ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕೆ 15 ಆಟಗಾರರ ತಂಡ ಪ್ರಕಟಿಸಿದ ಇಂಗ್ಲೆಂಡ್

England

ಭಾರತ ವಿರುದ್ಧದ ಟೆಸ್ಟ್ ಸರಣಿಯ ಐದನೇ ಹಾಗೂ ಅಂತಿಮ ಪಂದ್ಯಕ್ಕೆ ಇಂಗ್ಲೆಂಡ್ ತನ್ನ 15 ಆಟಗಾರರ ತಂಡವನ್ನು ಪ್ರಕಟಿಸಿದೆ. ಸ್ಟಾರ್ ಬ್ಯಾಟ್ಸ್‌ಮನ್ ಮತ್ತು ವಿಕೆಟ್ ಕೀಪರ್ ಜಾಸ್ ಬಟ್ಲರ್ ಮತ್ತು ವೇಗಿ ಓಲಿ ರಾಬಿನ್ಸನ್ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಆದ್ರೆ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಆಡಿದ ತಂಡದಲ್ಲಿ ಹೆಚ್ಚಿನ ಬದಲಾವಣೆಯಿಲ್ಲದೆ ಇಂಗ್ಲೆಂಡ್ ಭಾರತ ವಿರುದ್ಧ ಕಣಕ್ಕಿಳಿಯಲಿದೆ.

ಜುಲೈ 1ರಿಂದ ಆರಂಭಗೊಳ್ಳಲಿರುವ ಅಂತಿಮ ಟೆಸ್ಟ್‌ನಲ್ಲಿ ಟೀಂ ಇಂಡಿಯಾಗೆ ದೊಡ್ಡ ಸಮಾಧಾನದ ವಿಚಾರ ಅಂದ್ರೆ ಬಟ್ಲರ್ ಅನುಪಸ್ಥಿತಿಯಾಗಿದೆ. ಜಾಸ್ ಬಟ್ಲರ್ , ಇಂಗ್ಲೆಂಡ್ ಸೀಮಿತ ಓವರ್‌ಗಳ ನಾಯಕ ಇಯಾನ್ ಮಾರ್ಗನ್ ಬದಲಿಗೆ ನಾಯಕನಾಗಿ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಬಟ್ಲರ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಬಟ್ಲರ್ ಮುಂದಿನ ಏಕದಿನ ಮತ್ತು ಟಿ20 ಸರಣಿಯಲ್ಲಿ ಇಂಗ್ಲೆಂಡ್‌ನ ಪ್ರಮುಖ ಆಟಗಾರನಾಗಲಿದ್ದಾರೆ.

ಜಾನಿ ಬೈಸ್ಟ್ರೋವ್ ವಿಕೆಟ್ ಕೀಪರ್

ಜಾನಿ ಬೈಸ್ಟ್ರೋವ್ ವಿಕೆಟ್ ಕೀಪರ್

ಬಟ್ಲರ್ ಅನುಪಸ್ಥಿತಿಯಲ್ಲಿ ಜಾನಿ ಬೈರ್‌ಸ್ಟೋವ್ ಇಂಗ್ಲೆಂಡ್‌ನ ವಿಕೆಟ್‌ಕೀಪರ್ ಆಗಿದ್ದಾರೆ. ನ್ಯೂಜಿಲೆಂಡ್ ಸರಣಿಯಲ್ಲಿ ಬೈರ್‌ಸ್ಟೋ ಅದ್ಭುತ ಪ್ರದರ್ಶನ ನೀಡಿದ್ದರು. ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಸತತ ಎರಡು ಶತಕ ದಾಖಲಿಸಿದ್ದು, ಏಕದಿನ ಕ್ರಿಕೆಟ್ ರೀತಿಯಲ್ಲಿ ಬ್ಯಾಟ್ ಬೀಸಿದ್ದಾರೆ. ವಿಕೆಟ್ ಕೀಪರ್ ಆಗಿ ಬೆನ್ ಫಾಕ್ಸ್ ಕೂಡ ತಂಡದಲ್ಲಿದ್ದಾರೆ. ಇತ್ತೀಚೆಗಷ್ಟೇ ಬೆನ್ ಸ್ಟೋಕ್ಸ್ ನೇತೃತ್ವದ ಇಂಗ್ಲೆಂಡ್, ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು 3-0 ಅಂತರದಲ್ಲಿ ಗೆದ್ದುಕೊಂಡಿತು.

ಐರ್ಲೆಂಡ್‌ನ ಹ್ಯಾರಿ ಟೆಕ್ಟರ್‌ಗೆ ಬ್ಯಾಟ್ ಗಿಫ್ಟ್‌ ನೀಡಿದ ಹಾರ್ದಿಕ್ ಪಾಂಡ್ಯ

ಇಂಗ್ಲೆಂಡ್ ಆಟಗಾರರು ಭರ್ಜರಿ ಫಾರ್ಮ್‌ನಲ್ಲಿದ್ದಾರೆ

ಇಂಗ್ಲೆಂಡ್ ಆಟಗಾರರು ಭರ್ಜರಿ ಫಾರ್ಮ್‌ನಲ್ಲಿದ್ದಾರೆ

ಬ್ರೆಂಡನ್ ಮೆಕಲಮ್ ಕೋಚ್ ಆಗಿ ಅಧಿಕಾರ ವಹಿಸಿಕೊಂಡ ನಂತರ ಇಂಗ್ಲೆಂಡ್‌ನ ಸ್ಪರ್ಧೆಯ ವಿಧಾನ ಬದಲಾಗಿದೆ. ಆಟಗಾರರು ಈಗ ದಾಳಿ ಮತ್ತು ವಿಭಿನ್ನ ಹೊಡೆತಗಳನ್ನು ಆಡಲು ಪ್ರಯತ್ನಿಸುತ್ತಿದ್ದಾರೆ. ಜೋ ರೂಟ್, ಬೆನ್ ಸ್ಟೋಕ್ಸ್ ಮತ್ತು ಜಾನಿ ಬೈರ್‌ಸ್ಟೋವ್ ಅವರ ಫಾರ್ಮ್ ಕೂಡ ಅತ್ಯುತ್ತಮವಾಗಿದ್ದು, ಆತಿಥೇಯರು ಹೆಚ್ಚಿನ ಭರವಸೆಯನ್ನು ಹೊಂದಿದ್ದಾರೆ. ಅಂತಿಮ ಟೆಸ್ಟ್ ಪಂದ್ಯವನ್ನು ಗೆಲ್ಲದ ಹೊರತು ಇಂಗ್ಲೆಂಡ್ ಸರಣಿ ಪ್ರಶಸ್ತಿಯನ್ನು ಉಳಿಸಕೊಳ್ಳಲಾಗದು.

ಹಾಗಾಗಿ ಯಾವುದೇ ಬೆಲೆ ತೆತ್ತಾದರೂ ಇಂಗ್ಲೆಂಡ್ ಗೆಲುವಿಗಾಗಿ ಹೋರಾಡುವುದು ಖಚಿತ. ಅನುಭವಿ ವೇಗಿಗಳಾದ ಸ್ಟುವರ್ಟ್ ಬ್ರಾಡ್ ಮತ್ತು ಜೇಮ್ಸ್ ಆಂಡರ್ಸನ್ ಕೂಡ ಇಂಗ್ಲೆಂಡ್ ತಂಡದಲ್ಲಿದ್ದಾರೆ. ಗಾಯಗೊಂಡಿರುವ ಭಾರತಕ್ಕೆ ದೊಡ್ಡ ಸವಾಲನ್ನು ಒಡ್ಡುವ ಸಾಮರ್ಥ್ಯವಿರುವ ಆಟಗಾರರನ್ನು ಇಂಗ್ಲೆಂಡ್ ಹುಡುಕುತ್ತಿದೆ.

ಕಿವೀಸ್ ವಿರುದ್ಧ ಮತ್ತೊಂದು ಭರ್ಜರಿ ಜಯ ಸಾಧಿಸಿದ ಇಂಗ್ಲೆಂಡ್: ನ್ಯೂಜಿಲೆಂಡ್‌ಗೆ ವೈಟ್‌ವಾಶ್ ಮುಖಭಂಗ

ಇಂಗ್ಲೆಂಡ್ 15 ಆಟಗಾರರನ್ನೊಳಗೊಂಡ ತಂಡ

ಇಂಗ್ಲೆಂಡ್ 15 ಆಟಗಾರರನ್ನೊಳಗೊಂಡ ತಂಡ

ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋ, ಸ್ಯಾಮ್ ಬಿಲ್ಲಿಂಗ್ಸ್, ಸ್ಟುವರ್ಟ್ ಬ್ರಾಡ್, ಹ್ಯಾರಿ ಬ್ರಾಕ್, ಜಾಕ್ ಕ್ರೌಲಿ, ಬೆನ್ ಫಾಕ್ಸ್, ಜ್ಯಾಕ್ ಲೀಚ್, ಅಲೆಕ್ಸ್ ಲೀಸ್, ಕ್ರೇಗ್ ಓವರ್‌ಟನ್, ಜೇಮೀ ಓವರ್‌ಟನ್, ಮ್ಯಾಥ್ಯೂ ಪಾಟ್ಸ್, ಓಲಿ ಪೋಪ್, ಜೋ ರೂಟ್

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಮಾರ್ಗನ್ | OneIndia Kannada
ಟೀಂ ಇಂಡಿಯಾ ಟೆಸ್ಟ್ ಸ್ಕ್ವಾಡ್‌

ಟೀಂ ಇಂಡಿಯಾ ಟೆಸ್ಟ್ ಸ್ಕ್ವಾಡ್‌

ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಭ್ ಪಂತ್, ಕೆ.ಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ ಕೃಷ್ಣ

Story first published: Tuesday, June 28, 2022, 10:31 [IST]
Other articles published on Jun 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X