Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs ENG 4th T20: ಗೆಲುವೊಂದೆ ಶ್ರೇಯಸ್‌ ಪಡೆಯ ಟಾರ್ಗೆಟ್; ಪಂದ್ಯ ನಡೆಯುವ ಸಮಯ, ನೇರಪ್ರಸಾರದ ಮಾಹಿತಿ

ಭಾರತ ಹಾಗೂ ಇಂಗ್ಲೆಂಡ್‌ ನಡುವಣ ನಾಲ್ಕನೇ ಟಿ20 ಪಂದ್ಯ ಗುರುವಾರ ನಡೆಯಲಿದೆ. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಇಂಗ್ಲೆಂಡ್ 2-0 ಮುನ್ನಡೆ ಸಾಧಿಸಿದೆ. ಈ ಸರಣಿಯನ್ನು ಜೀವಂತವಾಗಿರಿಸಲು ಟೀಮ್ ಇಂಡಿಯಾ ತನ್ನ ಶತಪ್ರಯತ್ನವನ್ನು ಮಾಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದ ಬ್ಯಾಟರ್‌ಗಳ ಮೇಲೆ ಒತ್ತಡವಿದೆ.

ಈ ಸರಣಿಯ ಮೊದಲ ಪಂದ್ಯ ಫಲಿತಾಂಶ ರಹಿತವಾಗಿತ್ತು. ಇಂಗ್ಲೆಂಡ್ ಎರಡನೇ ಟಿ20 ಪಂದ್ಯದಲ್ಲಿ 4 ವಿಕೆಟ್‌ ಜಯ ಸಾಧಿಸಿದರೆ, ಮೂರನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್‌ 125 ರನ್‌ ಭರ್ಜರಿ ಜಯ ಸಾಧಿಸಿದೆ. ಭಾರತ ಮುಂದಿನ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿ, ಸರಣಿ ಸೋಲಿನ ಕಹಿಯಿಂದ ಪಾರಾಗುವ ಪ್ಲ್ಯಾನ್ ಮಾಡಿಕೊಂಡಿದೆ. ಭಾರತದ ಜಯದ ಆಸೆ ಫಲಿಸಬೇಕಾದಲ್ಲಿ ತಂಡ ಸ್ಥಿರ ಆಟದ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ.

IND vs ENG 4th T20

ಭಾರತದ ಪರ ಆರಂಭಿಕರಾಗಿ ಕಣಕ್ಕೆ ಇಳಿಯುವ ವೈಭವ್ ಸೂರ್ಯವಂಶಿ ಹಾಗೂ ಅಭಿಷೇಕ್‌ ಶರ್ಮಾ ಸ್ಥಿರ ಬ್ಯಾಟಿಂಗ್ ನಡೆಸುವ ಅನಿವಾರ್ಯತೆ ಇದೆ. ಅಲ್ಲದೆ ದೊಡ್ಡ ಇನಿಂಗ್ಸ್‌ ಕಟ್ಟಿ ತಂಡಕ್ಕೆ ಅನಿವಾರ್ಯವಾಗಬೇಕಿದೆ. ಮಧ್ಯಮ ಕ್ರಮಾಂಕದಲ್ಲಿ ಇಶಾನ್‌ ಕಿಶನ್‌, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ ಸಮಯೋಚಿತ ಬ್ಯಾಟಿಂಗ್ ನಡೆಸುವ ಅನಿವಾರ್ಯತೆ ಇದೆ. ಇನ್ನು ಆಲ್‌ರೌಂಡರ್ ರೂಪದಲ್ಲಿ ಕಾಣಿಸಿಕೊಳ್ಳುವ ಅಕ್ಷರ್‌ ಪಟೇಲ್‌, ಶಿವಂ ದುಬೆ ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಆಡಬೇಕಿದೆ.

ಒತ್ತಡದಲ್ಲಿ ಟೀಮ್ ಇಂಡಿಯಾ ಬೌಲರ್‌ಗಳು

ವೇಗದ ಬೌಲಿಂಗ್ ವಿಭಾಗದಲ್ಲಿ ಅನುಭವಿ ಅರ್ಶದೀಪ್‌ ಸಿಂಗ್‌, ಹರ್ಷಿತ್ ರಾಣಾ, ಪ್ರಿನ್ಸ್‌ ಯಾದವ್ ಬಿಗುವಿನ ದಾಳಿ ನಡೆಸಿ ತಂಡಕ್ಕೆ ಆಧಾರವಾಗಬೇಕಿದೆ. ಇನ್ನು ಸ್ಪಿನ್ ಬೌಲರ್ ರೂಪದಲ್ಲಿ ಕಾಣಿಸಿಕೊಳ್ಳುವ ವರುಣ್‌ ಚಕ್ರವತ್ತಿ ತಮ್ಮ ಖದರ್‌ಗೆ ತಕ್ಕ ಬೌಲಿಂಗ್ ಪ್ರದರ್ಶಿಸಿದರೆ ಗೆಲುವಿನ ಕನಸು ನನಸಾಗುತ್ತದೆ. ಟೀಮ್ ಇಂಡಿಯಾದ ಬೌಲರ್‌ಗಳು ತಮ್ಮ ಅನುಭವ ಬಳಸಿಕೊಂಡು ಬೌಲಿಂಗ್ ನಡೆಸಿ ಇಂಗ್ಲೆಂಡ್‌ ಬ್ಯಾಟರ್‌ಗಳನ್ನು ಕಾಡಬೇಕಿದೆ.

ಹೇಗಿರಲಿದೆ ಪಿಚ್‌?

ಬ್ರಿಸ್ಟಲ್ ಮೈದಾನವು ಕೊಂಚ ವಿಭಿನ್ನವಾದ ಅಳತೆಗಳನ್ನು ಹೊಂದಿವೆ. ಇಲ್ಲಿ ನೇರ ಬೌಂಡರಿಗಳು ಚಿಕ್ಕದಾಗಿದ್ದರೂ, ಕೆಲವು ಮೂಲೆಗಳು ಸಾಕಷ್ಟು ದೊಡ್ಡದಾಗಿವೆ. ಇದು ಸಾಮಾನ್ಯವಾಗಿ ಟಿ20 ಪಂದ್ಯಗಳಿಗೆ ಹೆಚ್ಚು ರನ್ ಗಳಿಸುವ ಮೈದಾನ. ಈ ಮೈದಾನದಲ್ಲಿ ಬ್ಯಾಟರ್‌ಗಳ ಅಬ್ಬರವನ್ನು ನೋಡಬಹುದಾಗಿದೆ.

ಇಂಗ್ಲೆಂಡ್‌ ಸಂಭಾವ್ಯ ತಂಡ ಹೇಗಿರಲಿದೆ?

ಫಿಲ್ ಸಾಲ್ಟ್, ಜೋಸ್ ಬಟ್ಲರ್, ಹ್ಯಾರಿ ಬ್ರೂಕ್, ಜೇಕಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಲಿಯಾಮ್ ಡಾವ್ಸನ್, ಆದಿಲ್ ರಶೀದ್, ಜೋಫ್ರಾ ಆರ್ಚರ್, ಜೋಶ್ ಟಂಗ್.

ಟೀಮ್ ಇಂಡಿಯಾದಲ್ಲಿ ಯಾರಿಗೆಲ್ಲಾ ಸಿಗುತ್ತೆ ಚಾನ್ಸ್‌?

ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ, ಶಿವಂ ದುಬೆ/ಸೂರ್ಯಾಂಶ್ ಶೆಡ್ಗೆ, ಅಕ್ಷರ್ ಪಟೇಲ್/ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್, ಪ್ರಿನ್ಸ್ ಯಾದವ್, ವರುಣ್ ಚಕ್ರವರ್ತಿ.

IND vs ENG 4th T20

ಪಂದ್ಯದ ನೇರ ಪ್ರಸಾರವನ್ನು ನೋಡುವುದ ಎಲ್ಲಿ?

ಭಾರತ, ಇಂಗ್ಲೆಂಡ್‌ ನಡುವಣ ನಾಲ್ಕನೇ ಟಿ20 ಪಂದ್ಯವನ್ನು ಸೋನಿ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋ ಹಾಟ್‌ ಸ್ಟಾರ್‌ನಲ್ಲಿ ನೋಡಬಹುದು.

ಭಾರತ, ಇಂಗ್ಲೆಂಡ್ ನಡುವಣ ನಾಲ್ಕನೇ ಟಿ20 ಪಂದ್ಯ ನಡೆಯುವುದು ಯಾವಾಗ?

ಬ್ರಿಸ್ಟಲ್‌ನಲ್ಲಿ ನಡೆಯಲಿರುವ ಟಿ20 ಪಂದ್ಯ ರಾತ್ರಿ 10ಕ್ಕೆ ಆರಂಭವಾಗಲಿದೆ. ಅಲ್ಲದೆ ಪಂದ್ಯ ಆರಂಭಕ್ಕೂ ಅರ್ಧಗಂಟೆ ಮುಂಚಿತವಾಗಿ ಟಾಸ್‌ ನಡೆಯಲಿದೆ.

Story first published: Wednesday, July 8, 2026, 21:57 [IST]
Other articles published on Jul 8, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+