For Quick Alerts
ALLOW NOTIFICATIONS  
For Daily Alerts
 

IND vs ENG: ಇಂಗ್ಲೆಂಡ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಯಶಸ್ವಿ, ಗಿಲ್, ಬುಮ್ರಾ; 2ನೇ ಪಂದ್ಯದಲ್ಲಿ ಭಾರತಕ್ಕೆ ಜಯ

ಸೋಮವಾರ, ಜನವರಿ 5ರಂದು ವಿಶಾಖಪಟ್ಟಣದ ವೈಎಸ್ ರಾಜಶೇಖರ್ ರೆಡ್ಡಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಮುಕ್ತಾಯಗೊಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ ವಿರುದ್ಧ ಆತಿಥೇಯ ಭಾರತ ತಂಡ 106 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಈ ಮೂಲಕ ಮೊದಲ ಪಂದ್ಯದ ಸೋಲಿಗೆ ಪ್ರತೀಕಾರ ತೀರಿಸಿಕೊಂಡ ಭಾರತ ತಂಡ ಐದು ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ 1-1 ಅಂತರದ ಸಮಬಲ ಸಾಧಿಸಿತು.

IND vs ENG 2nd Test: India Defeat England by 106 Runs in Visakhapatnam

ಭಾರತ ತಂಡ ನೀಡಿದ್ದ 399 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಆಂಗ್ಲ ಪಡೆ ಪಂದ್ಯದ ನಾಲ್ಕನೇ ದಿನದಂದು 69.2 ಓವರ್‌ಗಳಲ್ಲಿ 292 ರನ್‌ಗಳಿಗೆ ಸರ್ವಪತನ ಕಂಡಿತು. ತನ್ನ ಬಜ್‌ಬಾಲ್ ವಿಧಾನದ ಮೂಲಕ ಗೆಲ್ಲಲು ಹೊರಟಿದ್ದ ಇಂಗ್ಲೆಂಡ್ ತಂಡವನ್ನು ಭಾರತೀಯ ಬೌಲರ್‌ಗಳು ಕಟ್ಟಿಹಾಕಿದರು.

ಮೊದಲ ಇನ್ನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ ದ್ವಿಶತಕ, ಎರಡನೇ ಇನ್ನಿಂಗ್ಸ್‌ನಲ್ಲಿ ಶುಭ್ಮನ್ ಗಿಲ್ ಶತಕ ಹಾಗೂ ಕೊನೆಯ ಇನ್ನಿಂಗ್ಸ್‌ನಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ರವಿಚಂದ್ರನ್ ಅಶ್ವಿನ್ ಅವರ ತಲಾ ಮೂರು ವಿಕೆಟ್‌ಗಳ ಕಬಳಿಸುವಿಕೆ ನೆರವಿನಿಂದ ಭಾರತ ತಂಡವು ಎರಡನೇ ಟೆಸ್ಟ್ ಪಂದ್ಯದ ಸೋಮವಾರದ ನಾಲ್ಕನೇ ದಿನದಲ್ಲಿ ಇಂಗ್ಲೆಂಡ್ ತಂಡವನ್ನು 106 ರನ್‌ಗಳಿಂದ ಮಣಿಸಿತು.

IND vs ENG 2nd Test: India Defeat England by 106 Runs in Visakhapatnam

ಮೂರನೇ ದಿನದಾಟದ ಅಂತ್ಯಕ್ಕೆ ಝಾಕ್ ಕ್ರಾಲಿ ಮತ್ತು ರೆಹಾನ್ ಅಹ್ಮದ್ ಅಜೇಯರಾಗಿ ಕ್ರೀಸ್‌ನಲ್ಲಿ ಉಳಿದಿದ್ದರು. 4ನೇ ದಿನದಂದು ಇಂಗ್ಲೆಂಡ್‌ಗೆ 332 ರನ್‌ಗಳ ಅಗತ್ಯವಿತ್ತು. ಆದರೆ, ರವಿಚಂದ್ರನ್ ಅಶ್ವಿನ್ ಸ್ಪೆಲ್ ಆತಿಥೇಯ ಭಾರತವನ್ನು ಮತ್ತೆ ಪಂದ್ಯಕ್ಕೆ ಮರಳಿಸಿತು.

ಝಾಕ್ ಕ್ರಾಲಿ 73 ರನ್ ಗಳಿಸಿ ಔಟಾದರು ಮತ್ತು ಉಳಿದ ಯಾವುದೇ ಇಂಗ್ಲಿಷ್ ಬ್ಯಾಟರ್ 40 ರನ್ ಗಡಿ ದಾಟಲು ವಿಫಲರಾದರು. ಜಸ್ಪ್ರೀತ್ ಬುಮ್ರಾ ಮತ್ತು ರವಿಚಂದ್ರನ್ ಅಶ್ವಿನ್ ಇಬ್ಬರೂ ಮೂರು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಇಂಗ್ಲೆಂಡ್ 292 ರನ್‌ಗಳಿಗೆ ಆಲೌಟ್ ಆಯಿತು.

ಇದಕ್ಕೂ ಮುನ್ನ ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 112 ಓವರ್‌ಗಳಲ್ಲಿ 396 ರನ್‌ಗಳಿಗೆ ಆಲೌಟ್ ಆಗಿತ್ತು. ಈ ವೇಳೆ ಯಶಸ್ವಿ ಜೈಸ್ವಾಲ್ 290 ಎಸೆತಗಳನ್ನು ಎದುರಿಸಿ 19 ಬೌಂಡರಿ ಹಾಗೂ 7 ಸಿಕ್ಸರ್ ಸಮೇತ 209 ರನ್ ಬಾರಿಸಿದ್ದರು.

ಬೌಲಿಂಗ್‌ನಲ್ಲಿ ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್, ಶೋಯೆಬ್ ಬಶೀರ್ ಮತ್ತು ರೆಹಾನ್ ಅಹ್ಮದ್ ತಲಾ ಮೂರು ವಿಕೆಟ್ ಪಡೆದು ಮಿಂಚಿದರೆ, ಟಾಮ್ ಹಾರ್ಟ್ಲಿ ಒಂದು ವಿಕೆಟ್ ಪಡೆದರು.

ನಂತರ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 55.5 ಓವರ್‌ಗಳಲ್ಲಿ 253 ರನ್‌ಗಳಿಗೆ ಆಲೌಟ್ ಆಯಿತು. ಜಾಕ್ ಕ್ರಾಲಿ 73 ರನ್ ಮತ್ತು ಬೆನ್ ಸ್ಟೋಕ್ಸ್ 47 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿದರು.

ಬೌಲಿಂಗ್‌ನಲ್ಲಿ ಭಾರತ ತಂಡದ ಪರ ಜಸ್ಪ್ರೀತ್ ಬುಮ್ರಾ 6 ವಿಕೆಟ್ ಕಬಳಿಸಿದರೆ, ಕುಲದೀಪ್ ಯಾದವ್ 3 ವಿಕೆಟ್ ಮತ್ತು ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್‌ನಲ್ಲಿ ಅಮೋಘ 143 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡ 78.3 ಓವರ್‌ಗಳಲ್ಲಿ 255 ರನ್‌ಗಳಿಗೆ ಆಲೌಟ್ ಆಯಿತು ಮತ್ತು ಒಟ್ಟಾರೆ 399 ರನ್‌ಗಳ ಗುರಿ ನೀಡಿತ್ತು.

ಅಂತಿಮ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ 69.2 ಓವರ್‌ಗಳಲ್ಲಿ 292 ರನ್‌ಗಳಿಗೆ ಸರ್ವಪತನ ಕಂಡಿತು. ಮತ್ತೊಮ್ಮೆ ಜಾಕ್ ಕ್ರಾಲಿ 73 ರನ್‌ಗಳ ಕೊಡುಗೆ ನೀಡಿದರು. ಉಳಿದವರಾರು ದೊಡ್ಡ ಮೊತ್ತದ ಕೊಡುಗೆ ನೀಡಲಿಲ್ಲ.

Story first published: Monday, February 5, 2024, 14:37 [IST]
Other articles published on Feb 5, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+