IND vs ENG T20: 2ನೇ ಟಿ20 ಪಂದ್ಯದ ಸಮಯ ಬದಲು; ಬರೆದಿಟ್ಟುಕೊಂಡು ಬಿಡಿ ಟೈಮ್
ಮ್ಯಾಂಚೆಸ್ಟರ್: ಭಾರತ ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿದೆ. ಈ ವೇಳೆ ಟೀಮ್ ಇಂಡಿಯಾ, ಇಂಗ್ಲೆಂಡ್ ವಿರುದ್ಧ ಐದು ಪಂದ್ಯ ಟಿ20 ಸರಣಿಯನ್ನು ಆಡುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಿ 190 ರನ್‌ಗಳ ಗುರಿಯನ್ನು ಇಂಗ್ಲೆಂಡ್ ತಂಡಕ್ಕೆ ನೀಡಿತ್ತು. ಆದರೆ ಇಂಗ್ಲೆಂಡ್ ಬ್ಯಾಟಿಂಗ್ ಮಾಡಲು ಬರುವ ಮುನ್ನ ಮಳೆ ಆರಂಭವಾದ ಕಾರಣ ಪಂದ್ಯ ಫಲಿತಾಂಶ ರಹಿತವಾಯಿತು.
ಐದು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ಪರ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಭರ್ಜರಿ ಪ್ರದರ್ಶನ ನೀಡಿದ್ದರು. ಅಲ್ಲದೆ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಅಲ್ಲದೆ ಮಧ್ಯಮ ಕ್ರಮಾಂಕದಲ್ಲಿ ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದರು. ಹೀಗಾಗಿ ಈ ಆಟಗಾರರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಣ ಮೊದಲ ಪಂದ್ಯ ರಾತ್ರಿ 10 ಗಂಟೆಗೆ ಆರಂಭವಾಗಿತ್ತು. ಆದರೆ ಎರಡನೇ ಟಿ20 ಪಂದ್ಯದ ಸಮಯ ಬದಲಾಗಿದೆ. ಹೀಗಾಗಿ ಅಭಿಮಾನಿಗಳಲ್ಲಿ ಸಣ್ಣ ಗೊಂದಲ ಮೂಡಿದೆ.
ಪಂದ್ಯದ ಸಮಯ ಬದಲು
ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆದಿದ್ದ ಪಂದ್ಯ ರಾತ್ರಿ 10 ಗಂಟೆಗೆ ನಡೆದಿತ್ತು ಎಂದು ನೀವು ಎರಡನೇ ಪಂದ್ಯವನ್ನು ನೋಡಲು 10 ಗಂಟೆಗೆ ಟಿವಿ ಹಚ್ಚಲು ಹೋದ್ರೆ ಕ್ಲೈಮೆಕ್ಸ್ ನೋಡಬೇಕಾಗುತ್ತದೆ. ಕಾರಣ ಎರಡನೇ ಟಿ20 ಪಂದ್ಯ ಭಾರತೀಯ ಕಾಲ ಮಾನ ಸಂಜೆ 7ಕ್ಕೆ ಆರಂಭವಾಗಲಿದೆ.
ಗೆಲುವೊಂದೆ ಟಾರ್ಗೆಟ್
ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದಾಗಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಕನಸು ಎರಡೂ ತಂಡಗಳದ್ದಾಗಿದೆ. ಈಗಾಗಲೇ ಒಂದು ಪಂದ್ಯ ಫಲಿತಾಂಶ ರಹಿತವಾಗಿದ್ದು, ಉಳಿದ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸುವ ತಂಡ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ. ಹೀಗಾಗಿ ಎರಡನೇ ಪಂದ್ಯದಲ್ಲಿ ಗೆಲುವು ಭಾರತ, ಇಂಗ್ಲೆಂಡ್ ತಂಡಗಳಿಗೆ ಅನಿವಾರ್ಯವಾಗಿದೆ.
ವೈಭವ್‌ಗೆ ಸಿಗುತ್ತಾ ಅವಕಾಶ?
ಐರ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿ ಅವರಿಗೆ ಕನಸು ಲಭಿಸುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ವೈಭವ್ ಸೂರ್ಯವಂಶಿ ಅವರಿಗೆ ಐರ್ಲೆಂಡ್ ಪ್ರವಾಸದಲ್ಲಿ ಅವಕಾಶ ಲಭಿಸಲಿಲ್ಲ. ಇವರಿಗೆ ಇಂಗ್ಲೆಂಡ್ ಪ್ರವಾಸದಲ್ಲಿ ಅವಕಾಶ ಸಿಗಬಹುದು ಎಂದು ಎಲ್ಲರೂ ಲೆಕ್ಕಾಚಾರ ಹಾಕಿಕೊಳ್ಳಲಾಗಿತ್ತು. ಆದರೆ ಅಭಿಮಾನಿಗಳಿಗೆ ನಿರಾಸೆ ಕಾದಿತ್ತು. ಟೀಮ್ ಇಂಡಿಯಾದ ಮಾಜಿ ಆಟಗಾರರು ಹಾಗೂ ವಿದೇಶಿ ಆಟಗಾರರು ವೈಭವ್ ಸೂರ್ಯವಂಶಿ ಅವರನ್ನು ಆಡಿಸುವಂತೆ ಬೇಡಿಕೆ ಹೆಚ್ಚಿದೆ. ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಾದ್ರೂ ಆಡುವ ಅವಕಾಶ ಲಭಿಸುತ್ತದಾ ಎಂಬ ಪ್ರಶ್ನೆಗಳು ಹೆಚ್ಚಿವೆ. ರನ್ ಕಲೆ ಹಾಕುವಲ್ಲಿ ಪರದಾಟ ನಡೆಸಿರುವ ಸಂಜು ಸ್ಯಾಮ್ಸನ್ ಬದಲಿಗೆ ಇವರಿಗೆ ಅವಕಾಶ ನೀಡುವಂತೆ ಕೂಗು ಕೇಳುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications