ವಿರಾಟ್ ಬದಲಿಗೆ ಕಳೆದ ಬಾರಿ ಐಪಿಎಲ್ ಫೈನಲ್‌ನಲ್ಲಿ ಮಿಂಚಿದ ಆಟಗಾನಿಗೆ ಅವಕಾಶ ನೀಡುವಂತೆ ಆಕಾಶ್ ಚೋಪ್ರಾ ಧ್ವನಿ
ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭಾಗಿದೆ. ಈ ಪಂದ್ಯಕ್ಕಾಗಿ ಮುತ್ತಿನ ನಗರಿಯ ಅಂಗಳ ಸಿಂಗಾರ ಗೊಂಡಿದೆ. ಕೊನೆಯ ಹಂತದ ಕಾರ್ಯಗಳು ಈಗಾಗಲೇ ಮುಕ್ತಾಯ ಹಂತದಲ್ಲಿವೆ. ಈ ಬೆನ್ನಲ್ಲೆ ವಿರಾಟ್ ಕೊಹ್ಲಿ ಅವರ ಸ್ಥಾನವನ್ನು ತುಂಬುವ ಆಟಗಾರ ಎಂಬ ಬಗ್ಗೆ ಪ್ರಶ್ನೆಗಳು ಎದ್ದಿವೆ.
ಈ ಸ್ಥಾನದ ಮೇಲೆ ಹಲವು ಆಟಗಾರರು ಕಣ್ಣು ನೆಟ್ಟಿದ್ದಾರೆ. ರಣಜಿ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಆಟಗಾರರು ಮತ್ತೆ ರಾಷ್ಟ್ರೀಯ ತಂಡವನ್ನು ಸೇರುವ ಕನಸಿನಲ್ಲಿದ್ದಾರೆ. ಕೊಹ್ಲಿ ಬದಲಿಗೆ ಆಕಾಶ್ ಚೋಪ್ರಾ ಒಬ್ಬ ಆಟಗಾರನ ಬಗ್ಗೆ ಸಲಹೆ ನೀಡಿದ್ದಾರೆ.

ವಿರಾಟ್ ಕೊಹ್ಲಿ ಬದಲಿಗೆ ಆಕಾಶ್ ಚೋಪ್ರಾ 22 ವರ್ಷದ ಸಾಯಿ ಸುದರ್ಶನ್ ತಂಡ ಸೇರಿಕೊಳ್ಳಬೇಕು ಎಂದು ತಮ್ಮ ಆಸೆಯನ್ನು ವ್ಯಕ್ತ ಪಡಿಸಿದ್ದಾರೆ. ಸುದರ್ಶನ್ ಇತ್ತೀಚೆಗೆ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಸುದರ್ಶನ್ ಐಪಿಎಲ್ 2023 ರ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ಪರ 47 ಎಸೆತಗಳಲ್ಲಿ 8 ಬೌಂಡರಿ ಮತ್ತು 6 ಸಿಕ್ಸರ್‌ಗಳ ಸಹಾಯದಿಂದ 96 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿ ಎಲ್ಲರ ಚಿತ್ತ ಕದ್ದ ಆಟಗಾರ.
ಸುದರ್ಶನ್ ಇತ್ತೀಚೆಗೆ ಇಂಗ್ಲೆಂಡ್ ಲಯನ್ಸ್ ವಿರುದ್ಧ ಆಡಿದ ಮೊದಲ ಅನಧಿಕೃತ ಟೆಸ್ಟ್‌ನಲ್ಲಿ 97 ರನ್‌ಗಳ ಇನ್ನಿಂಗ್ಸ್ ಕಟ್ಟಿದ್ದರು. ಸುದರ್ಶನ್ ಅವರು ಇಂಗ್ಲೆಂಡ್ ಲಯನ್ಸ್ ವಿರುದ್ಧ ಭಾರತ-ಎ ತಂಡದ ಭಾಗವಾಗಿದ್ದರು. ಎಡಗೈ ಬ್ಯಾಟ್ಸ್‌ಮನ್ ಆಗಿ ಸುದರ್ಶನ್ ಕೊಹ್ಲಿಗೆ ಉತ್ತಮ ಬದಲಿ ಎಂದು ಸಾಬೀತುಪಡಿಸಬಹುದು ಎಂದು ಆಕಾಶ್ ಚೋಪ್ರಾ ನಂಬಿದ್ದಾರೆ.
ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಆಕಾಶ್ ಚೋಪ್ರಾ, ನನಗೆ ತಿಳಿದಂತೆ ಈ ಸ್ಥಾನವನ್ನು ತುಂಬಲು ಎಡಗೈ ಆಟಗಾರ ಸಾಯಿ ಸುದರ್ಶನ್ ಸೂಕ್ತ. ಇದು ಸ್ವಲ್ಪ ಔಟ್-ಆಫ್-ಬಾಕ್ಸ್ ಸಲಹೆ ಇದ್ದರೂ, ಅದು ತಪ್ಪಲ್ಲ. ಅವರು ಐಪಿಎಲ್ ಫೈನಲ್‌ನಲ್ಲಿ ರನ್ ಗಳಿಸಿದ್ದರು ಎಂದು ತಿಳಿಸಿದ್ದಾರೆ.

ಸುದರ್ಶನ್ ಅವರು ಎಲ್ಲಾ ಮೂರು ಮಾದರಿಗಳಲ್ಲಿ ರನ್ ಗಳಿಸಿದ್ದಾರೆ. ಅವರು ಐಪಿಎಲ್ ಮೂಲಕ T20 ಸ್ವರೂಪದಲ್ಲಿ, ಪ್ರಥಮ ದರ್ಜೆಯ ಮೂಲಕ ಕೆಂಪು ಚೆಂಡಿನಲ್ಲೂ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ODI ಸರಣಿಯಲ್ಲಿ ರನ್ ಗಳಿಸಿದರು.
ಅವರು ಎಲ್ಲಾ ಮೂರು ಸ್ವರೂಪಗಳಲ್ಲಿ ರನ್ ಗಳಿಸಿದ್ದಾರೆ. ಅವರು ಏಕದಿನದ ಮೊದಲ ಎರಡು ಇನ್ನಿಂಗ್ಸ್‌ಗಳಲ್ಲಿ ರನ್ ಗಳಿಸಿದ್ದಾರೆ ಮತ್ತು ಲಯನ್ಸ್ ಆಫ್ ಇಂಗ್ಲೆಂಡ್ ವಿರುದ್ಧ 90 ಪ್ಲಸ್ ರನ್ ಗಳಿಸಿದ್ದಾರೆ. ಅವರು ನಿರಂತರವಾಗಿ ರನ್ ಗಳಿಸುತ್ತಿದ್ದಾರೆ. ಮತ್ತು ಅವರ ಆಟ ಕ್ಲೀನ್ ಆಗಿದೆ. ಅವರು ಬಿಗ್ ಇನ್ನಿಂಗ್ಸ್ ಕಟ್ಟುವ ಕ್ಷಮತೆಯನ್ನು ಹೊಂದಿದ್ದಾರೆ. ಟೆಸ್ಟ್‌ಗೆ ಹೊಂದುವ ಆಟಗಾರ ಎಂದು ಆಕಾಶ್ ತಿಳಿಸಿದ್ದಾರೆ.
ತಮಿಳುನಾಡು ಪರ ಆಡುತ್ತಿರುವ ಸಾಯಿ ಸುದರ್ಶನ್ ಇದುವರೆಗೆ 15 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, 25 ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡಿದ್ದು, 39.56 ಸರಾಸರಿಯಲ್ಲಿ 989 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 2 ಶತಕ ಮತ್ತು 4 ಅರ್ಧ ಶತಕಗಳನ್ನು ಗಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications