ಭಾರತ vs ಇಂಗ್ಲೆಂಡ್: ಮೈದಾನದಲ್ಲಿ ಬೆನ್ ಸ್ಟೋಕ್ಸ್ ಸರ್ಕಸ್: ವಿಡಿಯೋ

ಚೆನ್ನೈ: ಭಾರತಕ್ಕೆ ಪ್ರವಾಸ ಬಂದಿರುವ ಇಂಗ್ಲೆಂಡ್ ಕ್ರಿಕೆಟ್ ತಂಡ ಆತಿಥೇಯರ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಆಡುತ್ತಿದೆ. ಇದರಲ್ಲಿ ದ್ವಿತೀಯ ಪಂದ್ಯ ಚೆನ್ನೈ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ದ್ವಿತೀಯ ಪಂದ್ಯದ ವೇಳೆ ಇಂಗ್ಲೆಂಡ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಸರ್ಕಸ್ ಮಾಡಿ ಗಮನ ಸೆಳೆದಿದ್ದಾರೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾರತ-ಇಂಗ್ಲೆಂಡ್ ದ್ವಿತೀಯ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ವೇಳೆ ತೃತೀಯ ದಿನದಾಟದಲ್ಲಿ ಬೆನ್ ಸ್ಟೋಕ್ಸ್ ಮೈದಾನದಲ್ಲಿ ಸರ್ಕಸ್ ಮಾಡಿ ಚಿತ್ತ ತನ್ನತ್ತ ಹರಿಸಿಕೊಂಡಿದ್ದಾರೆ. ತಲೆ ಕೆಳಗಾಗಿಸಿ ಸ್ಟೋಕ್ಸ್ ಕೈಗಳ ಸಹಾಯದಿಂದ ನಡೆದಿರುವ ವಿಡಿಯೋ ವೈರಲ್ ಆಗಿದೆ.
ಬೆನ್ ಸ್ಟೋಕ್ಸ್ ವಿಶ್ವದ ಬೆಸ್ಟ್ ಆಲ್ ರೌಂಡರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡವರು. ಬೆಸ್ಟ್ ಫೀಲ್ಡಿಂಗ್‌ಗಾಗಿಯೂ ಸ್ಟೋಕ್ಸ್ ಅನೇಕ ಸಾರಿ ಗಮನ ಸೆಳೆದಿದ್ದಿದೆ. ಆರಂಭಿಕ ಇನ್ನಿಂಗ್ಸ್‌ನಲ್ಲಿ ಸ್ಟೋಕ್ಸ್ ಉತ್ತಮ ಪ್ರದರ್ಶನ ನೀಡಿಲ್ಲ. ಆದರೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಸ್ಟೋಕ್ಸ್ ಬ್ಯಾಟಿಂಗ್ ಪ್ರದರ್ಶನ ಕಾದು ನೋಡಬೇಕಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 95.5 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 329 ರನ್ ಬಾರಿಸಿತ್ತು. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 59.5 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 134 ರನ್ ಗಳಿಸಿ ಹಿನ್ನಡೆ ಅನುಭವಿಸಿತ್ತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತ 85.5 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 286 ರನ್ ಬಾರಿಸಿದ್ದರೆ, ಇಂಗ್ಲೆಂಡ್ ಈಗ ಅಂತಿಮ ಇನ್ನಿಂಗ್ಸ್ ಆಡುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications