Ind vs Eng 3rd ODI: ಟಾಸ್ ವರದಿ, ಪ್ಲೇಯಿಂಗ್ ಇಲೆವೆನ್ LIVE SCORE

ಮ್ಯಾಂಚೆಸ್ಟರ್‌ನ ಓಲ್ಡ ಟ್ರಾಫರ್ಡ್ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿರುವ ಉಭಯ ತಂಡಗಳು ಅಂತಿಮ ಪಂದ್ಯದಲ್ಲಿ ಗೆಲುವು ಸಾಧಿಸಿ ಸರಣಿ ವಶಕ್ಕೆ ಗುರಿ ನೆಟ್ಟಿವೆ.
ಟೀಂ ಇಂಡಿಯಾಗೆ ಆಘಾತದ ವಿಚಾರವೆಂದ್ರೆ ಏಸ್ ಬೌಲರ್ ಜಸ್ಪ್ರೀತ್ ಬುಮ್ರಾ ಸ್ನಾಯು ಸೆಳೆತದ ಕಾರಣದಿಂದಾಗಿ ಅಂತಿಮ ಪಂದ್ಯವನ್ನ ಮಿಸ್ ಮಾಡಿಕೊಂಡಿದ್ದಾರೆ. ಪರಿಣಾಮ ಬುಮ್ರಾ ಬದಲು ಮೊಹಮ್ಮದ್ ಸಿರಾಜ್‌ಗೆ ಅಂತಿಮ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ನೀಡಲಾಗಿದ್ದು, ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರು ಸ್ಥಾನ ಪಡೆದಿದ್ದಾರೆ.
ಇನ್ನು ಜಾಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡದೆ, ಕಳೆದ ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ತಂಡವನ್ನೇ ಮುಂದುವರಿಸಲಾಗಿದೆ. ಪಂದ್ಯದ ಲೈವ್ ಸ್ಕೋರ್‌ಬೋರ್ಡ್ ಈ ಕೆಳಗೆ ಕಾಣಬಹುದು.

ಮೊದಲ ಪಂದ್ಯದಲ್ಲಿ ಅಬ್ಬರಿಸಿದ್ದ ಟೀಂ ಇಂಡಿಯಾ
ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲಿಂಗ್ ದಾಳಿಗೆ ನೆಲಕಚ್ಚಿದ್ದ ಇಂಗ್ಲೆಂಡ್ ತಂಡವು ಕೇವಲ 110ರನ್‌ಗಳಿಗೆ ಆಲೌಟ್ ಆಗಿತ್ತು. ಬುಮ್ರಾ ಬೊಂಬಾಟ್ ಬೌಲಿಂಗ್(ಆರು ವಿಕೆಟ್)ನಿಂದಾಗಿ ಟೀಂ ಇಂಡಿಯಾ ಸುಲಭವಾಗಿ ಗುರಿ ಬೆನ್ನತ್ತಿ 10 ವಿಕೆಟ್‌ಗಳ ಅಮೋಘ ಗೆಲುವು ದಾಖಲಿಸಿತು.
ಆದ್ರೆ ಎರಡನೇ ಏಕದಿನ ಪಂದ್ಯದಲ್ಲಿ ಜಾಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ಕಂಬ್ಯಾಕ್ ಮಾಡಿತು. ಲಾರ್ಡ್ಸ್‌ನಲ್ಲಿ ನಡೆದ ಪಂದ್ಯದಲ್ಲಿ 246ರನ್ ಕಲೆಹಾಕಿದ್ದ ಇಂಗ್ಲೆಂಡ್ ಭಾರತವನ್ನ 146ರನ್‌ಗಳಿಗೆ ಆಲೌಟ್ ಮಾಡುವ ಮೂಲಕ 100 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಸರಣಿಯು 1-1ರಿಂದ ಸಮಬಲಗೊಂಡಿದ್ದು, ಅಂತಿಮ ಪಂದ್ಯ ನಿರ್ಣಾಯಕವಾಗಿದೆ.
ನಾನು ಕೂಡ ಕೊಹ್ಲಿಯ ಅಸಂಖ್ಯಾತ ಅಭಿಮಾನಿಗಲ್ಲಿ ಒಬ್ಬಾತ, ಆತ ಫಾರ್ಮ್‌ಗೆ ಮರಳುವುದು ಖಂಡಿತ: ಕಮ್ರಾನ್ ಅಕ್ಮಲ್

ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್
ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಯುಜವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ಬೆಂಚ್: ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ
ಮ್ಯಾಂಚೆಸ್ಟರ್‌ನಲ್ಲಿ ಭಾರತ vs ಇಂಗ್ಲೆಂಡ್ ಅಂತಿಮ ಏಕದಿನ: ಈ ಕ್ರೀಡಾಂಗಣದಲ್ಲಿ ಭಾರತಕ್ಕಿದೆ ಕೆಟ್ಟ ರೆಕಾರ್ಡ್!

ಇಂಗ್ಲೆಂಡ್ ತಂಡದ ಪ್ಲೇಯಿಂಗ್ ಇಲೆವೆನ್
ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾಯಕ ಮತ್ತು ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ
ಬೆಂಚ್: ಮ್ಯಾಥ್ಯೂ ಪಾರ್ಕಿನ್ಸನ್, ಸ್ಯಾಮ್ ಕುರಾನ್, ಫಿಲಿಪ್ ಸಾಲ್ಟ್, ಹ್ಯಾರಿ ಬ್ರೂಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications