Ind vs Eng 5th Test: ಐದನೇ ಟೆಸ್ಟ್‌ನ ಟಾಸ್ ವರದಿ, ಪ್ಲೇಯಿಂಗ್ 11 ಡೀಟೈಲ್ಸ್

ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದೆ. ಈ ಮೂಲಕ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲು ಕಣಕ್ಕಿಳಿಯಲಿದೆ.
ಇಂಗ್ಲೆಂಡ್ ತಂಡವು ಪಂದ್ಯಕ್ಕೂ ಮೊದಲೇ ಗುರುವಾರವೇ ಪ್ಲೇಯಿಂಗ್ ಇಲೆವೆನ್ ಅನ್ನು ಘೋಷಿಸಿದ್ದು, ಟಾಸ್ ಗೆದ್ದ ಬೆನ್ ಸ್ಟೋಕ್ಸ್ ಚೇಸಿಂಗ್ ಮಾಡಲು ಮುಂದಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು 3-0 ಅಂತರದಲ್ಲಿ ಗೆದ್ದಿರುವ ಆಂಗ್ಲರು ಗೆಲುವಿನ ಲಯವನ್ನ ಮುಂದುವರಿಸಲು ಸಜ್ಜಾಗಿದ್ದಾರೆ.
ಇತ್ತ ಟೀಂ ಇಂಡಿಯಾವು ಹೊಸ ನಾಯಕ ಜಸ್ಪ್ರೀತ್ ಬುಮ್ರಾ ನಾಯಕತ್ವದಲ್ಲಿ ಮುನ್ನಡೆಯುತ್ತಿದ್ದು, ನಾಲ್ಕು ಬೌಲರ್ ಮತ್ತು ಓರ್ವ ಸ್ಪಿನ್ ಆಲ್‌ರೌಂಡರ್‌ನೊಂದಿಗೆ ಕಣಕ್ಕಿಳಿಯುತ್ತಿದೆ. ಭಾರತ ಮತ್ತು ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್ ಅನ್ನು ಈ ಕೆಳಗೆ ತಿಳಿಯಿರಿ

ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್
ಶುಭಮನ್ ಗಿಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ(ನಾಯಕ)
IND vs ENG: 3 ಪಂದ್ಯಗಳ ODI ಸರಣಿಗೆ ಮರಳಿದ ಪಾಂಡ್ಯ, ಜಡೇಜಾ; ಹೀಗಿದೆ ಭಾರತ ತಂಡ

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್
ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಒಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್(ನಾಯಕ), ಸ್ಯಾಮ್ ಬಿಲ್ಲಿಂಗ್ಸ್(ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್
SL vs AUS 1ನೇ ಟೆಸ್ಟ್: ಲಿಯಾನ್, ಹೆಡ್ ದಾಳಿಗೆ ನಲುಗಿದ ಶ್ರೀಲಂಕಾ; ಆಸ್ಟ್ರೇಲಿಯಕ್ಕೆ 1-0 ಮುನ್ನಡೆ

ಪಿಚ್ ರಿಪೋರ್ಟ್
ಭಾರತ-ಇಂಗ್ಲೆಂಡ್ ಅಂತಿಮ ಟೆಸ್ಟ್ ಪಂದ್ಯವು ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ. ಈ ಮೈದಾನವು ಸಾಮಾನ್ಯವಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡಕ್ಕೂ ಸಮಾನವಾಗಿ ಅನುಕೂಲಕರವಾಗಿದೆ. ಆದರೆ ಇಲ್ಲಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತದೆ. ಇದಕ್ಕೆ ಹಿಂದಿನ ದಾಖಲೆಗಳೇ ಕಾರಣ.
ಮೊದಲ ದಿನದ ಆಟ ಇಲ್ಲಿನ ವೇಗಿಗಳಿಗೆ ಉತ್ತಮ ಸ್ವಿಂಗ್ ಆಗಿತ್ತು. ಅದೇ ರೀತಿ ಬ್ಯಾಟ್ಸ್‌ಮನ್‌ಗಳು ಪಿಚ್‌ನ ಸ್ವರೂಪವನ್ನು ಅರ್ಥಮಾಡಿಕೊಳ್ಳದೆ ಎಡವುತ್ತಾರೆ. ಸರಾಸರಿಯಾಗಿ, ಈ ಮೈದಾನದಲ್ಲಿ ಮೊದಲು ಬ್ಯಾಟ್ ಮಾಡುವ ತಂಡವು 300+ ರನ್ ಗಳಿಸುತ್ತದೆ. 300 ರನ್ ದಾಟುವುದೊಂದೇ ಗೆಲ್ಲುವ ಅವಕಾಶ.
ಈ ಎಡ್ಜ್‌ಬಾಸ್ಟನ್ ಸ್ಟೇಡಿಯಂನಲ್ಲಿ ಇದುವರೆಗೂ 53 ಟೆಸ್ಟ್ ಪಂದ್ಯಗಳನ್ನು ಆಯೋಜಿಸಿದೆ. ಇಂಗ್ಲೆಂಡ್ 28 ಪಂದ್ಯಗಳನ್ನು ಗೆದ್ದಿದ್ದರೆ, ಪ್ರವಾಸಿ ತಂಡವು 10 ಬಾರಿ ಪಂದ್ಯ ಗೆದ್ದಿದೆ. ಇನ್ನುಳಿದ 15 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದೆ. ಮೊದಲು ಬ್ಯಾಟ್ ಮಾಡಿದ ತಂಡ 18 ಪಂದ್ಯಗಳನ್ನು ಗೆದ್ದಿದೆ ಮತ್ತು ಎರಡನೇ ಬ್ಯಾಟಿಂಗ್ ಮಾಡಿದ ತಂಡ 20 ಬಾರಿ ಗೆದ್ದಿದೆ.
ಬೌಲಿಂಗ್ ವಿಷಯದಲ್ಲಿ ಭಾರತ ನಾಲ್ಕು ಬೌಲರ್‌ಗಳೊಂದಿಗೆ ಕಣಕ್ಕಿಳಿದಿದ್ದು, ಇಂಗ್ಲೆಂಡ್ ತಂಡವು ಕೂಡ ಮೂವರು ಪ್ರಮುಖ ಬೌಲರ್, ಓರ್ವ ಆಲ್‌ರೌಂಡರ್ (ನಾಯಕ), ಓರ್ವ ಸ್ಪಿನ್ ಆಲ್‌ರೌಂಡರ್‌ನೊಂದಿಗೆ ಕಣಕ್ಕಿಳಿಯುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications