ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಶಾರ್ದೂಲ್ ಠಾಕೂರ್ ಆಡದಿದ್ದರೆ ಉತ್ತಮ ಎನ್ನುತ್ತಿವೆ ಈ 3 ಕಾರಣಗಳು

IND vs ENG: 3 reasons why Shardul Thakur should not play Leeds test
ಮೂರನೇ ಟೆಸ್ಟ್ ಫಿಟ್ ಆಗಿರೋ ಶಾರ್ಧೂಲ್ ತಾಕೂರ್ | Oneindia Kannada

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಗಿದಿದ್ದು ಇಂಗ್ಲೆಂಡ್ ವಿರುದ್ಧ ಭಾರತ 1-0 ಅಂತರದ ಮುನ್ನಡೆಯನ್ನು ಸಾಧಿಸಿದೆ.

ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಮೊದಲನೇ ಪಂದ್ಯ ಮಳೆಯ ಕಾರಣದಿಂದಾಗಿ ಯಾವುದೇ ಫಲಿತಾಂಶವಿಲ್ಲದೆ ನೀರಸ ಡ್ರಾನಲ್ಲಿ ಅಂತ್ಯಗೊಂಡಿತು. ಹಾಗೂ ನಂತರ ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಪಡೆದಿರುವ ಲಾರ್ಡ್ಸ್ ಅಂಗಳದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಟೀಂ ಇಂಡಿಯಾ 1-0 ಅಂತರದಲ್ಲಿ ಸದೆಬಡಿಯಿತು.

ಈತನಿಂದ ಎಬಿಡಿ, ಮ್ಯಾಕ್ಸ್‌ವೆಲ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬಹುದು ಎಂದ ಆರ್‌ಸಿಬಿ ನೂತನ ಕೋಚ್!ಈತನಿಂದ ಎಬಿಡಿ, ಮ್ಯಾಕ್ಸ್‌ವೆಲ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬಹುದು ಎಂದ ಆರ್‌ಸಿಬಿ ನೂತನ ಕೋಚ್!

ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಲೀಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯವೂ ಸಹ ಲಾರ್ಡ್ಸ್ ಅಂಗಳದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದ ರೀತಿ ಕುತೂಹಲವನ್ನು ದಿನದಿಂದ ದಿನಕ್ಕೆ ಹೆಚ್ಚಾಗುವಂತೆ ಮಾಡುತ್ತಿದೆ. ಲೀಡ್ಸ್ ಅಂಗಣದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸದೆಬಡಿಯುವುದರ ಮೂಲಕ ಸರಣಿಯನ್ನು ಬಹುತೇಕ ತನ್ನ ಕೈವಶ ಮಾಡಿಕೊಳ್ಳುವತ್ತ ಟೀಮ್ ಇಂಡಿಯಾ ಕಣ್ಣಿಟ್ಟಿದ್ದರೆ, ಅತ್ತ ಇಂಗ್ಲೆಂಡ್ ತಂಡ ಲೀಡ್ಸ್ ಅಂಗಣದಲ್ಲಿ ಟೀಮ್ ಇಂಡಿಯಾವನ್ನು ಸೋಲಿಸುವುದರ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ತನ್ನ ಗೆಲುವಿನ ಖಾತೆಯನ್ನು ತೆರೆಯುವ ಯೋಜನೆಯಲ್ಲಿದೆ.

ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಇದರ ನಡುವೆ ಇದೀಗ ಲಾರ್ಡ್ಸ್ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಗಾಯಕ್ಕೊಳಗಾಗಿ ತಂಡದಿಂದ ಹೊರಗುಳಿದಿದ್ದ ಶಾರ್ದೂಲ್ ಠಾಕೂರ್ ಗಾಯದಿಂದ ಚೇತರಿಕೆ ಕಂಡಿದ್ದು ಮತ್ತೆ ತಂಡ ಸೇರಿಕೊಳ್ಳಲು ಸಮರ್ಥರಾಗಿದ್ದಾರೆ ಎಂದು ಅಜಿಂಕ್ಯ ರಹಾನೆ ಹೇಳಿದ್ದಾರೆ.

ಐಪಿಎಲ್ 2021ರ ಮೊದಲಾರ್ಧದಲ್ಲಿ ಆರ್‌ಸಿಬಿ ಪರ ಮಿಂಚಿದ ಮೂವರು ಮತ್ತು ನೆಲಕಚ್ಚಿದ ಇಬ್ಬರು ಆಟಗಾರರುಐಪಿಎಲ್ 2021ರ ಮೊದಲಾರ್ಧದಲ್ಲಿ ಆರ್‌ಸಿಬಿ ಪರ ಮಿಂಚಿದ ಮೂವರು ಮತ್ತು ನೆಲಕಚ್ಚಿದ ಇಬ್ಬರು ಆಟಗಾರರು

ಹೀಗೆ ಇಂಗ್ಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ 4 ವಿಕೆಟ್‍ಗಳನ್ನು ಪಡೆದಿದ್ದ ಶಾರ್ದೂಲ್ ಠಾಕೂರ್ ಇದೀಗ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡಲು ಸಜ್ಜಾಗಿರುವುದು ಒಂದೆಡೆ ಖುಷಿಯ ವಿಚಾರವಾದರೆ, ಮತ್ತೊಂದೆಡೆ ಶಾರ್ದೂಲ್ ಠಾಕೂರ್ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯದಿರುವುದೇ ಉತ್ತಮ ಎಂದು ಸಹ ಹೇಳಲಾಗುತ್ತಿದೆ. ಉತ್ತಮ ಪ್ರದರ್ಶನ ನೀಡಿದ್ದ ಶಾರ್ದೂಲ್ ಠಾಕೂರ್ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಯಾಕೆ ಕಣಕ್ಕಿಳಿಯಬಾರದು ಎಂಬುದಕ್ಕೆ ಕಾರಣಗಳು ಈ ಕೆಳಕಂಡಂತಿವೆ..

3. ಸದ್ಯ ತಂಡದಲ್ಲಿರುವ ವೇಗಿಗಳು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ

3. ಸದ್ಯ ತಂಡದಲ್ಲಿರುವ ವೇಗಿಗಳು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ

ಲಾರ್ಡ್ಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ವೇಗಿಗಳು ಯಾವ ಮಟ್ಟಿಗಿನ ಪ್ರದರ್ಶನ ನೀಡಿದರು ಎಂಬುದು ನಿಮಗೆಲ್ಲರಿಗೂ ತಿಳಿದೇ ಇದೆ. ಮೊಹಮ್ಮದ್ ಸಿರಾಜ್, ಇಶಾಂತ್ ಶರ್ಮಾ, ಜಸ್ ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಈ ನಾಲ್ವರು ವೇಗಿಗಳು ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದರು. ಮೊಹಮ್ಮದ್ ಸಿರಾಜ್ 8 ವಿಕೆಟ್‍ಗಳನ್ನು ಪಡೆದು ಮಿಂಚಿದರೆ, ಎರಡನೇ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಬದಲು ಸ್ಥಾನ ಪಡೆದ ಇಶಾಂತ್ ಶರ್ಮಾ 5 ವಿಕೆಟ್‍ಗಳನ್ನು ತಮ್ಮದಾಗಿಸಿಕೊಂಡರು. ಹೀಗೆ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ನೀಡಿದ ಪ್ರದರ್ಶನಕ್ಕಿಂತ ಎರಡನೇ ಟೆಸ್ಟ್ ಪಂದ್ಯದಲ್ಲಿ ಇತರೆ ಎಲ್ಲಾ ವೇಗಿಗಳು ನೀಡಿದ ಪ್ರದರ್ಶನ ಅತ್ಯುತ್ತಮವಾಗಿದ್ದು ಮತ್ತೆ ಶಾರ್ದೂಲ್ ಠಾಕೂರ್‌ಗೆ ಆಡುವ ಬಳಗದಲ್ಲಿ ಸ್ಥಾನ ನೀಡುವ ಅಗತ್ಯತೆ ಇಲ್ಲ ಎನ್ನಲಾಗುತ್ತಿದೆ.

2. ಹೆಡಿಂಗ್ಲೆ ಪಿಚ್‌ನಲ್ಲಿ ಶಾರ್ದೂಲ್ ಎಡವಬಹುದು

2. ಹೆಡಿಂಗ್ಲೆ ಪಿಚ್‌ನಲ್ಲಿ ಶಾರ್ದೂಲ್ ಎಡವಬಹುದು

ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದ ಪಿಚ್‌ಗೆ ಹೋಲಿಸಿದರೆ ಲೀಡ್ಸ್ ಕ್ರೀಡಾಂಗಣದ ಪಿಚ್ ಬಹಳ ವಿಭಿನ್ನವಾಗಿರಲಿದೆ. ಲೀಡ್ಸ್ ಕ್ರೀಡಾಂಗಣದ ವಾತಾವರಣವು ಸಹ ಅಷ್ಟೇ, ಕಳೆದ ಕೆಲ ದಿನಗಳಿಂದ ಯಾವುದೇ ಮಳೆಯಿಲ್ಲದೆ ಸಾಕಷ್ಟು ಬಿಸಿಲು ಕ್ರೀಡಾಂಗಣಕ್ಕೆ ಬೀಳುತ್ತಿದ್ದು ಪಿಚ್‌ನಲ್ಲಿ ಸ್ವಿಂಗ್ ಬೌಲರ್‌ಗಳಿಗೆ ಹೆಚ್ಚಿನ ಸಹಕಾರಿಯಾಗಿರಲಿದೆ. ಹೀಗಾಗಿ ಶಾರ್ದೂಲ್ ಠಾಕೂರ್ ಈ ಪಿಚ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗುವುದು ಮಾತ್ರವಲ್ಲದೇ ಹೆಚ್ಚಿನ ರನ್‌ಗಳನ್ನೂ ನೀಡುವ ಸಾಧ್ಯತೆ ಹೆಚ್ಚಿದೆ.

1. ಮೊದಲನೇ ಟೆಸ್ಟ್‌ನಲ್ಲಿ ಬ್ಯಾಟಿಂಗ್‌ನಲ್ಲಿ ವಿಫಲ

1. ಮೊದಲನೇ ಟೆಸ್ಟ್‌ನಲ್ಲಿ ಬ್ಯಾಟಿಂಗ್‌ನಲ್ಲಿ ವಿಫಲ

ಲಾರ್ಡ್ಸ್ ಅಂಗಳದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಬೌಲರ್‌ಗಳು ಎಷ್ಟರಮಟ್ಟಿಗೆ ಬ್ಯಾಟ್ ಬೀಸಿದರು ಎಂಬುದನ್ನು ನೀವೇ ನೋಡಿದ್ದೀರಿ. ಆದರೆ ಶಾರ್ದೂಲ್ ಠಾಕೂರ್ ಅಷ್ಟು ದೊಡ್ಡ ಮಟ್ಟದ ಜವಾಬ್ದಾರಿಯುತ ಆಟವನ್ನು ಆಡಬಲ್ ಬ್ಯಾಟಿಂಗ್ ಸಾಮರ್ಥ್ಯವನ್ನು ಹೊಂದಿಲ್ಲ. ಅಷ್ಟೇ ಅಲ್ಲದೆ ಇಂಗ್ಲೆಂಡ್ ವಿರುದ್ಧ ನಾಟಿಂಗ್ ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಯಾವುದೇ ರನ್ ಗಳಿಸದೇ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಹೀಗಾಗಿ ಶಾರ್ದೂಲ್ ಠಾಕೂರ್‌ಗೆ ಹೋಲಿಸಿದರೆ ಉಳಿದ ವೇಗಿಗಳು ಉತ್ತಮ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

Story first published: Tuesday, August 24, 2021, 0:52 [IST]
Other articles published on Aug 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X