IND vs ENG 5Th T20: ಸಂಘಟಿತ ಆಟವೊಂದೇ ಗೆಲುವಿನ ಗುರಿ, ಪಂದ್ಯದ ಸಮಯ, ನೇರಪ್ರಸರಾದ ಮಾಹಿತಿ
ಸೌತಾಂಪ್ಟನ್: ಇಂಗ್ಲೆಂಡ್ ಪ್ರವಾಸದಲ್ಲಿ ನಡೆಯಲಿರುವ ಐದನೇ ಟಿ20 ಪಂದ್ಯದಲ್ಲಿ ಭಾರತ ಕಣಕ್ಕೆ ಇಳಿಯಲಿದೆ. ಈಗಾಗಲೇ ಟಿ20 ಸರಣಿಯನ್ನು ಸೋತಿರುವ ಭಾರತ ಕೊನೆಯ ಪಂದ್ಯದಲ್ಲಿ ಗೆದ್ದು ಗೌರವ ಉಳಿಸಿಕೊಳ್ಳುವ ಪ್ಲ್ಯಾನ್ ಮಾಡಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ತಮ್ಮ ನಾಯಕತ್ವದಲ್ಲಿ ಮೊದಲ ಗೆಲುವಿನ ನಗೆ ಬೀರಲು ಭಾರತದ ನೂತನ ನಾಯಕ ಶ್ರೇಯಸ್ ಅಯ್ಯರ್ ಪ್ಲ್ಯಾನ್ ಮಾಡಿಕೊಂಡಿದ್ದಾರೆ.
ಈಗಾಗಲೇ ಸರಣಿಯಲ್ಲಿ ಆಡಲಾಗಿರುವ ನಾಲ್ಕು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ. ಇಂಗ್ಲೆಂಡ್ ಈ ಸರಣಿಯನ್ನು 3-0 ಯಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಇಂಗ್ಲೆಂಡ್ ಹಾಗೂ ಐರ್ಲೆಂಡ್ ಪ್ರವಾಸದಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲದೇ ಇರುವುದು ಟೀಮ್ ಮ್ಯಾನೇಜ್ಮೆಂಟ್ ಚಿಂತೆಯನ್ನು ಹೆಚ್ಚಿಸಿದೆ.

ಟೀಮ್ ಇಂಡಿಯಾದ ಆರಂಭಿಕಾರದ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಭರ್ಜರಿ ಆರಂಭವನ್ನು ನೀಡುವ ಅನಿವಾರ್ಯತೆ ಇದೆ. ಈ ಸರಣಿಯಲ್ಲಿ ಉಭಯ ಆಟಗಾರರು ಬಿಗ್ ಇನಿಂಗ್ಸ್ ಕಟ್ಟಬೇಕಿದೆ. 15 ವರ್ಷದ ವೈಭವ್ ಸೂರ್ಯವಂಶಿ ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡುವ ಅನಿವಾರ್ಯತೆ ಇದೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಸ್ಥಿರ ಪ್ರದರ್ಶನ ನೀಡುತ್ತಿದ್ದು, ಇವರಿಗೆ ಉಳಿದ ಬ್ಯಾಟರ್‌ಗಳು ಇವರಿಗೆ ಉತ್ತಮ ಸಾಥ್ ನೀಡಬೇಕಿದೆ. ಇನ್ನು ಉಪನಾಯಕ ತಿಲಕ್ ವರ್ಮಾ ಈ ಸರಣಿಯಲ್ಲಿ ರನ್ ಕಲೆ ಹಾಕುವಲ್ಲಿ ಹಿಂದೆ ಬಿದಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನು ಟೀಮ್ ಇಂಡಿಯಾದ ಬೌಲರ್‌ಗಳು ಕರಾರುವಾಕ್ ದಾಳಿಯನ್ನು ಸಂಘಟಿಸಿದರೆ ಮಾತ್ರ ಮೊದಲ ಗೆಲುವಿನ ನಗೆ ಬೀರುವ ಕನಸು ನನಸಾಗುತ್ತದೆ.
ಇಂಗ್ಲೆಂಡ್ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ?
ಫಿಲ್ ಸಾಲ್ಟ್, ಜೋಸ್ ಬಟ್ಲರ್, ಹ್ಯಾರಿ ಬ್ರೂಕ್, ಜಾಕಬ್ ಬೆಥೆಲ್, ಟಾಮ್ ಬ್ಯಾಟಮ್, ಸ್ಯಾಮ್ ಕರನ್, ವಿಲ್ ಜಾಕ್ಸ್, ರೆಹನ್ ಅಹ್ಮದ್, ಅದಿಲ್ ರಶೀದ್, ಜೋಫ್ರಾ ಆರ್ಚರ್, ಜೋಶ್ ಟಂಗ್.
ಟೀಮ್ ಇಂಡಿಯಾ ತಂಡದಲ್ಲಿ ಯಾರಿಗೆಲ್ಲಾ ಸಿಗುತ್ತಾ ಚಾನ್ಸ್?
ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ/ ಸೂರ್ಯಾಂಶ್ ಶೆಡ್ಗೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಪ್ರೀನ್ಸ್ ಯಾದವ್, ಪ್ರಸಿದ್ಧ್ ಕೃಷ್ಣ.

ಪಂದ್ಯ ಆರಂಭವಾಗುವ ಸಮಯ ಯಾವಾಗ?
ಸೌತಾಂಪ್ಟನ್‌ನಲ್ಲಿ ನಡೆಯಲಿರುವ ಐದನೇ ಟಿ20 ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಡಸಲಿವೆ. ಈ ಪಂದ್ಯ ಭಾರತೀಯ ಕಾಲಮಾನ ಸಂಜೆ 7ಕ್ಕೆ ನಡೆಯಲಿದೆ.
ಐದನೇ 20 ಪಂದ್ಯದ ನೇರಪ್ರಸಾರವನ್ನು ಎಲ್ಲಿ ನೋಡಬಹುದು?
ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟಿ20 ಪಂದ್ಯವನ್ನು ಸೋನಿ ನೆಟ್‌ವರ್ಕ್‌ನಲ್ಲಿ ನೋಡಬಹುದು. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications