ಭಾರತ vs ಇಂಗ್ಲೆಂಡ್ ನಾಲ್ಕನೇ ಟೆಸ್ಟ್: ಮೈಲಿಗಲ್ಲು ನಿರ್ಮಿಸಿದ ರೋಹಿತ್ ಶರ್ಮಾ ಮತ್ತು ಉಮೇಶ್ ಯಾದವ್

ಸದ್ಯ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಲಂಡನ್ ನಗರದ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆದ ಟೀಮ್ ಇಂಡಿಯಾ ವಿರಾಟ್ ಕೊಹ್ಲಿ ಮತ್ತು ಶಾರ್ದೂಲ್ ಠಾಕೂರ್ ಜವಾಬ್ದಾರಿಯುತ ಅರ್ಧಶತಕಗಳ ನೆರವಿನಿಂದ 191 ರನ್ ಕಲೆಹಾಕಿತು. ನಂತರ ಮೊದಲನೇ ಇನ್ನಿಂಗ್ಸ್‌ನಲ್ಲಿ ತನ್ನ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ 290 ರನ್ ಬಾರಿಸುವುದರ ಮೂಲಕ ಮೊದಲನೇ ಇನ್ನಿಂಗ್ಸ್‌ನಲ್ಲಿ 99 ರನ್‌ಗಳ ಮುನ್ನಡೆಯನ್ನು ಸಾಧಿಸಿತು.
ಇತ್ತ ಎರಡನೇ ದಿನವೇ ಎರಡನೇ ಇನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೇ 43 ರನ್ ಗಳಿಸಿದ್ದು ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಅಜೇಯ 20 ರನ್ ಹಾಗೂ ಕೆ ಎಲ್ ರಾಹುಲ್ ಅಜೇಯ 22 ರನ್ ಬಾರಿಸಿದ್ದು ಮೂರನೇ ದಿನದಾಟವನ್ನು ಆರಂಭಿಸಬೇಕಿದೆ.
ಮೊದಲನೇ ದಿನದಾಟದಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 53 ರನ್ ಗಳಿಸಿ 138 ರನ್ ಗಳ ಹಿನ್ನಡೆಯನ್ನು ಅನುಭವಿಸಿದ್ದ ಇಂಗ್ಲೆಂಡ್ ಎರಡನೇ ದಿನದಾಟದ ಆರಂಭದಲ್ಲಿಯೇ ಮತ್ತೆರಡು ವಿಕೆಟ್‍ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಎರಡನೇ ದಿನದಾಟ ಆರಂಭವಾದ ಕೆಲವೇ ನಿಮಿಷಗಳಲ್ಲಿ ತನ್ನೆರಡು ವಿಕೆಟ್ ಕಳೆದುಕೊಂಡ ಇಂಗ್ಲೆಂಡ್ 5 ವಿಕೆಟ್ ನಷ್ಟಕ್ಕೆ 62 ರನ್ ಗಳಿಸಿ ಸಂಕಷ್ಟದಲ್ಲಿತ್ತು. ಈ ಸಂದರ್ಭದಲ್ಲಿ ಆರನೇ ವಿಕೆಟ್‍ಗೆ ಜೊತೆಯಾದ ಜಾನಿ ಬೈರ್ ಸ್ಟೋ ಮತ್ತು ಒಲ್ಲಿ ಪೋಪ್ 89 ರನ್‌ಗಳ ಜತೆಯಾಟವನ್ನಾಡಿ ಇಂಗ್ಲೆಂಡ್ ತಂಡಕ್ಕೆ ಆಸರೆಯಾದರು. ಜಾನಿ ಬೈರ್ ಸ್ಟೋ 37 ರನ್‌ಗಳಿಗೆ ವಿಕೆಟ್ ಒಪ್ಪಿಸಿದರೆ ಒಲ್ಲಿ ಪೋಪ್ 81 ರನ್, ಕ್ರಿಸ್ ವೋಕ್ಸ್ 50 ರನ್ ಗಳಿಸಿ ಇಂಗ್ಲೆಂಡ್ 290 ರನ್ ಮುಟ್ಟುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಈ ಮೂಲಕ ಇಂಗ್ಲೆಂಡ್ ಮೊದಲನೇ ಇನ್ನಿಂಗ್ಸ್‌ನಲ್ಲಿ 99 ರನ್‌ಗಳ ಮುನ್ನಡೆಯನ್ನು ಸಾಧಿಸಿತು.
ನಂತರ ಎರಡನೇ ದಿನದಲ್ಲಿಯೇ ತನ್ನ ದ್ವಿತೀಯ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೇ 43 ರನ್ ಗಳಿಸಿ 56 ರನ್‌ಗಳ ಹಿನ್ನಡೆಯನ್ನು ಅನುಭವಿಸಿದೆ.
ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂದು ಎರಡೂ ತಂಡಗಳ ವಿವಿಧ ಆಟಗಾರರು ಕೆಲ ಮೈಲಿಗಲ್ಲುಗಳನ್ನು ಮುಟ್ಟಿದ್ದು ಅವುಗಳ ವಿವರ ಈ ಕೆಳಕಂಡಂತಿದೆ ಓದಿ..

150 ವಿಕೆಟ್ ಮೈಲಿಗಲ್ಲನ್ನು ನೆಟ್ಟ ಉಮೇಶ್ ಯಾದವ್
ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂದು ಭಾರತ ತಂಡದ ವೇಗಿ ಉಮೇಶ್ ಯಾದವ್ 150 ಟೆಸ್ಟ್ ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದಾರೆ. 49 ಟೆಸ್ಟ್ ಪಂದ್ಯಗಳನ್ನಾಡಿರುವ ಉಮೇಶ್ ಯಾದವ್ 150 ವಿಕೆಟ್‍ಗಳನ್ನು ಪಡೆದುಕೊಂಡಿದ್ದಾರೆ. ಉಮೇಶ್ ಯಾದವ್ ಅವರನ್ನು ಹೊರತುಪಡಿಸಿದರೆ ಮೊಹಮ್ಮದ್ ಶಮಿ 42 ಟೆಸ್ಟ್ ಪಂದ್ಯಗಳಲ್ಲಿ 150 ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದರು ಹಾಗೂ ಜಾವಗಲ್ ಶ್ರೀನಾಥ್ 41 ಟೆಸ್ಟ್ ಪಂದ್ಯಗಳಲ್ಲಿ 150 ವಿಕೆಟ್ ಪಡೆದ ಸಾಧನೆಯನ್ನು ನಿರ್ಮಿಸಿದ್ದರು.

15,000 ರನ್ ಗಡಿ ದಾಟಿದ ರೋಹಿತ್ ಶರ್ಮಾ
ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂದು ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮ 15,000 ಅಂತರರಾಷ್ಟ್ರೀಯ ರನ್ ಪೂರೈಸಿದ ಸಾಧನೆಯನ್ನು ಮಾಡಿದ್ದಾರೆ. 397 ಇನ್ನಿಂಗ್ಸ್‌ನಲ್ಲಿ 15,000 ರನ್ ಪೂರೈಸಿದ ರೋಹಿತ್ ಶರ್ಮಾ 15,000 ಅಂತರರಾಷ್ಟ್ರೀಯ ರನ್ ಗಳಿಸಿರುವ ಭಾರತೀಯ ಆಟಗಾರರಲ್ಲಿ ಎಂಟನೇ ಆಟಗಾರನಾಗಿದ್ದಾರೆ.

ಭಾರತದ ವಿರುದ್ಧ ಎರಡನೇ ಬಾರಿ 50+ ಬಾರಿಸಿದ ಕ್ರಿಸ್ ವೋಕ್ಸ್
ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂದು ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡದ ಆಟಗಾರ ಕ್ರಿಸ್ ವೋಕ್ಸ್ 60 ಎಸೆತಗಳಲ್ಲಿ 50 ರನ್ ಬಾರಿಸುವುದರ ಮೂಲಕ ಭಾರತದ ವಿರುದ್ಧ ಎರಡನೇ ಬಾರಿಗೆ 50+ ರನ್ ಬಾರಿಸಿದ ಮೈಲಿಗಲ್ಲನ್ನು ಸೃಷ್ಟಿಸಿದ್ದಾರೆ. 2017ರ ಸಮಯದಲ್ಲಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಭಾರತದ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಕ್ರಿಸ್ ವೋಕ್ಸ್ 137 ರನ್ ಬಾರಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications