ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: 4ನೇ ಟೆಸ್ಟ್‌ಗೆ ಟೀಮ್ ಇಂಡಿಯಾ ತಂಡಕ್ಕೆ ಪ್ರಸಿದ್ಧ್ ಕೃಷ್ಣ ಸೇರ್ಪಡೆ

Ind vs Eng 4th Test: Prasidh Krishna has been added to Indias squad ahead of Oval test

ಲಂಡನ್, ಸೆಪ್ಟೆಂಬರ್ 1: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಗುರುವಾರದಿಂದ ಆರಂಭವಾಗಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಸ್ಕ್ವಾಡ್‌ನಲ್ಲಿ ಪ್ರಮುಖ ಸೇರ್ಪಡೆ ಆಗಿದೆ. ಮೀಸಲು ಆಟಗಾರನಾಗಿ ಪ್ರವಾಸಕೈಗೊಂಡಿರುವ ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾ ಸ್ಕ್ವಾಡ್‌ಗೆ ಸೇರ್ಪಡೆಯಾಗಿದ್ದಾರೆ. ಹೀಗಾಗಿ ನಾಲ್ಕನೇ ಟೆಸ್ಟ್‌ನ ಆಡುವ ಬಳಗದ ಆಯ್ಕೆಗೆ ಪ್ರಸಿದ್ಧ್ ಕೃಷ್ಣ ಕೂಡ ಲಭ್ಯವಾಗಲಿದ್ದಾರೆ.

ಇಂಗ್ಲೆಂಡ್‌ಗೆ ಪ್ರವಾಸ ಕೂಗೊಂಡಿರುವ ಟೀಮ್ ಇಂಡಿಯಾ ತಂಡದ ಜೊತೆಗೆ ಕರ್ನಾಟಕದ ವೇಗಿ ಪ್ರಸಿದ್ಧ ಕೃಷ್ಣ ಮೀಸಲು ಆಟಗಾರನಾಗಿ ಪ್ರವಾಸ ಕೈಗೊಂಡಿದ್ದರು. ಈ ಪ್ರವಾಸದ ಆರಂಭದಿಮದಲೂ ತಂಡದ ಜೊತೆಗೆ ಪ್ರವಾಸದಲ್ಲಿರುವ ಪ್ರಸಿದ್ಧ್‌ಗೆ ಈಗ ಸ್ಕ್ವಾಡ್‌ನ ಒಳಗೆ ಸೇರ್ಪಡೆಯಾಗುವ ಅವಕಾಶ ದೊರೆತಿದೆ. ಹೀಗಾಗಿ ಸೆಪ್ಟೆಂಬರ್ 2ರಿಂದ ಓವಲ್‌ನಲ್ಲಿ ಆರಂಭವಾಗಲಿರುವ ಟೆಸ್ಟ್‌ನಲ್ಲಿ ಪ್ರಸಿದ್ಧ್‌ಗೆ ಅವಕಾಶ ದೊರೆಯಲಿದೆಯಾ ಎಂಬುದು ಈಗ ಕುತೂಹಲ ಮೂಡಿಸಿದೆ.

ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಬಹುದಾದ ಟೀಮ್ ಇಂಡಿಯಾದ 3 ಆಟಗಾರರುನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಬಹುದಾದ ಟೀಮ್ ಇಂಡಿಯಾದ 3 ಆಟಗಾರರು

ಈ ಸೇರ್ಪಡೆಯ ಬಗ್ಗೆ ಬಿಸಿಸಿಐ ಅಧಿಕೃತ ಪ್ರಕಟಣೆಯನ್ನು ಕೂಡ ಹೊಸಡಿಸಿದೆ. "ತಂಡದ ಮ್ಯಾನೇಜ್‌ಮೆಂಟ್‌ನ ಮನವಿಯ ಹಿನ್ನೆಲೆಯಲ್ಲಿ ಆಲ್‌ ಇಂಡಿಯಾ ಸೀನಿಯರ್ ಸೆಲೆಕ್ಷನ್ ಕಮಿಟಿ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರನ್ನು ನಾಲ್ಕನೇ ಟೆಸ್ಟ್‌ಗೆ ತಂಡಕ್ಕೆ ಸೇರ್ಪಡೆಗೊಳಿಸಿದೆ" ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಸಿದ್ಧ್ ಕೃಷ್ಣ ಟೆಸ್ಟ್‌ ಕ್ರಿಕೆಟ್‌ನಲ್ಲಿ ಇನ್ನಷ್ಟೇ ಟೀಮ್ ಇಂಡಿಯಾ ತಂಡಕ್ಕೆ ಪದಾರ್ಪಣೆ ಮಾಡಬೇಕಿದೆ. ಆದರೆ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಿದ್ದಾರೆ. ಇದೇ ತಿಂಗಳ ಮಾರ್ಚ್‌ನಲ್ಲಿ ಭಾರತದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ ಪ್ರಸಿದ್ಧ್ ಕೃಷ್ಣ. ಒಟ್ಟು ಮೂರು ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ ಅನುಭವ ಹೊಂದಿದ್ದಾರೆ ಕರ್ನಾಟಕದ ಈ ಯುವ ವೇಗದ ಬೌಲರ್.

ಪ್ರಸಿದ್ಧ್ ಕೃಷ್ಣ ಸೇರ್ಪಡೆಯೊಂದಿಗೆ ಈ ಸರಣಿಯಲ್ಲಿ ಭಾರತದ ವೇಗದ ಬೌಲಿಂಗ್ ವಿಭಾಗದ ಸದಸ್ಯರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಉಮೇಶ್ ಯಾದವ್, ಶಾರ್ದೂಲ್ ಠಾಕೂರ್ ಮತ್ತು ಮೊಹಮ್ಮದ್ ಸಿರಾಜ್ ಈಗಾಗಲೇ ತಂಡದಲ್ಲಿರುವ ಇತರ ವೇಗದ ಬೌಲರ್‌ಗಳಾಗಿದ್ದಾರೆ.

ನಾಲ್ಕನೇ ಟೆಸ್ಟ್ ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪ ನಾಯಕ), ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ , ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ವೃದ್ಧಿಮಾನ್ ಸಾಹಾ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ

ಭಾರತದ ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್‌), ರವೀಂದ್ರ ಜಡೇಜಾ / ಆರ್ ಅಶ್ವಿನ್, ಇಶಾಂತ್ ಶರ್ಮಾ/ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ

ಟೀಮ್ ಇಂಡಿಯಾವನ್ನ ಹೇಗೆ ಕಟ್ಟಿಹಾಕ್ಬೇಕು ಅಂತ ನಮ್ಗೆ ಚನ್ನಾಗಿ ಗೊತ್ತು | Oneindia Kannada

ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ: ಹಸೀಬ್ ಹಮೀದ್, ರೋರಿ ಬರ್ನ್ಸ್, ಡೇವಿಡ್ ಮಲನ್, ಜೋ ರೂಟ್ (ನಾಯಕ), ಜಾನಿ ಬೈರ್‌ಸ್ಟೊವ್ (ವಿಕೆಟ್ ಕೀಪರ್‌), ಒಲ್ಲಿ ಪೋಪ್ / ಡೇನಿಯಲ್ ಲಾರೆನ್ಸ್, ಮೊಯೀನ್ ಅಲಿ, ಒಲ್ಲಿ ರಾಬಿನ್ಸನ್, ಕ್ರಿಸ್ ವೋಕ್ಸ್/ಸ್ಯಾಮ್ ಕರನ್, ಕ್ರೇಗ್ ಓವರ್‌ಟನ್ ಮತ್ತು ಮಾರ್ಕ್ ವುಡ್

Story first published: Wednesday, September 1, 2021, 17:46 [IST]
Other articles published on Sep 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X