IND vs ENG 5th Test: ಟೆಸ್ಟ್ ಕ್ರಿಕೆಟ್‌ಗೆ ದೇವದತ್ ಪಡಿಕ್ಕಲ್ ಪದಾರ್ಪಣೆ; ರಜತ್ ಪಾಟಿದಾರ್ ಔಟ್!
ಗುರುವಾರ, ಮಾರ್ಚ್ 7ರಂದು ಧರ್ಮಶಾಲಾದ ಎಚ್‌ಪಿಸಿಎ ಸ್ಟೇಡಿಯಂನಲ್ಲಿ ಆರಂಭವಾಗಿರುವ 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ.
ಭಾರತ ವಿರುದ್ಧ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾಗೆ ಮತ್ತೊಬ್ಬ ಕ್ರಿಕೆಟಿಗನ ಚೊಚ್ಚಲ ಪ್ರವೇಶಕ್ಕೆ ಇದು ವೇದಿಕೆಯಾಗಿದೆ. ಏಕೆಂದರೆ ಅಂತಿಮ ಪಂದ್ಯದಲ್ಲಿ ಕರ್ನಾಟಕದ ಎಡಗೈ ಬ್ಯಾಟರ್ ದೇವದತ್ ಪಡಿಕ್ಕಲ್ ಅವರನ್ನು ಆಡುವ 11ರ ಬಳಗಕ್ಕೆ ಸೇರ್ಪಡೆಗೊಳಿಸಲಾಗಿದೆ.

ದೇವದತ್ ಪಡಿಕ್ಕಲ್ ಅವರು ತಮ್ಮ ಚೊಚ್ಚಲ ಟೆಸ್ಟ್ ಕ್ಯಾಪ್ ಸ್ವೀಕರಿಸುವ ಮೂಲಕ ಇಂಗ್ಲೆಂಡ್ ವಿರುದ್ಧ ಇದೇ ಸರಣಿಯಲ್ಲಿ ಭಾರತಕ್ಕೆ 5ನೇ ಚೊಚ್ಚಲ ಟೆಸ್ಟ್ ಆಟಗಾರರಾದರು.
ಕರ್ನಾಟಕ ತಂಡವನ್ನು ಪ್ರತಿನಿಧಿಸುವ ದೇವದತ್ ಪಡಿಕ್ಕಲ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಆಡಿದ 55 ಇನ್ನಿಂಗ್ಸ್‌ಗಳಲ್ಲಿ 44.5ರ ಸರಾಸರಿಯಲ್ಲಿ 2227 ರನ್ ಗಳಿಸಿದ್ದಾರೆ. ಇದರಲ್ಲಿ 6 ಶತಕ ಮತ್ತು 12 ಅರ್ಧಶತಕಗಳನ್ನು ಬಾರಿಸಿದ್ದಾರೆ.
ಇಂಗ್ಲೆಂಡ್‌ನ ಬ್ಯಾಟರ್ ಜಾನಿ ಬೈರ್‌ಸ್ಟೋವ್ ಮತ್ತು ಭಾರತದ ಸ್ಟಾರ್ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಅವರು ತಮ್ಮ 100ನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ.
ಕಳೆದ ಮೂರು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾದ ರಜತ್ ಪಾಟಿದಾರ್ ಬದಲಿಗೆ, ಭಾರತದ ಪರ ಯುವ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಚೊಚ್ಚಲ ಟೆಸ್ಟ್ ಕ್ಯಾಪ್ ಗಳಿಸಿದ್ದಾರೆ.
ಇನ್ನು ಆಕಾಶ್ ದೀಪ್ ಬದಲಿಗೆ ವೇಗಿ ಜಸ್ಪ್ರೀತ್ ಬುಮ್ರಾ ಆಡುವ 11ರ ಬಳಗಕ್ಕೆ ಮರಳಿದ್ದರೆ, ಇಂಗ್ಲೆಂಡ್ ಪರ ಒಲ್ಲಿ ರಾಬಿನ್ಸನ್ ಬದಲಿಗೆ ವೇಗಿ ಮಾರ್ಕ್ ವುಡ್ ಪುನರಾಗಮನ ಮಾಡಿದ್ದಾರೆ.
5ನೇ ಟೆಸ್ಟ್ ಪಂದ್ಯಕ್ಕೆ ಭಾರತ vs ಇಂಗ್ಲೆಂಡ್ ಆಡುವ 11ರ ಬಳಗ
ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಬೆನ್ ಸ್ಟೋಕ್ಸ್(ನಾಯಕ), ಜಾನಿ ಬೈರ್‌ಸ್ಟೋವ್, ಬೆನ್ ಫೋಕ್ಸ್(ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಶೋಯೆಬ್ ಬಶೀರ್, ಮಾರ್ಕ್ ವುಡ್, ಜೇಮ್ಸ್ ಆಂಡರ್ಸನ್.
ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ(ನಾಯಕ), ಶುಭ್ಮನ್ ಗಿಲ್, ದೇವದತ್ ಪಡಿಕ್ಕಲ್, ರವೀಂದ್ರ ಜಡೇಜಾ, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications