Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs ENG 3rd T20: ಮತ್ತೆ ಬದಲಾಯಿತು ಪಂದ್ಯದ ಸಮಯ, ಕನ್ಫ್ಯೂಸ್ ಮಾಡ್ಕೋಬೇಡಿ... ಇಲ್ಲಿದೆ ಪೂರ್ಣ ಮಾಹಿತಿ!

ನಾಟಿಂಗ್‌ಹ್ಯಾಮ್‌: ಭಾರತ ಸದ್ಯ ಇಂಗ್ಲೆಂಡ್ ಪ್ರವಾಸ ಕೈಗೊಂಡಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಐದು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದ್ದು, ಸರಣಿಯ ಮೂರನೇ ಟಿ20 ಪಂದ್ಯ ಮಂಗಳವಾರ ನಡೆಯಲಿದೆ. ಈ ಪಂದ್ಯದ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ. ಈಗಾಗಲೇ ಭಾರತ ತಂಡ ಸರಣಿಯಲ್ಲಿ ಹಿನ್ನಡೆ ಅನುಭವಿಸುತ್ತಿದೆ.

ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್‌ ಬ್ಯಾಟಿಂಗ್ ಮಾಡುವಾಗ ಮಳೆ ಸುರಿದು ಪಂದ್ಯಕ್ಕೆ ಅಡಚಣೆ ಉಂಟು ಮಾಡಿ, ಫಲಿತಾಂಶ ರಹಿತವಾಗಿತ್ತು. ಮ್ಯಾಂಚೆಸ್ಟರ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಅಮೋಘ ಪ್ರದರ್ಶನ ನೀಡಿ ಅಬ್ಬರಿಸಿತು. ಟೀಮ್ ಇಂಡಿಯಾ ಟಿ20 ಸರಣಿಯಲ್ಲಿ ಮತ್ತೊಂದು ಸೋಲು ಕಂಡಿತು. ಶ್ರೇಯಸ್ ಅಯರ್ ತಮ್ಮ ನಾಯಕತ್ವದಲ್ಲಿ ಮೊದಲ ಗೆಲುವಿನ ನಗೆ ಬೀರುವ ಕನಸು ಕಮರಿತು.

IND vs ENG

ಐರ್ಲೆಂಡ್‌ ವಿರುದ್ಧ ನಡೆದ 2 ಪಂದ್ಯಗಳ ಟಿ20 ಸರಣಿ ಸೋಲಿನ ಕಹಿಯನ್ನು ಅಳಿಸಲು ಭಾರತಕ್ಕೆ ಇಂಗ್ಲೆಂಡ್‌ನಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ. ಹೀಗಾಗಿ ಮಂಗಳವಾರ ನಡೆಯಲಿರುವ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿ ಪುಟಿದೇಳುವ ಅನಿವಾರ್ಯತೆ ಇದೆ. ಅಂದಾಗ ಮಾತ್ರ ಸರಣಿ ಗೆಲುವಿನ ನಗೆ ಬೀರಲು ಸಾಧ್ಯ.

ವೈಭವ್ ಆಕರ್ಷಣೆ

ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿರುವ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇವರು ಎರಡನೇ ಟಿ20 ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದರು. ಈಗ ಇವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ನಾಟಿಂಗ್‌ಹ್ಯಾಮ್‌ನಲ್ಲಿ ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ನೋಡಲು ಅಭಿಮಾನಿಗಳು ಸಹ ಕಾತುರರಾಗಿದ್ದಾರೆ. ಇವರು ಮ್ಯಾಂಚೆಸ್ಟರ್‌ನಲ್ಲಿ ದೊಡ್ಡ ಇನಿಂಗ್ಸ್‌ ಕಟ್ಟುವಲ್ಲಿ ವಿಫಲರಾಗಿದ್ದರು. ಹೀಗಾಗಿ ಮೂರನೇ ಪಂದ್ಯದಲ್ಲಿ ಆರ್ಭಟಿಸುತ್ತಾರಾ ಎಂಬ ಲೆಕ್ಕಾಚಾರ ಆರಂಭವಾಗಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಮೂರನೇ ಟಿ20 ಪಂದ್ಯ ನಡೆಯುವುದು ಯಾವಾಗ?

ಭಾರತ, ಇಂಗ್ಲೆಂಡ್ ನಡುವಣ ಮೂರನೇ ಪಂದ್ಯ ಮಂಗಳವಾರ ರಾತ್ರಿ 10 ಗಂಟೆಗೆ ನಡೆಯಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಪಂದ್ಯ ನಡೆಯುವುದು ಎಲ್ಲಿ?

ಮೂರನೇ ಟಿ20 ಪಂದ್ಯ ನಾಟಿಂಗ್‌ಹ್ಯಾಮ್‌ನಲ್ಲಿ ನಡೆಯಲಿದೆ

ಭಾರತ ಮತ್ತು ಇಂಗ್ಲೆಂಡ್‌ ನಡುವಣ ಮೂರನೇ ಟಿ20 ಪಂದ್ಯ ನೋಡುವುದು ಹೇಗೆ?

ಈ ಪಂದ್ಯವನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿ ಉಚಿತವಾಗಿ ನೋಡಬಹುದಾಗಿದೆ. ಅಲ್ಲದೆ ಸೋನಿಲೈವ್ ಹಾಗೂ ಜಿಯೋ ಹಾಟ್‌ಸ್ಟಾರ್ ಆಪ್‌ಗಳಲ್ಲೂ ಈ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಹೇಗಿರಲಿದೆ ಭಾರತದ ಪ್ಲೇಯಿಂಗ್ ಇಲೆವೆನ್‌?

ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ಮತ್ತು ಅರಶ್ದೀಪ್ ಸಿಂಗ್.

Story first published: Monday, July 6, 2026, 14:35 [IST]
Other articles published on Jul 6, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+