ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs ENG 5ನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸಿದ ಭಾರತ

IND vs ENG 5th Test: India Took First Innings Lead Against England

ಕಳೆದ ವರ್ಷ ಕೊರೊನಾ ವೈರಸ್ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಎಡ್ಜ್‌ಬಾಸ್ಟನ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಜಸ್ಪ್ರೀತ್ ಬುಮ್ರಾ ನಾಯಕತ್ವದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಇನ್ನಿಂಗ್ಸ್ ಮುನ್ನಡೆ ಸಾಧಿಸಿದೆ.

ಇಂಗ್ಲೆಂಡ್ ವಿರುದ್ಧದ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತವು ಆರಂಭದಲ್ಲೇ ವಿಕೆಟ್ ಕಳೆದುಕೊಂಡಿದೆ. ಇನ್ನಿಂಗ್ಸ್‌ನ ಮೊದಲ ಓವರ್‌ನಲ್ಲಿ ಶುಭ್‌ಮನ್ ಗಿಲ್ ಔಟಾದರು. ನಂತರ ಜೊತೆಯಾದ ಚೇತೇಶ್ವರ ಪೂಜಾರ ಮತ್ತು ಹನುಮ ವಿಹಾರಿ ಬ್ಯಾಟಿಂಗ್ ಮಾಡುತ್ತಿದ್ದು, ಭಾರತದ ಮುನ್ನಡೆ 160 ರನ್‌ಗಳ ಗಡಿ ದಾಟಿದೆ.

ಇದಕ್ಕೂ ಮೊದಲು ಭಾರತದ ಪರ ಮೊಹಮ್ಮದ್ ಸಿರಾಜ್ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದರೆ, ನಾಯಕ ಜಸ್ಪ್ರೀತ್ ಬುಮ್ರಾ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಭಾರತವು 284 ರನ್‌ಗಳಿಗೆ ಇಂಗ್ಲೆಂಡ್‌ ತಂಡವನ್ನು ಆಲೌಟ್ ಮಾಡಿತು. ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಐದನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 132 ರನ್‌ಗಳ ಭಾರೀ ಮುನ್ನಡೆ ಸಾಧಿಸಿತು.

IND vs ENG 5th Test: India Took First Innings Lead Against England

ಭಾನುವಾರ ಸ್ಟುವರ್ಟ್ ಬ್ರಾಡ್ ಅವರನ್ನು ಸಿರಾಜ್ ಔಟ್ ಮಾಡುವ ಮೊದಲು ಜಾನಿ ಬೈರ್‌ಸ್ಟೋವ್ 106 ರನ್‌ ಗಳಿಸಿ ಮೊಹಮ್ಮದ್ ಶಮಿಗೆ ವಿಕೆಟ್ ಒಪ್ಪಿಸಿದರು. ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ವಿರುದ್ಧ ಇಂಗ್ಲೆಂಡ್ 83/5 ಗಳಿಸಿ ಫಾಲೋಆನ್ ಭೀತಿ ಎದುರಿಸುತ್ತಿತ್ತು. ಇದರಿಂದ ಹಿಂದೆ ಸರಿಯಲು ಜಾನಿ ಬೈರ್‌ಸ್ಟೋವ್ ಅವರ ಅಮೋಘ ಶತಕ ಇಂಗ್ಲೆಂಡ್‌ಗೆ ಸಹಾಯ ಮಾಡಿತು.

ಸ್ಯಾಮ್ ಬಿಲ್ಲಿಂಗ್ಸ್ ಜೊತೆಗೂಡಿ ಏಳನೇ ವಿಕೆಟ್‌ಗೆ 92 ರನ್ ಸೇರಿಸುವ ಮೊದಲು ಬೆನ್ ಸ್ಟೋಕ್ಸ್ ಜೊತೆಗೂಡಿ ಆರನೇ ವಿಕೆಟ್‌ಗೆ 66 ರನ್ ಜೊತೆಯಾಟ ನಡೆಸಿದರು. ಪಂದ್ಯದ ಎರಡನೇ ದಿನದಂದು ಭಾರತ ನಾಯಕ ಜಸ್ಪ್ರೀತ್ ಬುಮ್ರಾ ಅವರು ಇಂಗ್ಲೆಂಡ್ ತಂಡದ ಆರಂಭಿಕ ಮೂರು ವಿಕೆಟ್‌ಗಳನ್ನು ಪಡೆದಿದ್ದರು. ಉಳಿದಂತೆ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ತಲಾ ಒಂದು ವಿಕೆಟ್ ಪಡೆದು ಆತಿಥೇಯರ ಮೇಲೆ ಮತ್ತಷ್ಟು ಒತ್ತಡವನ್ನು ಹೆಚ್ಚಿಸಿದ್ದರು.

ಭಾರತ vs ಇಂಗ್ಲೆಂಡ್ ಆಡು 11ರ ಬಳಗ
ಭಾರತ: ಶುಭಮನ್ ಗಿಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ(ನಾಯಕ)

Kohli ಹಾಗು Bairstow ನಡುವೆ ಏನಿದು ಗಲಾಟೆ | *Cricket | OneIndia Kannada

ಇಂಗ್ಲೆಂಡ್: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಸ್ಟೋಕ್ಸ್(ನಾಯಕ), ಸ್ಯಾಮ್ ಬಿಲ್ಲಿಂಗ್ಸ್(ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್

Story first published: Sunday, July 3, 2022, 21:01 [IST]
Other articles published on Jul 3, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X