ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನಾಲ್ಕನೇ ಟೆಸ್ಟ್‌ನಲ್ಲಿ ರಹಾನೆ ಸ್ಥಾನವನ್ನು ತುಂಬಬಲ್ಲ ಮೂವರು ಆಟಗಾರರು, ಉಪನಾಯಕ ಯಾರು?

IND vs ENG: 3 players who can replace Ajinkya Rahane in Oval Test

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಸೆಪ್ಟೆಂಬರ್ 2 ರಂದು ಓವಲ್ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು ಭಾರತ ಮತ್ತು ಇಂಗ್ಲೆಂಡ್ ಎರಡೂ ತಂಡಗಳಲ್ಲಿಯೂ ಸಾಕಷ್ಟು ಬದಲಾವಣೆಗಳು ಆಗುವುದು ಖಚಿತ ಎನ್ನಲಾಗುತ್ತಿದೆ. ಈಗಾಗಲೇ ಓವಲ್ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸಲು ಇಂಗ್ಲೆಂಡ್ ತಂಡದ ಪ್ರಮುಖ ಆಟಗಾರ ಕ್ರಿಸ್ ವೋಕ್ಸ್ ತಂಡಕ್ಕೆ ಮರಳಿದ್ದು, ತಂಡದ ಮತ್ತೋರ್ವ ಆಟಗಾರ ಜೋಸ್ ಬಟ್ಲರ್ ಮಗುವಿನ ನೀರಿಕ್ಷೆಯಲ್ಲಿದ್ದು ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ.

ತೃತೀಯ ಟೆಸ್ಟ್ ಗೆಲುವಿನ ಹಿಂದಿನ ಕಾರಣ ತಿಳಿಸಿದ ಇಂಗ್ಲೆಂಡ್ ತಂಡದ ಹೆಡ್ ಕೋಚ್ತೃತೀಯ ಟೆಸ್ಟ್ ಗೆಲುವಿನ ಹಿಂದಿನ ಕಾರಣ ತಿಳಿಸಿದ ಇಂಗ್ಲೆಂಡ್ ತಂಡದ ಹೆಡ್ ಕೋಚ್

ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಸರಣಿ ಹಾಗೂ 76 ರನ್‌ಗಳ ಗೆಲುವನ್ನು ಇಂಗ್ಲೆಂಡ್ ತಂಡ ಸಾಧಿಸಿದ ನಂತರ ಸಾಕಷ್ಟು ಟೀಕೆಗಳಿಗೆ ಒಳಗಾಗಿರುವ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಳ್ಳಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇತ್ತ ರವೀಂದ್ರ ಜಡೇಜಾ ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುನ್ನವೇ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ರವೀಂದ್ರ ಜಡೇಜಾ ಬದಲು ರವಿಚಂದ್ರನ್ ಅಶ್ವಿನ್ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವುದು ಖಚಿತ ಎನ್ನಲಾಗುತ್ತಿದೆ.

ಪೂಜಾರ ಕಳಪೆ ಬ್ಯಾಟಿಂಗ್ ಬಗ್ಗೆ ಡ್ರೆಸಿಂಗ್ ರೂಮ್‌ನಲ್ಲಿ ಆಗುತ್ತಿದ್ದ ಚರ್ಚೆಯನ್ನು ಬಹಿರಂಗಪಡಿಸಿದ ರೋಹಿತ್ ಶರ್ಮಾಪೂಜಾರ ಕಳಪೆ ಬ್ಯಾಟಿಂಗ್ ಬಗ್ಗೆ ಡ್ರೆಸಿಂಗ್ ರೂಮ್‌ನಲ್ಲಿ ಆಗುತ್ತಿದ್ದ ಚರ್ಚೆಯನ್ನು ಬಹಿರಂಗಪಡಿಸಿದ ರೋಹಿತ್ ಶರ್ಮಾ

ಇನ್ನು ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿಯೂ ಕಳಪೆ ಪ್ರದರ್ಶನವನ್ನು ನೀಡಿ ತಮ್ಮ ಕೆಟ್ಟ ಫಾರ್ಮ್‌ ಮುಂದುವರೆಸಿರುವ ಅಜಿಂಕ್ಯ ರಹಾನೆಯನ್ನು ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗಿಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಇಂಗ್ಲೆಂಡ್ ವಿರುದ್ಧ ತೃತೀಯ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಮತ್ತು ಚೇತೇಶ್ವರ್ ಪೂಜಾರ ತಂಡದ ಪರ ಉತ್ತಮ ರನ್ ಕಲೆ ಹಾಕುವ ಯತ್ನ ಮಾಡಿದರೆ, ಅಜಿಂಕ್ಯ ರಹಾನೆ ಮಾತ್ರ 10 ರನ್ ಗಳಿಸಿ ಔಟ್ ಆಗುವುದರ ಮೂಲಕ ತಮ್ಮ ಕಳಪೆ ಪ್ರದರ್ಶನವನ್ನು ಮುಂದುವರಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 5 ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿರುವ ಅಜಿಂಕ್ಯ ರಹಾನೆ ಗಳಿಸಿರುವುದು ಕೇವಲ 95 ರನ್ ಮಾತ್ರ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯದಿಂದ ಅಜಿಂಕ್ಯ ರಹಾನೆ ಹೊರಗುಳಿಯಲಿದ್ದಾರೆ ಎನ್ನಲಾಗುತ್ತಿದ್ದು, ರೋಹಿತ್ ಶರ್ಮಾ ಉಪ ನಾಯಕನ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ ಮತ್ತು ಈ ಕೆಳಕಂಡ 3 ಆಟಗಾರರಲ್ಲಿ ಒಬ್ಬರು ಅಜಿಂಕ್ಯ ರಹಾನೆ ಸ್ಥಾನವನ್ನು ತಂಡದಲ್ಲಿ ತುಂಬಲಿದ್ದಾರೆ ಎನ್ನಲಾಗುತ್ತಿದೆ..

1. ಹನುಮ ವಿಹಾರಿ

1. ಹನುಮ ವಿಹಾರಿ

ಪ್ರಥಮ ದರ್ಜೆ ಮತ್ತು ರಣಜಿ ಕ್ರಿಕೆಟ್‍ನಲ್ಲಿ ಆಡಿದ ಉತ್ತಮ ಅನುಭವವನ್ನು ಹೊಂದಿರುವ ಹನುಮ ವಿಹಾರಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಓವೆಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಬದಲು ತಂಡದಲ್ಲಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಮೈದಾನದಲ್ಲಿ ಹೆಚ್ಚು ಹೊತ್ತು ಬ್ಯಾಟಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿರುವ ಹನುಮ ವಿಹಾರಿ ಇದುವರೆಗೂ ಆಡಿರುವ ಒಟ್ಟು 12 ಟೆಸ್ಟ್ ಪಂದ್ಯಗಳಲ್ಲಿ 624 ರನ್ ಗಳಿಸಿದ್ದಾರೆ. 2018ರಲ್ಲಿ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಟೆಸ್ಟ್ ಪಂದ್ಯವೊಂದರ ಮೂಲಕ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಇದೇ ಹನುಮವಿಹಾರಿ ಆ ಪಂದ್ಯದಲ್ಲಿ ಅರ್ಧ ಶತಕ ಬಾರಿಸಿದ್ದನ್ನು ನಾವು ಇಲ್ಲಿ ನೆನಪಿಸಿಕೊಳ್ಳಬೇಕಿದೆ.

2. ಸೂರ್ಯಕುಮಾರ್ ಯಾದವ್

2. ಸೂರ್ಯಕುಮಾರ್ ಯಾದವ್

ಇತ್ತೀಚೆಗಷ್ಟೇ ನಡೆದ ಏಕದಿನ ಮತ್ತು ಟಿ ಟ್ವೆಂಟಿ ಪಂದ್ಯಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪದಾರ್ಪಣೆ ಮಾಡುವುದರ ಮೂಲಕ ಮಿಂಚು ಹರಿಸಿರುವ ಸೂರ್ಯಕುಮಾರ್ ಯಾದವ್ ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆಗಳು ಹೆಚ್ಚಿವೆ. ಇದುವರೆಗೂ ಯಾವುದೇ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯದಲ್ಲಿಯೂ ಆಡಿರುವ ಅನುಭವವಿರದ ಸೂರ್ಯಕುಮಾರ್ ಯಾದವ್ ಪ್ರಥಮ ದರ್ಜೆಯ ಕ್ರಿಕೆಟ್‍ನಲ್ಲಿ ಒಟ್ಟು 77 ಟೆಸ್ಟ್ ಪಂದ್ಯಗಳನ್ನಾಡಿದ್ದು ಬರೋಬ್ಬರಿ 5,326 ರನ್‌ಗಳನ್ನು ಬಾರಿಸಿದ್ದಾರೆ, ಇದರಲ್ಲಿ 14 ಶತಕಗಳು ಮತ್ತು 26 ಅರ್ಧಶತಕಗಳೂ ಸೇರಿವೆ. ಇನ್ನು ಇತ್ತೀಚೆಗಷ್ಟೇ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿರುವ ಸೂರ್ಯಕುಮಾರ್ ಯಾದವ್ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರಹಾನೆ ಬದಲು ಸ್ಥಾನಗಿಟ್ಟಿಸಿಕೊಳ್ಳುವ ಸಾಧ್ಯತೆಗಳಿವೆ.

ಈ ಬಾರಿಯ IPL ಪ್ರದರ್ಶನದ ಮೇಲೆ ನಿಂತಿದೆ ವಿರಾಟ್ ಮತ್ತು ಧೋನಿ ಭವಿಷ್ಯ | Oneindia Kannada
3. ಮಯಾಂಕ್ ಅಗರ್ವಾಲ್

3. ಮಯಾಂಕ್ ಅಗರ್ವಾಲ್

ಭಾರತ ಮತ್ತು ಇಂಗ್ಲೆಂಡ್ ಸರಣಿ ಆರಂಭಕ್ಕೂ ಮುನ್ನವೇ ತಂಡದಲ್ಲಿ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದ ಮಯಾಂಕ್ ಅಗರ್ವಾಲ್ ಸರಣಿಯ ಮೊದಲನೇ ಟೆಸ್ಟ್ ಪಂದ್ಯ ಆರಂಭವಾಗುವುದಕ್ಕೆ ಕೆಲ ಸಮಯವಿರುವಾಗ ಗಾಯದ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಮಯಾಂಕ್ ಅಗರ್ವಾಲ್ ಬದಲು ಕೆ ಎಲ್ ರಾಹುಲ್ ಅವರಿಗೆ ಸ್ಥಾನವನ್ನು ನೀಡಲಾಗಿತ್ತು. ಹೀಗೆ ಇದುವರೆಗೂ ನಡೆದಿರುವ ಇಂಗ್ಲೆಂಡ್ ವಿರುದ್ಧದ ಮೊದಲ 3 ಟೆಸ್ಟ್ ಪಂದ್ಯಗಳಲ್ಲಿ ಸ್ಥಾನ ಪಡೆದುಕೊಳ್ಳದೇ ಇರುವ ಮಯಾಂಕ್ ಅಗರ್ವಾಲ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಬದಲು ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿವೆ.

Story first published: Monday, August 30, 2021, 16:13 [IST]
Other articles published on Aug 30, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X