Ind vs Eng: 2ನೇ ಪಂದ್ಯದಲ್ಲಿ ತಿರುಗಿ ಬೀಳಲಿದ್ದಾರೆ: ಇಂಗ್ಲೆಂಡ್ ಆಟಗಾರರ ಮೇಲೆ ಚೋಪ್ರ ವಿಶ್ವಾಸ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿದ್ದು ಅಮೋಘ ಗೆಲುವು ಸಾಧಿಸಿದೆ. ಇದೀಗ ಎರಡಮನೇ ಪಂದ್ಯದಲ್ಲಿಯೂ ಗೆಲ್ಲುವ ಮೂಲಕ ಸರಣಿಯನ್ನು ವಶಕ್ಕೆ ಪಡೆಯುವ ವಿಶ್ವಾಸದಲ್ಲಿದೆ. ಆದರೆ ಇಂಗ್ಲೆಂಡ್ ತಂಡ ಮೊದಲ ಪಂದ್ಯದಲ್ಲಿ ಮಾಡಿದ ತಪ್ಪನ್ನು ತಿದ್ದಿಕೊಂಡು ಭಾರತಕ್ಕೆ ತಿರುಗೇಟು ನೀಡಲು ಸಿದ್ಧತೆ ನಡೆಸಿದೆ.
ಭಾರತ ವಿರುದ್ಧದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮೊದಲ ಎಸೆತದಲ್ಲಿಯೇ ವಿಕೆಟ್ ಕಳೆದುಕೊಳ್ಳುವ ಮೂಲಕ ನಿರಾಸೆ ಅನುಭವಿಸಿದ್ದರು. ಅತ್ಯುತ್ತಮ ಫಾರ್ಮ್‌ನಲ್ಲಿರುವ ಬಟ್ಲರ್ ವಿಕೆಟ್ ಶೀಘ್ರದಲ್ಲಿಯೇ ಪಡೆಯುವ ಮೂಲಕ ಭಾರತ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಎರಡನೇ ಪಂದ್ಯದಲ್ಲಿ ಜೋಸ್ ಬಟ್ಲರ್ ಮತ್ತೆ ಫಾರ್ಮ್‌ಗೆ ಮರಳಿ ತಂಡಕ್ಕೆ ನೆರವಾಗಲಿದ್ದಾರೆ ಎಂದಿದ್ದಾರೆ ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರ.

ವಿಫಲವಾಗಿದ್ದ ಇಂಗ್ಲೆಂಡ್ ದಾಂಡಿಗರು
ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ವಿಭಾಗ ಸಂಪೂರ್ಣ ವೈಫಲ್ಯ ಅನುಭವಿಸಿತ್ತು. ಭಾರತದ 199 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ ಗಳಿಸಿದ್ದು ಕೇವಲ 148 ರನ್ ಮಾತ್ರ. ಈ ಮೂಲಕ 50 ರನ್‌ಗಳ ಬೃಹತ್ ಗೆಲುವು ಸಾಧಿಸಲು ಭಾರತ ಯಶಸ್ವಿಯಾಗಿತ್ತು. ಅದರಲ್ಲೂ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಅವರನ್ನು ಭುವನೇಶ್ವರ್ ಕುಮಾರ್ ಶೂನ್ಯಕ್ಕೆ ವಟ್ ಮಾಡುವಲ್ಲಿ ಯಶಸ್ವಿಯಾಗಿದ್ದರು.

ಇಂಗ್ಲೆಂಡ್ ಬ್ಯಾಟಿಂಗ್ ವಿಭಾಗದ ಮೇಲೆ ನಿರೀಕ್ಷೆ
ಆಕಾಶ್ ಚೋಪ್ರ ಎರಡನೇ ಪಂದ್ಯಕ್ಕೂ ಮುನ್ನ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ್ದು ಇಂಗ್ಲೆಂಡ್ ಬ್ಯಾಟಿಂಗ್ ವಿಭಾಗದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. "ಬ್ಯಾಟಿಂಗ್‌ನಲ್ಲಿ ಇಂಗ್ಲೆಂಡ್ ತಂಡಿದಿಂದ ನಾನು ಹೆಚ್ಚಿನದ್ದನ್ನು ನಿರೀಕ್ಷಿಸುತ್ತಿದ್ದೇನೆ. ಜೋಸ್ ಬಟ್ಲರ್ ಸ್ಪೊಟಿಸಲು ಆರಂಭಿಸಿದರೆ ನೀವು 50 ರನ್‌ಗಳ ಅಂತರದಿಂದ ಗೆಲ್ಲಲು ಸಾಧ್ಯವಿಲ್ಲ. ಅವರೇನಾದರೂ ಮೊದಲು ಬ್ಯಾಟಿಂಗ್ ನಡೆಸಿದರೆ 200ರ ಸನಿಹ ರನ್ ಗಳಿಸಲಿದ್ದಾರೆ. ನಾವೇನಾದರೂ ಮೊದಲು ಬ್ಯಾಟಿಂಗ್ ಮಾಡಿ 200 ರನ್‌ಗಳಿಸಿದರೆ ಅದನ್ನು ಬೆನ್ನಟ್ಟುವ ಸಾಮರ್ಥ್ಯ ಅವರಲ್ಲಿದೆ" ಎಂದಿದ್ದಾರೆ ಆಕಾಶ್ ಚೋಪ್ರ.

ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ
ಇನ್ನು ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಭಾರತ ಮತ್ತೊಮ್ಮೆ ಮೊದಲಿಗೆ ಬ್ಯಾಟಿಂಗ್ ನಡೆಸಿ ಗುರಿ ನಿಗದಿ ಪಡಿಸಲಿದೆ. ಭಾರತ ತಂಡದಲ್ಲಿ ಪ್ರಮುಖ ಬದಲಾವಣೆಗಳು ಆಗಿದ್ದು ವಿರಾಟ್ ಕೊಹ್ಲಿ, ರಿಷಬ್ ಪಂತ್, ರವೀಂದ್ರ ಜಡೇಜಾ ಹಾಗೂ ಜಸ್ಪ್ರೀತ್ ಬೂಮ್ರಾ ಆಡುವ ಬಳಗವನ್ನು ಸೇರಿಕೊಂಡಿದ್ದಾರೆ. ಇಶಾನ್ ಕಿಶನ್, ದೀಪಕ್ ಹೂಡಾ, ಅಕ್ಷರ್ ಪಟೇಲ್ ಹಾಗೂ ಅರ್ಶ್‌ದೀಪ್ ಸಿಂಗ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ.

ಇತ್ತಂಡಗಳ ಆಡುವ 11ರ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್
ಇಂಗ್ಲೆಂಡ್: ಜೇಸನ್ ರಾಯ್, ಜೋಸ್ ಬಟ್ಲರ್ (ನಾಯಕ/ವಿಕೆಟ್ ಕೀಪರ್), ಡೇವಿಡ್ ಮಲಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಸ್ಯಾಮ್ ಕುರಾನ್, ಡೇವಿಡ್ ವಿಲ್ಲಿ, ಕ್ರಿಸ್ ಜೋರ್ಡಾನ್, ರಿಚರ್ಡ್ ಗ್ಲೀಸನ್, ಮ್ಯಾಥ್ಯೂ ಪಾರ್ಕಿನ್ಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications