ಅಜಿಂಕ್ಯಾ ರಹಾನೆ ಬದಲು ಭಾರತ ಟೆಸ್ಟ್ ತಂಡದ ಉಪನಾಯಕನಾಗುವ ಸಾಧ್ಯತೆಯಿರುವ 3 ಆಟಗಾರರು!

ಅಜಿಂಕ್ಯಾ ರಹಾನೆ, ಭಾರತ ಟೆಸ್ಟ್ ಕ್ರಿಕೆಟ್ ತಂಡದ ಉಪನಾಯಕನಾಗಿ ಈಗಾಗಲೇ ಸಾಕಷ್ಟು ಟೆಸ್ಟ್ ಪಂದ್ಯಗಳಲ್ಲಿ ಮಿಂಚಿದ್ದಾರೆ. ಹಲವಾರು ವರ್ಷಗಳಿಂದ ಟೀಮ್ ಇಂಡಿಯಾಗೆ ಅತ್ಯಾವಶ್ಯಕವಾಗಿ ಬೇಕಾದ ಆಟಗಾರನಾಗಿ ಉತ್ತಮ ಪ್ರದರ್ಶನ ನೀಡಿರುವ ಅಜಿಂಕ್ಯ ರಹಾನೆ ಸಾಮಾನ್ಯವಾಗಿ ಐದನೇ ಕ್ರಮಾಂಕದ ಬ್ಯಾಟ್ಸ್‌ಮನ್‌ ಆಗಿ ಹೆಚ್ಚು ಬಾರಿ ಕಣಕ್ಕಿಳಿದು ತಮ್ಮ ತಂಡಕ್ಕೆ ಬೇಕಾದ ಉತ್ತಮ ಬೆಂಬಲವನ್ನು ನೀಡಿದ್ದಾರೆ.

ಭಾರತೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದರ ಹಿಂದಿನ ಕೆಟ್ಟ ಕಾರಣವನ್ನು ಬಿಚ್ಚಿಟ್ಟ ಉನ್ಮುಕ್ತ್ ಚಂದ್!ಭಾರತೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದರ ಹಿಂದಿನ ಕೆಟ್ಟ ಕಾರಣವನ್ನು ಬಿಚ್ಚಿಟ್ಟ ಉನ್ಮುಕ್ತ್ ಚಂದ್!

ತಂಡದ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೆಸ್ಟ್ ತಂಡದ ನಾಯಕನ ಜವಾಬ್ದಾರಿಯನ್ನು ಹೊತ್ತುಕೊಂಡು ಹಲವಾರು ಪಂದ್ಯಗಳನ್ನು ಅಜಿಂಕ್ಯಾ ರಹಾನೆ ತಮ್ಮ ನಾಯಕತ್ವದಡಿಯಲ್ಲಿ ಗೆಲ್ಲಿಸಿಕೊಟ್ಟಿದ್ದಾರೆ. ಈ ವರ್ಷದ ಆರಂಭದಲ್ಲಿ ಆಸ್ಟ್ರೇಲಿಯಾ ನೆಲದಲ್ಲಿಯೇ ಕೊಹ್ಲಿ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾವನ್ನು ಟೀಮ್ ಇಂಡಿಯಾ ಸದೆಬಡಿದು ಟೆಸ್ಟ್ ಸರಣಿ ವಶಪಡಿಸಿಕೊಂಡಿತ್ತು. ಈ ಸರಣಿಗೆ ವಿರಾಟ್ ಕೊಹ್ಲಿ ಅಲಭ್ಯರಾದಾಗ ಸ್ವತಃ ಅಜಿಂಕ್ಯಾ ರಹಾನೆ ನಾಯಕತ್ವವನ್ನು ವಹಿಸಿಕೊಂಡು ಇತಿಹಾಸದಲ್ಲಿ ನೆನಪಿಡುವಂತಹ ಜಯವನ್ನು ತಂದು ಕೊಟ್ಟಿದ್ದರು.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪದಕ ವಂಚಿತರಾದ ಭಾರತೀಯ ಕ್ರೀಡಾಪಟುಗಳಿಗೆ ಟಾಟಾ 'ಗೋಲ್ಡನ್' ಗಿಫ್ಟ್ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪದಕ ವಂಚಿತರಾದ ಭಾರತೀಯ ಕ್ರೀಡಾಪಟುಗಳಿಗೆ ಟಾಟಾ 'ಗೋಲ್ಡನ್' ಗಿಫ್ಟ್

ಹೀಗೆ ಭಾರತ ತಂಡದ ಹಲವಾರು ಗೆಲುವುಗಳಲ್ಲಿ ಪ್ರಮುಖ ಪಾತ್ರವಹಿಸಿರುವ ಅಜಿಂಕ್ಯ ರಹಾನೆ ಸದ್ಯ ಕಳೆದೊಂದು ವರ್ಷದಿಂದ ಸತತವಾಗಿ ಕಳಪೆ ಪ್ರದರ್ಶನ ನೀಡುವುದರ ಮೂಲಕ ಭಾರಿ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಪದೇ ಪದೇ ಕಳಪೆ ಪ್ರದರ್ಶನ ನೀಡುತ್ತಿರುವ ಅಜಿಂಕ್ಯ ರಹಾನೆಗೆ ತಂಡದಲ್ಲಿ ಸ್ಥಾನ ನೀಡುವ ಬದಲು ಯುವ ಪ್ರತಿಭಾವಂತ ಆಟಗಾರರಿಗೆ ಅವಕಾಶಗಳನ್ನು ನೀಡಬೇಕೆಂದು ನೆಟ್ಟಿಗರು ಅಜಿಂಕ್ಯ ರಹಾನೆ ಆಯ್ಕೆ ಕುರಿತು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗೆ ದಿನೇ ದಿನೇ ಕಳಪೆ ಪ್ರದರ್ಶನ ತೋರಿಸುವುದನ್ನು ಮುಂದುವರೆಸುತ್ತಿರುವ ಅಜಿಂಕ್ಯ ರಹಾನೆ ಹೀಗೆ ಆದರೆ ಅತಿ ಶೀಘ್ರದಲ್ಲಿ ಉಪ ನಾಯಕನ ಪಟ್ಟವನ್ನು ಕಳೆದುಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ನೆಟ್ಟಿಗರು ಅಭಿಪ್ರಾಯಪಡುತ್ತಿದ್ದಾರೆ. ಒಂದುವೇಳೆ ಇದೇ ರೀತಿಯ ಕಳಪೆ ಪ್ರದರ್ಶನ ನೀಡುವುದರ ಮೂಲಕ ಅಜಿಂಕ್ಯಾ ರಹಾನೆ ಉಪ ನಾಯಕನ ಪಟ್ಟವನ್ನು ಕಳೆದುಕೊಂಡರೆ ಆ ಸ್ಥಾನಕ್ಕೆ ಈ ಕೆಳಕಂಡ ಆಟಗಾರರನ್ನು ನೇಮಿಸುವ ಸಾಧ್ಯತೆಗಳಿವೆ..

1. ರೋಹಿತ್ ಶರ್ಮಾ

1. ರೋಹಿತ್ ಶರ್ಮಾ

ಒಂದುವೇಳೆ ಅಜಿಂಕ್ಯ ರಹಾನೆ ಟೀಮ್ ಇಂಡಿಯಾ ಟೆಸ್ಟ್ ಉಪ ನಾಯಕನ ಪಟ್ಟವನ್ನು ಕಳೆದುಕೊಂಡು ತಂಡದಿಂದ ಹೊರಬಿದ್ದರೆ ಆ ಸ್ಥಾನಕ್ಕೆ ರೋಹಿತ್ ಶರ್ಮಾ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿವೆ. ನಿಯಮಿತ ಓವರ್ ಪಂದ್ಯಗಳಲ್ಲಿ ಉಪನಾಯಕನಾಗಿರುವ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಹಲವಾರು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ನಾಯಕನಾಗಿ ಒಟ್ಟು 5 ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟಿರುವ ಸಾಧನೆಯನ್ನು ಮಾಡಿರುವ ರೋಹಿತ್ ಶರ್ಮಾ ಟೀಮ್ ಇಂಡಿಯಾ ಟೆಸ್ಟ್ ತಂಡದ ಉಪನಾಯಕನಾಗಿ ಕೆಲಸ ನಿರ್ವಹಿಸಲು ಬೇಕಾದ ಎಲ್ಲಾ ಅರ್ಹತೆಗಳನ್ನು ತುಸು ಹೆಚ್ಚೇ ಹೊಂದಿದ್ದಾರೆ ಎಂದರೆ ತಪ್ಪಾಗಲಾರದು.

2. ಕೆಎಲ್ ರಾಹುಲ್

2. ಕೆಎಲ್ ರಾಹುಲ್

ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸಾಲು ಸಾಲು ಉತ್ತಮ ಪ್ರದರ್ಶನಗಳನ್ನು ನೀಡುವುದರ ಮೂಲಕ ಮಿಂಚುತ್ತಿರುವ ಕೆಎಲ್ ರಾಹುಲ್ ತಮ್ಮ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಮೂಲಕ ಟೆಸ್ಟ್ ಕ್ರಿಕೆಟ್‍ಗೆ ಹಿಂತಿರುಗಿದ್ದಾರೆ. 2 ವರ್ಷಗಳ ಹಿಂದೆ ಕಳಪೆ ಪ್ರದರ್ಶನ ನೀಡಿದ ಕಾರಣಕ್ಕಾಗಿ ಟೆಸ್ಟ್ ತಂಡದಿಂದ ಹೊರದೂಡಲ್ಪಟ್ಟಿದ್ದ ಕೆಎಲ್ ರಾಹುಲ್ ಇದೀಗ ಟೆಸ್ಟ್ ತಂಡಕ್ಕೆ ಅತಿ ಮುಖ್ಯವಾಗಿ ಬೇಕಾದ ಆಟಗಾರನಾಗಿದ್ದಾರೆ. ಅದರಲ್ಲಿಯೂ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಕೆಎಲ್ ರಾಹುಲ್ ಶತಕ ಬಾರಿಸಿ ಮಿಂಚುತ್ತಿದ್ದು ಮುಂದಿನ ದಿನಗಳಲ್ಲಿ ಅಜಿಂಕ್ಯ ರಹಾನೆ ತಂಡದಿಂದ ಹೊರಗುಳಿದರೆ ರೋಹಿತ್ ಶರ್ಮಾ ಹೊರತುಪಡಿಸಿದರೆ ಕೆಎಲ್ ರಾಹುಲ್ ಉಪನಾಯಕ ಸ್ಥಾನವನ್ನು ಅಲಂಕರಿಸುವ ಸಾಧ್ಯತೆಗಳಿವೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕತ್ವವನ್ನು ನಿಭಾಯಿಸಿರುವ ಅನುಭವವನ್ನು ಸಹ ಕೆಎಲ್ ರಾಹುಲ್ ಹೊಂದಿದ್ದಾರೆ.

ಸಿರಾಜ್ ಎಸೆದ ಪವರ್ಫುಲ್ ಎಸೆತಕ್ಕೆ ಹಸೀಬ್ ಕ್ಲೀನ್ ಬೌಲ್ಡ್ ಆದ ವಿಡಿಯೋ ನೋಡಿ | oneindia kannada
3. ರಿಷಭ್ ಪಂತ್

3. ರಿಷಭ್ ಪಂತ್

ಈಗಿನ ಕ್ರಿಕೆಟ್ ವಿಷಯಗಳಲ್ಲಿ ಅತಿ ಹೆಚ್ಚಾಗಿ ಚರ್ಚೆಯಾಗುವ ಭಾರತೀಯ ಆಟಗಾರನೆಂದರೆ ಅದು ರಿಷಭ್ ಪಂತ್. ತನ್ನ ಆಕ್ರಮಣಕಾರಿ ವೇಗದ ಬ್ಯಾಟಿಂಗ್‌ನಿಂದ ಸಾಕಷ್ಟು ಸುದ್ದಿಯಲ್ಲಿರುವ ಬ್ಯಾಟ್ಸ್‌ಮನ್‌ ರಿಷಭ್ ಪಂತ್. ತನ್ನ ಹೊಡಿಬಡಿ ಆಟದ ಮೂಲಕ ಸಾಕಷ್ಟು ಚರ್ಚೆಗೆ ಕಾರಣವಾಗಿರುವ ರಿಷಭ್ ಪಂತ್ ಅಜಿಂಕ್ಯ ರಹಾನೆ ಮುಂದಿನ ದಿನಗಳಲ್ಲಿ ಭಾರತ ತಂಡದಿಂದ ಹೊರನಡೆದರೆ ಉಪನಾಯಕನ ಸ್ಥಾನವನ್ನು ಅಲಂಕರಿಸುವ ಸಾಧ್ಯತೆಗಳಿವೆ. ಕೆಎಲ್ ರಾಹುಲ್ 29 ವರ್ಷ ವಯಸ್ಸಿನವರಾಗಿದ್ದಾರೆ ಹಾಗೂ ರೋಹಿತ್ ಶರ್ಮಾಗೆ 34 ವರ್ಷ ವಯಸ್ಸಾಗಿದ್ದು ಒಂದುವೇಳೆ ಕಿರಿಯ ಆಟಗಾರರಿಗೆ ಉಪನಾಯಕನ ಸ್ಥಾನವನ್ನು ನೀಡಲು ತಂಡ ನಿರ್ಧರಿಸಿದರೆ 23 ವರ್ಷದ ರಿಷಭ್ ಪಂತ್ ಉಪನಾಯಕನ ಪಟ್ಟಕ್ಕೇರುವ ಸಾಧ್ಯತೆಗಳು ಹೆಚ್ಚಿವೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Saturday, August 14, 2021, 10:53 [IST]
Other articles published on Aug 14, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X