ಭಾರತ ಮತ್ತು ಇಂಗ್ಲೆಂಡ್ ನಡುವೆ 5ನೇ ಹಾಗೂ ಕೊನೆಯ ಟಿ20 ಪಂದ್ಯ ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ನಡೆದ ಮೊದಲ ಎರಡು ಪಂದ್ಯಗಳಲ್ಲಿ ಭಾರತ ಅದ್ಭುತ ಗೆಲುವು ದಾಖಲಿಸಿದೆ. ಆದರೆ, ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಭಾರತವನ್ನು 26 ರನ್‌ಗಳಿಂದ ಸೋಲಿಸಿತು. ಇದಾದ ನಂತರ, ಪುಣೆಯಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ಅನ್ನು 15 ರನ್‌ಗಳಿಂದ ಸೋಲಿಸಿತ ಸರಣಿ ವಶಪಡಿಸಿಕೊಂಡಿದೆ. ಇದೀಗ 5 ಪಂದ್ಯಗಳ ಸರಣಿಯಲ್ಲಿ ಭಾರತ 3-1 ಅಂತರದ ಮುನ್ನಡೆ ಸಾಧಿಸಿದೆ.
ಮುಂಬೈನಲ್ಲಿ ಇಂದು ನಡೆಯಲಿರುವ 5ನೇ ಟಿ20 ಪಂದ್ಯ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಭಾರತ ತಂಡ ಈ ಪಂದ್ಯವನ್ನು ಗೆದ್ದು 4-1 ಅಂತರದಲ್ಲಿ ಸರಣಿ ವಶಪಡಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. ಮತ್ತೊಂದೆಡೆ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಗೆಲುವಿನೊಂದಿಗೆ ಅಂತ್ಯಗೊಳಿಸುವುದರ ಮೇಲೆ ಇಂಗ್ಲೆಂಡ್ ಕಣ್ಣು ನೆಟ್ಟಿದೆ. ಆರಂಭಿಕ ಪಂದ್ಯ ಹೊರತುಪಡಿಸಿದರೆ ಇಡೀ ಸರಣಿಯಲ್ಲಿ ಇಂಗ್ಲೆಂಡ್ ದಿಟ್ಟ ಪ್ರದರ್ಶನ ತೋರಿದೆ. ಇದಲ್ಲದೆ, ಉಭಯ ತಂಡಗಳ ಆಟಗಾರರು ಕೆಲವು ದಾಖಲೆಗಳನ್ನು ಮಾಡುವ ಅವಕಾಶವನ್ನು ಹೊಂದಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ.

ವಾಂಖೆಡೆಯಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ರನ್ ಮಳೆ ಸುರಿಸುವ ನಿರೀಕ್ಷೆಯಿದೆ. ಜೊತೆಗೆ ಉಭಯ ತಂಡಗಳ ಆಟಗಾರರು ಆಡುವ ಈ ಪಂದ್ಯದಲ್ಲಿ ಕೆಲವು ದೊಡ್ಡ ದಾಖಲೆಗಳನ್ನು ಸಹಾ ಮಾಡಬಹುದು. ಮೂರು ದಾಖಲೆಗಳನ್ನು ಮಾಡಬಹುದಾದ ಆಟಗಾರರ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗದ ಬೌಲರ್ ಅರ್ಷದೀಪ್ ಸಿಂಗ್, ಇಂಗ್ಲೆಂಡ್‌ನ ಸ್ಪಿನ್ನರ್ ಆದಿಲ್ ರಶೀದ್ ಮತ್ತು ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಇದ್ದಾರೆ.
ಭಾರತ ವಿರುದ್ಧ ಟಿ20 ಸರಣಿಯಲ್ಲಿ ಇಂಗ್ಲೆಂಡ್ ತಂಡದ ಲೆಗ್ ಸ್ಪಿನ್ನರ್ ಆದಿಲ್ ರಶೀದ್ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದಾರೆ. ಅವರು ಸರಣಿಯಲ್ಲಿ ಆಡಿರುವ 4 ಪಂದ್ಯಗಳಲ್ಲಿ ಕೇವಲ ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದಾರೆ. ಆದರೆ ಅವರ ಬೌಲಿಂಗ್ ಅತ್ಯುತ್ತಮವಾಗಿದೆ. ಇದೀಗ ಅಂತಿಮ ಪಂದ್ಯದಲ್ಲೂ ಅವರಿಂದ ಇದೇ ರೀತಿಉ ಅತ್ಯುತ್ತಮ ಬೌಲಿಂಗ್ ಪ್ರದರ್ಶನವನ್ನು ನಿರೀಕ್ಷಿಸಲಾಗುತ್ತಿದೆ. ಪ್ರಸ್ತುತ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅದಿಲ್ ರಶೀದ್ ಆಡಿರುವ13 ಪಂದ್ಯಗಳಲ್ಲಿ 130 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದೀಗ ಭಾರತ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ ರಶೀದ್ ಮೂರು ವಿಕೆಟ್ ಪಡೆದರೆ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಲಿದ್ದಾರೆ.
ಇಂಗ್ಲೆಂಡ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಲಿಯಾಮ್ ಲಿವಿಂಗ್‌ಸ್ಟೋನ್ ಇದುವರೆಗೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 46 ಪಂದ್ಯಗಳಲ್ಲಿ 946 ರನ್ ಕಲೆ ಹಾಕಿದ್ದಾರೆ. ಭಾರತ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ ಲಿವಿಂಗ್‌ಸ್ಟೋನ್ ಕೇವಲ 65 ರನ್ ಗಳಿಸುವ ಮೂಲಕ ದಾಖಲೆ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಈ ಪಂದ್ಯದಲ್ಲಿ ಅವರು 54 ರನ್‌ಗಳ ಇನ್ನಿಂಗ್ಸ್ ಆಡಿದರೆ, ಅಂತಾರಾಷ್ಟ್ರೀಯ ಟಿ20ಯಲ್ಲಿ 1000 ರನ್ ಪೂರೈಸಲಿದ್ದಾರೆ. ಈ ಮೂಲಕ ಇಂಗ್ಲೆಂಡ್ ಪರ 1000 ರನ್ ಗಳಿಸಿದ 10ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.
ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯ ಪ್ರತಿ ಪಂದ್ಯಯಲ್ಲಿಯೂ ಭಾರತ ತಂಡಕ್ಕೆ ವೇಗದ ಬೌಲರ್ ಅರ್ಷದೀಪ್ ಸಿಂಗ್ ಉತ್ತಮ ಆರಂಭ ನೀಡಿದ್ದಾರೆ. ಈ ಸರಣಿಯಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಅರ್ಷದೀಪ್ 4 ವಿಕೆಟ್ ಪಡೆದಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ಅವರು ಆಡಿರುವ 63 ಪಂದ್ಯಗಳಲ್ಲಿ 99 ವಿಕೆಟ್‌ಗಳನ್ನು ಪಡೆದಿದ್ದಾರೆ. ವಾಂಖೆಡೆಯಲ್ಲಿ ಒಂದು ವಿಕೆಟ್ ಪಡೆಯುವ ಮೂಲಕ ಅವರು ಭಾರತ ತಂಡದ ಪರ ಅಂತಾರಾಷ್ಟ್ರೀಯ ಟಿ20ಯಲ್ಲಿ 100 ವಿಕೆಟ್ ಪಡೆದ ಮೊದಲ ಬೌಲರ್ ಆಗಲಿದ್ದಾರೆ. ಈಗಾಗಲೇ ಭಾರತ ತಂಡದ ಪರ ಟಿ20ಯಲ್ಲಿ ಅತಿಹೆಚ್ಚು ವಿಕೆಟ್ ಪಡೆದ ದಾಖಲೆಯನ್ನೂ ಹೊಂದುದ್ದಾರೆ.