ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಬಹುದಾದ ಟೀಮ್ ಇಂಡಿಯಾದ 3 ಆಟಗಾರರು

IND vs ENG: 3 Indian players who may be benched for the Oval test

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಈಗಾಗಲೇ ಮುಗಿದಿದ್ದು ಎರಡೂ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆಲ್ಲುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿವೆ. ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯಗೊಂಡಿತ್ತು, ನಂತರ ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 151 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿ ಸರಣಿಯಲ್ಲಿ ಗೆಲುವಿನ ಖಾತೆಯನ್ನು ತೆರೆಯುವುದರ ಮೂಲಕ ಮುನ್ನಡೆಯನ್ನು ಕಾಯ್ದುಕೊಂಡಿತ್ತು.

ಭಾರತ vs ಇಂಗ್ಲೆಂಡ್: ಓವಲ್ ಅಂಗಳದಲ್ಲಿ ಭಾರತಕ್ಕಿದೆ ಅತಿ ಕೆಟ್ಟ ಇತಿಹಾಸ, ಕಳಪೆ ಪಂದ್ಯಗಳ ಪಟ್ಟಿ ಇಲ್ಲಿದೆಭಾರತ vs ಇಂಗ್ಲೆಂಡ್: ಓವಲ್ ಅಂಗಳದಲ್ಲಿ ಭಾರತಕ್ಕಿದೆ ಅತಿ ಕೆಟ್ಟ ಇತಿಹಾಸ, ಕಳಪೆ ಪಂದ್ಯಗಳ ಪಟ್ಟಿ ಇಲ್ಲಿದೆ

ಹೀಗೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾದ ಆಟಗಾರರು ಅತ್ಯದ್ಭುತ ಪ್ರದರ್ಶನವನ್ನು ನೀಡಿದ ಕಾರಣಕ್ಕೆ ಅದೇ ತಂಡವನ್ನು ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೂ ಕೂಡ ಆಯ್ಕೆ ಮಾಡಲಾಗಿತ್ತು. ಲಾರ್ಡ್ಸ್ ಅಂಗಳದಲ್ಲಿ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕೆ ಅದೇ ತಂಡವನ್ನೂ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿಯೂ ಆಡಿಸಿದ ಯೋಜನೆ ವಿಫಲವಾಯಿತು. ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಅಕ್ಷರಶಃ ಮಂಕಾದ ಭಾರತ ತಂಡದ ಆಟಗಾರರು ಪಂದ್ಯದಲ್ಲಿ ಹೀನಾಯವಾಗಿ ಸೋತರು.

ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಕೇವಲ 78 ರನ್‌ಗಳಿಗೆ ಆಲ್ ಔಟ್ ಆಗಿ ಕಳಪೆ ಪ್ರದರ್ಶನವನ್ನು ನೀಡುವುದರ ಮೂಲಕ ಆ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಸರಣಿ ಸಹಿತ 76 ರನ್‌ಗಳ ಸೋಲನ್ನು ಅನುಭವಿಸಿತ್ತು. ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿಯೂ ಹೇಡಿಂಗ್ಲೆ ಟೆಸ್ಟ್ ಪಂದ್ಯದಲ್ಲಿ ಅಕ್ಷರಶಃ ಮಂಕಾಗಿ ಹೀನಾಯ ಸೋಲು ಕಂಡಿದ್ದ ಟೀಮ್ ಇಂಡಿಯಾ ಸೆಪ್ಟೆಂಬರ್‌ 2 ರಿಂದ ಓವಲ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳುವ ಸಾಧ್ಯತೆಗಳಿವೆ. ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಕೆಲ ಬದಲಾವಣೆಗಳು ಆಗುವ ಮುನ್ಸೂಚನೆಯನ್ನು ನೀಡಿದ್ದರು.

'ಆ ಪಂದ್ಯವನ್ನು ನೆನಪಿಸಿಕೊಳ್ಳಿ'; ಉತ್ಸಾಹದಲ್ಲಿರುವ ಆಂಗ್ಲರಿಗೆ ಇಂಗ್ಲೆಂಡ್ ಮಾಜಿ ಕ್ರಿಕೆಟಿಗನ ಎಚ್ಚರಿಕೆ!'ಆ ಪಂದ್ಯವನ್ನು ನೆನಪಿಸಿಕೊಳ್ಳಿ'; ಉತ್ಸಾಹದಲ್ಲಿರುವ ಆಂಗ್ಲರಿಗೆ ಇಂಗ್ಲೆಂಡ್ ಮಾಜಿ ಕ್ರಿಕೆಟಿಗನ ಎಚ್ಚರಿಕೆ!

ಹೀಗೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನವನ್ನು ನೀಡದೇ ಮಂಕಾಗಿದ್ದ ಈ ಕೆಳಕಂಡ 3 ಭಾರತೀಯ ಆಟಗಾರರನ್ನು ಓವಲ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗಿಡುವ ಸಾಧ್ಯತೆಗಳಿವೆ.

1. ಇಶಾಂತ್ ಶರ್ಮಾ

1. ಇಶಾಂತ್ ಶರ್ಮಾ

ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಶರ್ಮಾ ಯಾವುದೇ ವಿಕೆಟ್ ಪಡೆಯದೇ ಅತ್ಯಂತ ನೀರಸ ಪ್ರದರ್ಶನವನ್ನು ನೀಡಿದರು. ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 22 ಓವರ್‌ಗಳನ್ನು ಎಸೆದ ಇಶಾಂತ್ ಶರ್ಮಾ 92 ರನ್ ನೀಡಿ ಯಾವುದೇ ವಿಕೆಟ್ ಮತ್ತು ಮೇಡನ್ ಓವರ್ ಪಡೆಯದೇ ನೀರಸ ಪ್ರದರ್ಶನ ನೀಡಿದರು. ಹೀಗಾಗಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದಿಂದ ಇಶಾಂತ್ ಶರ್ಮಾ ಹೊರಬೀಳುವ ಸಾಧ್ಯತೆಗಳು ಹೆಚ್ಚಿವೆ.

2. ಅಜಿಂಕ್ಯ ರಹಾನೆ

2. ಅಜಿಂಕ್ಯ ರಹಾನೆ

ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ 61 ರನ್ ಗಳಿಸಿ ಜವಾಬ್ದಾರಿಯುತ ಆಟವನ್ನು ಆಡಿದ ಅಜಿಂಕ್ಯ ರಹಾನೆ ಮತ್ತೆ ಇಂಗ್ಲೆಂಡ್ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನವನ್ನು ಮುಂದುವರಿಸಿದ್ದಾರೆ. ಇಲ್ಲಿಯವರೆಗೂ ಸರಣಿಯಲ್ಲಿ ಒಟ್ಟು 5 ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಪಡೆದಿರುವ ಅಜಿಂಕ್ಯ ರಹಾನೆ ಗಳಿಸಿರುವುದು ಕೇವಲ 95 ರನ್. ಹೀಗಾಗಿ ಸಾಲುಸಾಲು ಕಳಪೆ ಪ್ರದರ್ಶನ ನೀಡುತ್ತಿರುವ ಟೀಮ್ ಇಂಡಿಯಾದ ಉಪನಾಯಕ ಅಜಿಂಕ್ಯ ರಹಾನೆಯನ್ನು ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗಿಡುವ ಸಾಧ್ಯತೆಗಳು ಹೆಚ್ಚಿವೆ.

ವಿರಾಟ್ ಬ್ಯಾಟಿಂಗ್ ವೈಫಲ್ಯ ದ ಬಗ್ಗೆ ಮಾತಾಡಿದ ಇರ್ಫಾನ್ ಪಠಾಣ್! | Oneindia Kannada
3. ರವೀಂದ್ರ ಜಡೇಜಾ

3. ರವೀಂದ್ರ ಜಡೇಜಾ

ಪ್ರಸ್ತುತ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಹೇಳಿಕೊಳ್ಳುವಂತಹ ದೊಡ್ಡ ಪ್ರದರ್ಶನವನ್ನೇನೂ ನೀಡದ ರವೀಂದ್ರ ಜಡೇಜಾ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಗಾಯಕ್ಕೊಳಗಾಗಿದ್ದರು. ಹೀಗಾಗಿ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಿಂದ ರವೀಂದ್ರ ಜಡೇಜಾ ಹೊರಗುಳಿಯುವ ಸಾಧ್ಯತೆಗಳು ಹೆಚ್ಚಿದ್ದು ಜಡೇಜಾ ಬದಲಿಗೆ ರವಿಚಂದ್ರನ್ ಅಶ್ವಿನ್ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆಗಳಿವೆ.

Story first published: Wednesday, September 1, 2021, 8:13 [IST]
Other articles published on Sep 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X