IND vs ENG: 3ನೇ ಪಂದ್ಯದಲ್ಲಿ ಮಿಂಚಿದ ಹಾರ್ದಿಕ್, ಬಟ್ಲರ್: ಭಾರತ ಸರಣಿ ಗೆಲ್ಲಲು 260 ರನ್‌ಗಳ ಗುರಿ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡದ ಬಿಗಿ ಬೌಲಿಂಗ್ ದಾಳಿಗೆ ಆತಿಥೇಯ ಇಂಗ್ಲೆಂಡ್ ಸಾಧಾರಣ ಮೊತ್ತ ಗಳಿಸಿದೆ.
ಮ್ಯಾಂಚೆಸ್ಟರ್‌ನಲ್ಲಿ ನಡೆಯುತ್ತಿರುವ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಭಾರತದ ಪರವಾಗಿ ಆಲ್‌ರೌಮಡರ್ ಹಾರ್ದಿಕ್ ಪಾಂಡ್ಯರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದು, ಇಂಗ್ಲೆಂಡ್‌ನ ಪ್ರಮುಖ ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್‌ಗೆ ಅಟ್ಟಿದರು. ಹೀಗಾಗಿ ಭಾರತಕ್ಕೆ 260 ರನ್‌ಗಳ ಸುಲಭ ಗುರಿ ನೀಡಿದೆ.
ಮಧ್ಯಮ ಕ್ರಮಾಂಕದಲ್ಲಿ ನಾಯಕ ಜೋಸ್ ಬಟ್ಲರ್ ಹಾಗೂ ಕೆಳ ಕ್ರಮಾಂಕದಲ್ಲಿ ಓವರ್ಟನ್ ಅವರಿಂದ ಉತ್ತಮ ಬ್ಯಾಟಿಂಗ್ ಪ್ರದರ್ಶನದ ಕಾರಣದಿಂದಾಗಿ ಇಂಗ್ಲೆಂಡ್ ತಂಡ 259 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು.
ಇಂಗ್ಲೆಂಡ್ ತಂಡದ ಅಗ್ರ ಕ್ರಮಾಂಕ ಜೇಸನ್ ರಾಯ್ ಹೊರತುಪಡಿಸಿ ಉಳಿದವರು ಮಿಂಚಲು ವಿಫಲರಾದರು. ಪ್ರಮುಖ ಬ್ಯಾಟ್ಸ್‌ಮನ್‌ಗಳು ದೊಡ್ಡ ಮೊತ್ತದ ಕೊಡುಗೆಯನ್ನು ನೀಡಲು ಸಂಪೂರ್ಣವಾಗಿ ವಿಫಲವಾದರು. 74 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ನಾಯಕ ಬಟ್ಲರ್ (60) ಮತ್ತು ಮೋಯಿನ್ ಅಲಿ (34) ಆಸರೆಯಾದರು.

ಇಂಗ್ಲೆಂಡ್‌ಗೆ ಹಾರ್ದಿಕ್ ಪಾಂಡ್ಯ ಆಘಾತ
ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಆಘಾತ ನೀಡಿದ್ದು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ. ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಅವರು ಪ್ರಮುಖ ಆಟಗಾರರು ಕ್ರೀಸ್‌ನಲ್ಲಿ ನೆಲೆಯೂರದಂತೆ ನೋಡಿಕೊಂಡರು. ಅಪಾಯಕಾರಿಯಾಗುವ ಸೂಚನೆ ನೀಡಿದ್ದ ಜೇಸನ್ ರಾಯ್ ಅವರನ್ನು 41 ರನ್‌ಗ ಳಿಸಿದ್ದಾಗ ಔಟ್ ಮಾಡಿದ ಪಾಂಡ್ಯ, ನಂತರ ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ ಮತ್ತು ಲಿಯಾಮ್ ಲಿವಿಂಗ್‌ಸ್ಟೋನ್ ವಿಕೆಟ್ ಕೂಡ ಪಡೆದರು.
ಹಾರ್ದಿಕ್ ಪಾಂಡ್ಯಗೂ ಮೊದಲು ಇಂಗ್ಲೆಂಡ್‌ನ ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿದ್ದು ಮೊಹಮ್ಮದ್ ಸಿರಾಜ್. ಆರಂಭಿಕ ದಾಂಡಿಗ ಜಾನಿ ಬೈರ್‌ಸ್ಟೋ ಮತ್ತು ಜೋ ರೂಟ್ ಅವರನ್ನು ಸೊನ್ನೆಗೆ ಔಟ್ ಮಾಡಿದರು. ಅನಂತರ ಹಾರ್ದಿಕ್ ಪಾಂಡ್ಯ 4 ವಿಕೆಟ್ ಪಡೆದು ಮಿಂಚಿದರೆ, ಸ್ಪಿನ್ನರ್ ಯುಜ್ವೇಂದ್ರ ಚಾಹಲ್ 3 ವಿಕೆಟ್ ಪಡೆದರು.

ಇಂಗ್ಲೆಂಡ್‌ಗೆ ಆಸರೆಯಾಯ್ತು ಬಟ್ಲರ್- ಅಲಿ ಜೊತೆಯಾಟ
ಇನ್ನು ಇಂಗ್ಲೆಂಡ್ ತಂಡ ಈ ಪಂದ್ಯದಲ್ಲಿಯೂ ಕನಿಷ್ಠ ಮೊತ್ತಕ್ಕೆ ಆಲೌಟ್ ಆಗದಂತೆ ಕಾಪಾಡಿದ್ದು ಮಧ್ಯಮ ಕ್ರಮಾಂಕದ ಆಟಗಾರರು. ಅದರಲ್ಲೂ ಮೊಯೀನ್ ಅಲಿ ಹಾಗೂ ನಾಯಕ ಜೋಸ್ ಬಟ್ಲರ್. ಈ ಇಬ್ಬರು ಆಟಗಾರರು ಸೇರಿ ಅರ್ಧ ಶತಕದ ಜೊತೆಯಾಟ ನೀಡುವ ಮೂಲಕ ಇಂಗ್ಲೆಂಡ್ ತಂಡವನ್ನು ರಕ್ಷಿಸಿದರು. ಮೊಯೀನ್ ಅಲಿ 34 ರನ್‌ಗಳ ಕೊಡುಗೆ ನೀಡಿದರೆ ಜೋಸ್ ಬಟ್ಲರ್ 60 ರನ್ ಗಳಿಸಿದರು.

ಭಾರತ ಮತ್ತು ಇಂಗ್ಲೆಂಡ್ ತಂಡದ ಆಡುವ 11ರ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ಇಂಗ್ಲೆಂಡ್: ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾಯಕ/ ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ
ಬೆಂಚ್: ಮ್ಯಾಥ್ಯೂ ಪಾರ್ಕಿನ್ಸನ್, ಸ್ಯಾಮ್ ಕರಾನ್, ಫಿಲಿಪ್ ಸಾಲ್ಟ್, ಹ್ಯಾರಿ ಬ್ರೂಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications