ಹೆಡಿಂಗ್ಲೆ ಟೆಸ್ಟ್: ಭಾರತದ ವಿರುದ್ಧ ಭಾರೀ ಮುನ್ನಡೆ ಸಾಧಿಸಿದ ಇಂಗ್ಲೆಂಡ್

ಲೀಡ್ಸ್, ಆಗಸ್ಟ್ 26: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ಸಂಪೂರ್ಣ ಅಧಿಪತ್ಯ ಸಾಧಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಆತಿಥೇಯ ತಂಡ ಅಮೋಘ ಪ್ರದರ್ಶನ ನೀಡುವ ಮೂಲಕ ಪ್ರವಾಸಿ ಭಾರತ ತಂಡಕ್ಕೆ ಆಘಾತ ನೀಡಿದೆ. ಎರಡನೇ ದಿನದಾಟದಲ್ಲಿಯೂ ಇಂಗ್ಲೆಂಡ್ ತಂಡ ಸಂಪೂರ್ಣ ಮೇಲುಗೈ ಸಾಧಿಸಿದ್ದು ಪಂದ್ಯದಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಈ ಮೂಲಕ ಲಾರ್ಡ್ಸ್ ಅಂಗಳದ ಸೋಲಿಗೆ ಸೇಡು ತೀರಿಸಲು ಆತಿಥೇಯ ಇಂಗ್ಲೆಂಡ್ ಸಜ್ಜಾಗಿದೆ.

ಮೊದಲ ದಿನ ಟೀಮ್ ಇಂಡಿಯಾವನ್ನು ಕೇವಲ 78 ರನ್‌ಗಳಿಗೆ ಆಲೌಟ್ ಮಾಡಿದ ನಂತರ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ಮೊದಲ ದಿನ ಯಾವುದೇ ವಿಕೆಟ್ ಕಳೆದುಕೊಳ್ಳದೆ 120 ರನ್‌ಗಳನ್ನು ಗಳಿಸಿತ್ತು. ಇಂದು ಬ್ಯಾಟಿಂಗ್ ಮುಂದುವರಿಸಿದ ಇಂಗ್ಲೆಂಡ್ ಆರಂಭಿಕ ಜೋಡಿ ಮೊದಲ ವಿಕೆಟ್‌ಗೆ 135 ರನ್‌ಗಳನ್ನು ಕಲೆ ಹಾಕಿ ಬೇರ್ಪಟ್ಟಿತ್ತು. ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರರಿಬ್ಬರೂ ಅರ್ಧ ಶತಕವನ್ನು ಸಿಡಿಸಿ ಉತ್ತಮ ಆರಂಭವನ್ನು ಒದಗಿಸಿದರು. ಈ ಮೂಲಕ ಭಾರತದ ವಿರುದ್ಧ ಸಂಪೂರ್ಣ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

ಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್: ತಾನು ಮಾಡಿದ ತಪ್ಪಿನ ಕುರಿತು ಮಾತನಾಡಿದ ರಿಷಭ್ ಪಂತ್ಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್: ತಾನು ಮಾಡಿದ ತಪ್ಪಿನ ಕುರಿತು ಮಾತನಾಡಿದ ರಿಷಭ್ ಪಂತ್

ಇಂಗ್ಲೆಂಡ್ ಅಗ್ರ ಕ್ರಮಾಂಕದ ನಾಲ್ವರು 50+

ಇಂಗ್ಲೆಂಡ್ ಅಗ್ರ ಕ್ರಮಾಂಕದ ನಾಲ್ವರು 50+

ಹೆಡಿಂಗ್ಲೆ ಮೈದಾನದಲ್ಲಿ ಇಂಗ್ಲೆಂಡ್ ದಾಂಡಿಗರು ಅಕ್ಷರಶಃ ಭಾರತದ ಬೌಲಿಂಗ್ ಪಡೆಯ ಮೇಲೆ ಸವಾರಿ ಮಾಡಿದ್ದಾರೆ. ಅದರಲ್ಲೂ ಸಾಕಷ್ಟು ಟೀಕೆಗೆ ಗುರಿಯಾಗಿ ಅಗ್ರ ಕ್ರಮಾಂಕದ ಆಟಗಾರರು ಈ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಮೊದಲ ನಾಲ್ವರು ಬ್ಯಾಟ್ಸ್‌ಮನ್‌ಗಳು ಈ ಪಂದ್ಯದಲ್ಲಿ 50+ ರನ್‌ಗಳ ಸಾಧನೆ ಮಾಡಿದ್ದಾರೆ. ಆರಂಭಿಕ ಆಟಗಾರ ರೋರಿ ಬರ್ನ್ಸ್ 61 ರನ್‌ಗಳಿಸಿದರೆ ಹಸೀಬ್ ಹಮೀದ್ 68 ರನ್‌ಗಳಿಸಿದರು. ಡೇವಿಡ್ ಮಲನ್ 70 ಹಾಗೂ ನಾಯಕ ಜೋ ರೂಟ್ 121 ರನ್‌ಗಳ ಕೊಡುಗೆಯನ್ನು ನೀಡಿದ್ದಾರೆ.

ದಾಖಲೆಯ ಶತಕ ಸಿಡಿಸದ ಜೋ ರೂಟ್

ದಾಖಲೆಯ ಶತಕ ಸಿಡಿಸದ ಜೋ ರೂಟ್

ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಅವರ ಅದ್ಭುತ ಫಾರ್ಮ್ ಈ ಪಂದ್ಯದಲ್ಲಿಯೂ ಮುಂದುವರಿದಿದೆ. ಈ ಸರಣಿಯ ಮೂರನೇ ಪಂದ್ಯದಲ್ಲಿಯೂ ಜೋ ರೂಟ್ ಶತಕ ಸಿಡಿಸಿದ್ದು ಈ ಸರಣಿಯಲ್ಲಿ 3ನೇ ಶತಕ ಸಿಡಿಸಿದಂತಾಗಿದೆ. ಈ ಶತಕದ ಮೂಲಕ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ಶತಕ ಸಿಡಿಸಿ ಆಟಗಾರ ಎನಿಸಿದ್ದಾರೆ ಜೋ ರೂಟ್. ಈ ಸಾಧನೆ ಮಾಡಲು ಇಂಗ್ಲೆಂಡ್ ನಾಯಕ ದಿಗ್ಗಜ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಹಾಗೂ ಆಲೆಸ್ಟರ್ ಕುಕ್ ದಾಖಲೆಯನ್ನು ಮುರಿದಿದ್ದಾರೆ. ಇನ್ನು ಮತ್ತೊಂದು ಪ್ರಮುಖ ದಾಖಲೆಯನ್ನು ಕೂಡ ರೂಟ್ ತಮ್ಮ ಹೆಸರಿಗೆ ಬರೆದಿದ್ದಾರೆ. ಒಂದು ವರ್ಷದಲ್ಲಿ ಎರಡು ಬಾರಿಗೆ ಸತತ ಮೂರು ಪಂದ್ಯಗಳಲ್ಲಿ ಶತಕ ಸಿಡಿಸಿದ ಏಕೈಕ ಆಟಗಾರ ಎನಿಸಿದ್ದಾರೆ ಜೋ ರೂಟ್.

ಭಾರೀ ಮುನ್ನಡೆ ಸಾಧಿಸಿದ ಇಂಗ್ಲೆಂಡ್

ಭಾರೀ ಮುನ್ನಡೆ ಸಾಧಿಸಿದ ಇಂಗ್ಲೆಂಡ್

ಇನ್ನು ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭಾರತದ ವಿರುದ್ಧ ಈಗಾಗಲೇ ಭಾರೀ ಅಂತರದ ಮುನ್ನಡೆಯನ್ನು ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡವನ್ನು ಕೇವಲ 78 ರನ್‌ಗಳಿಗೆ ಆಲೌಟ್ ಮಾಡಿರುವ ಇಂಗ್ಲೆಂಡ್ ತನ್ನ ಮೊದಲ ಸರದಿಯಲ್ಲಿ ಈಗಾಗಲೇ 423 ರನ್‌ಗಳನ್ನು ಗಳಿಸಿದ್ದು 8 ವಿಕೆಟ್ ಕಳೆದುಕೊಂಡಿದೆ. ಈ ಮೂಲಕ ಮೂರನೇ ದಿನಕ್ಕೆ ಆಟವನ್ನು ಕಾಯ್ದಿರಿಸಿದೆ. ಸದ್ಯ ಇಂಗ್ಲೆಂಡ್ ತಂಡ ಭಾರತದ ವಿರುದ್ಧ 345 ರನ್‌ಗಳ ಅಂತರದ ದೊಡ್ಡ ಮುನ್ನಡೆಯನ್ನು ಸಾಧಿಸಿದೆ.

ಭಾರತದ ಮುಂದೆ ಮೂರು ದಿನಗಳ ಅಗ್ನಿ ಪರೀಕ್ಷೆ

ಭಾರತದ ಮುಂದೆ ಮೂರು ದಿನಗಳ ಅಗ್ನಿ ಪರೀಕ್ಷೆ

ಇನ್ನು ಭಾರತ ತಂಡಕ್ಕೆ ಸದ್ಯ ಅಕ್ಷರಶಃ ಅಗ್ನಿ ಪರೀಕ್ಷೆ ಎದುರಾಗಿದೆ. ಈ ಪಂದ್ಯದಲ್ಲಿ ಎರಡು ದಿನಗಳ ಆಟ ಮಾತ್ರವೇ ಅಂತ್ಯವಾಗಿದ್ದು ಪಂದ್ಯದ ಮೇಲೆ ಇಂಗ್ಲೆಂಡ್ ತನ್ನ ಅಧಿಪತ್ಯವನ್ನು ಹೆಚ್ಚಿಸುತ್ತಲೇ ಸಾಗುತ್ತಿದೆ. ಇನ್ನೂ ಮೂರು ದಿನಗಳ ಆಟ ಬಾಕಿಯಿದ್ದು ಭಾರತ ತಂಡ ಈ ಪಂದ್ಯವನ್ನು ಉಳಿಸಿಕೊಳ್ಳಲು ನಿರೀಕ್ಷೆಗೂ ಮೀರಿದ ಪ್ರದರ್ಶನವನ್ನು ನೀಡಬೇಕಾಗುತ್ತದೆ. ಈಗಾಗಲೇ ಮೊದಲ ಇನ್ನಿಂಗ್ಸ್‌ನಲ್ಲಿ 345 ರನ್‌ಗಳ ಮುನ್ನಡೆ ಸಾಧಿಸಿರುವ ಇಂಗ್ಲೆಂಡ್ ಮತ್ತಷ್ಟು ರನ್‌ಗಳನ್ನು ಪೇರಿಸುಇವ ಇರಾದೆಯಲ್ಲಿದೆ. ಈ ಮೂಲಕ ಭಾರತ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸುವ ಯೋಜನೆಯಲ್ಲಿದೆ ಆತಿಥೆಯ ತಂಡ. ಲಾರ್ಡ್ಸ್ ಅಂಗಳದಲ್ಲಿನ ಸೋಲಿಗೆ ಇನ್ನಿಂಗ್ಸ್ ಅಂತರದಿಂದ ಗೆದ್ದು ಪ್ರತಿಕಾರ ತೀರಿಸಲು ಜೋ ರೂಟ್ ಬಳಗ ಸಿದ್ಧವಾದಂತೆ ಭಾಸವಾಗುತ್ತಿದೆ.

Rishab Pant ಅವರಿಗೆ umpire ತಮ್ಮ ಶೈಲಿ ಬದಲಿಸಲು ಹೇಳಿದ್ದೇಕೆ | Oneindia Kannada
ಭಾರತ ಹಾಗೂ ಇಂಗ್ಲೆಂಡ್ ಆಡುವ ಬಳಗ

ಭಾರತ ಹಾಗೂ ಇಂಗ್ಲೆಂಡ್ ಆಡುವ ಬಳಗ

ಟೀಮ್ ಇಂಡಿಯಾ ಆಡುವ ಬಳಗ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್

ಇಂಗ್ಲೆಂಡ್ ಆಡುವ ಬಳಗ: ಜೋ ರೂಟ್ (ನಾಯಕ), ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜಾನಿ ಬೈರ್‌ಸ್ಟೊವ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಕ್ರೇಗ್ ಓವರ್‌ಟನ್, ಜೇಮ್ಸ್ ಆಂಡರ್ಸನ್

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Thursday, August 26, 2021, 23:48 [IST]
Other articles published on Aug 26, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X