬುಮ್ರಾ ಬೌಲಿಂಗ್ ವಿಭಾಗವನ್ನು ಮುನ್ನಡೆಸಿದರೆ, ಶಮಿ ಜೊತೆಯಾಗಿ ಆಡಲಿದ್ದಾರೆ. ಮೂರನೇ ವೇಗಿ ಪ್ರಸಿದ್ಧ್ ಕೃಷ್ಣ ಮತ್ತೊಮ್ಮೆ ಕಣಕ್ಕೆ ಇಳಿಯಲಿದ್ದಾರೆ. ಚಾಹಲ್ ಏಕೈಕ ಸ್ಪಿನ್ನರ್ ಆಗಿ ಮುಂದುವರಿಯಲಿದ್ದಾರೆ.
IND vs ENG: ಇಂಗ್ಲೆಂಡ್‌ನ ನಾಲ್ವರು ಆಟಗಾರರನ್ನು ಹೀನಾಯವಾಗಿ ಟ್ರೋಲ್ ಮಾಡಿದ ಬುಮ್ರಾ ಪತ್ನಿ!

ಟೀಂ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11
ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ಕೀಪರ್), ರವೀಂದ್ರ ಜಡೇಜಾ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜವೇಂದ್ರ ಚಹಾಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications