ಭಾರತ vs ಇಂಗ್ಲೆಂಡ್: ನಿರ್ಣಾಯಕ ಪಂದ್ಯಕ್ಕೆ ಅಡ್ಡಿಯಾಗಲಿದೆಯಾ ಮಳೆ?, ಪಿಚ್ ರಿಪೋರ್ಟ್ ಮಾಹಿತಿ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರನಿಯ ಮೂರನೇ ಪಂದ್ಯದ ಮೇಲೆ ಕ್ರಿಕೆಟ್ ಅಭಿಮಾನಿಗಳ ಚಿತ್ತ ನೆಟ್ಟಿದೆ. ಮೊದಲ ಎರಡು ಪಂದ್ಯಗಳಲ್ಲಿ ಎರಡು ತಂಡಗಳು ಕುಡ ಗೆಲುವು ಸೋಲಿನ ರುಚಿ ಅನುಭವಿಸಿದ್ದು ಮೂರನೇ ಹಾಗೂ ಅಂತಿಮ ಪಂದ್ಯ ಈ ಸರಣಿಯ ನಿರ್ಣಾಯಕ ಪಂದ್ಯವಾಗಿದೆ. ಇಲ್ಲಿ ಗೆದ್ದ ತಂಡ ಏಕದಿನ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಳ್ಳಲಿದೆ.
ಈ ಸರಣಿಯ ಮೊದಲ ಪಂದ್ಯವನ್ನು ಭಾರತ 10 ವಿಕೆಟ್‌ಗಳ ಅಂತರದಿಂದ ಗೆಲ್ಲುವ ಮುಲಕ ಸರಣಿಯಲ್ಲಿ ಮೇಲುಗೈ ಸಾಧಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಆತಿಥೆಯ ಇಂಗ್ಲೆಂಡ್ ತಂಡ ತಿರುಗಿ ಬಿದ್ದಿದೆ. ಇದರ ಪರಿಣಾಮವಾಗಿ ಇಂಗ್ಲೆಂಡ್ ತಂಡ ಎರಡನೇ ಪಂದ್ಯದಲ್ಲಿ ಭಾರತ ತಂಡವನ್ನು 100 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದ್ದು ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ.
ಇದೀಗ ಅಂತಿಮ ಪಂದ್ಯ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಕ್ರಿಡಾಂಗಣದಲ್ಲಿ ನಡೆಯಲಿದ್ದು ಭಾನುವಾರ ಎರಡು ತಮಡಗಳು ಕೂಡ ಮುಖಾಮುಖಿಯಾಗಲಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬುದು ಈಗಿರುವ ಕುತೂಹಲ. ಆದರೆ ಈ ಪಂದ್ಯಕ್ಕೆ ಹವಾಮಾನ ಅಡ್ಡಿಯಾಗಲಿದೆಯಾ? ಪಿಚ್ ರಿಪೋರ್ಟ್ ಹೇಗಿದೆ? ಈ ಬಗೆಗಿನ ಮಾಹಿತಿ ಇಲ್ಲಿದೆ. ಮುಂದೆ ಓದಿ..

ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದ ಮಾಹಿತಿ
ಕ್ರಿಕೆಟ್‌ನಲ್ಲಿ ಅತ್ಯಂತ ಹಳೇಯ ಸ್ಟೇಡಿಂಗಳಲ್ಲಿ ಮ್ಯಾಂಚೆಸ್ಟರ್‌ನಲ್ಲಿರುವ ಓಲ್ಡ್ ಟ್ರಾಫಾರ್ಟ್ ಕ್ರೀಡಾಂಗಣ ಕೂಡ ಒಂದಾಗಿದೆ. 1857ರಲ್ಲಿ ಈ ಕ್ರೀಡಾಂಗಣ ಉದ್ಘಾಟನೆಯಾಗಿದ್ದು ಮ್ಯಾಂಚೆಸ್ಟರ್ ಕ್ರಿಕೆಟ್ ಕ್ಲಬ್ ಹಾಗೂ ಲಂಕಾಶೈರ್ ಕೌಂಟಿ ಕ್ಲಬ್‌ನ ತವರಾಗಿ ಗುರುತಿಸಿಕೊಂಡಿದೆ. 26 ಸಾವಿರ ಪ್ರೇಕ್ಷಕರು ಈ ಕ್ರೀಡಾಂಗಣದಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದೆ. ಈ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳ ಸರಾಸರಿ ಸ್ಕೋರ್ 240 ಆಗಿದೆ.

ಓಲ್ಡ್ ಟ್ರಾಫರ್ಡ್ ಪಿಚ್ ರಿಪೋರ್ಟ್
ಓಲ್ಡ್ ಟ್ರ್ಯಾಫೋರ್ಡ್ ಪಿಚ್ ಉತ್ತಮ ಬೌನ್ಸನ್ನು ಹೊಂದಿದೆ. ಹೀಗಾಗಿ ವೇಗಿಗಳಿಗೆ ಸ್ವಲ್ಪ ಹೆಚ್ಚು ಸಹಾಯಮಾಡುತ್ತದೆ. ಸಾಮಾನ್ಯವಾಗಿ ಉತ್ತರ ಇಂಗ್ಲೆಂಡ್‌ನ ಹವಾಮಾನ ಮೋಡಕವಿದ ವಾತಾವರಣದಿಂದ ಕೂಡಿರುವ ಕಾರಣ ಈ ಹವಾಮಾನ ಬೌಲರ್‌ಗಳಿಗೆ ಸಹಾಯಕವಾಗಿದೆ. ಇನ್ನು ಈ ಪರಿಸ್ಥಿರಿಯನ್ನು ದಿಟ್ಟವಾಗಿ ಎದುರಿಸುವಲ್ಲಿ ಯಶಸ್ವಿಯಾದರೆ ಬ್ಯಾಟ್ಸ್‌ಮನ್‌ಗಳು ಕೂಡ ಉತ್ತಮವಾಗಿ ರನ್‌ಗಳಿಸಬಹುದು.

ಮ್ಯಾಂಚೆಸ್ಟರ್ ಹವಾಮಾನ ವರದಿ ಹೇಗಿದೆ?
ಭಾನುವಾರ ಬೆಳಗಿನ ಹೊತ್ತು ಮ್ಯಾಂಚೆಸ್ಟರ್‌ನ ಉಷ್ಣಾಂಶ ಸುಮಾರು 29 ಡಿಗ್ರಿ ಸೆಲ್ಸಿಯಸ್‌ನಷ್ಟು ಇರಲಿದೆ. ಆದರೆ ರಾತ್ರಿಯ ವೇಲೆ ಇದು 18 ಡಿಗ್ರಿಗೆ ಇಳಿಯಲಿದೆ. ಆದರೆ ಬೇಲಗಿನ ಹೊತ್ತು ಶೇಕಡಾ 24ರಿಂದ 3 ರಷ್ಟು ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ. ಆದರೆ ಸಮಾಧಾನಕರ ಸಂಗತಿಯೆಂದರೆ ಈ ಮೋಡ ಕವಿದ ವಾತಾವರಣ ಮಳೆಯಾಗುವ ಸಾಧ್ಯತೆ ಬಹಳ ಕಡಿಮೆಯಿದೆ. ಹಾಗಾಗಿ ಸಂಪೂರ್ಣ 50 ಓವರ್‌ಗಳ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿಲ್ಲ.

ಓಲ್ಡ್ ಟ್ರಾಫರ್ಡ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ದಾಖಲೆ
ಭಾರತ ತಂಡ ಮ್ಯಾಂಚೆಸ್ಟರ್‌ನಲ್ಲಿ 11 ಏಕದಿನ ಪಂದ್ಯಗಳನ್ನು ಆಡಿದ್ದು ಇದರಲ್ಲಿ 5 ಪಂದ್ಯಗಳನ್ನು ಗೆದ್ದಿದ್ದರೆ ಉಳಿದ 6 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಮತ್ತೊಂದೆಡೆ ಇಂಗ್ಲೆಂಡ್ ತಂಡ ಈ ಕ್ರೀಡಾಂಗಣದಲ್ಲಿ 42 ಏಕದಿನ ಪಂದ್ಯಗಳನ್ನು ಆಡಿದ್ದು ಇದರಲ್ಲಿ 27 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ 14 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. 1 ಪಂದ್ಯ ಫಲಿತಾಂಶ ಕಾಣದೆ ರದ್ದಾಗಿದೆ.

ಇತ್ತಂಡಗಳ ಸ್ಕ್ವಾಡ್ ಹೀಗಿದೆ
ಭಾರತ ಏಕದಿನ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬೂಮ್ರಾ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್
ಇಂಗ್ಲೆಂಡ್ ಏಕದಿನ ತಂಡ: ಜೋಸ್ ಬಟ್ಲರ್ (ನಾಯಕ / ವಿಕೆಟ್ ಕೀಪರ್), ಮೊಯಿನ್ ಅಲಿ, ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟನ್, ಕ್ರೇಗ್ ಓವರ್‌ಟನ್, ಮ್ಯಾಥ್ಯೂ ಪಾರ್ಕಿನ್ಸನ್, ಜೋ ರೂಟ್, ಜೇಸನ್ ರಾಯ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications