'ಜಿಮ್ಮಿ ಬೌಲಿಂಗ್ ನೋಡೋದೇ ಚೆಂದ'; ಭಾರತೀಯರ ವಿಕೆಟ್ ಪಡೆದ ಆ್ಯಂಡರ್ಸನ್ ಹೊಗಳಿದ ಡೇಲ್ ಸ್ಟೇನ್

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಗಿದಿದ್ದು ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ. ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದಾಗಿ ಯಾವುದೇ ಫಲಿತಾಂಶವಿಲ್ಲದೆ ನೀರಸ ಡ್ರಾನಲ್ಲಿ ಅಂತ್ಯಗೊಂಡಿತು. ನಂತರ ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 151 ರನ್‌ಗಳ ಗೆಲುವನ್ನು ಸಾಧಿಸಿದೆ.
ಮೊದಲೆರಡು ಪಂದ್ಯಗಳ ನಂತರ ಇಂಗ್ಲೆಂಡ್ ವಿರುದ್ಧ 1-0 ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದ ಟೀಮ್ ಇಂಡಿಯಾ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿಯೇ ಕಳಪೆ ಪ್ರದರ್ಶನ ನೀಡುವುದರ ಮೂಲಕ ಮಂಕಾಗಿದೆ. ಲೀಡ್ಸ್ ಅಂಗಳದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಮೊದಲನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದರು. ಕೇವಲ 40.4 ಓವರ್‌ಗಳ ಬ್ಯಾಟಿಂಗ್ ಮಾಡಿದ ಭಾರತ ತಂಡ ತನ್ನೆಲ್ಲಾ ವಿಕೆಟ್‍ಗಳನ್ನು ಕಳೆದುಕೊಂಡು ಕೇವಲ 78 ರನ್‌ಗೆ ಆಲ್ ಔಟ್ ಆಯಿತು.
ಇಂಗ್ಲೆಂಡ್ ತಂಡದ ವೇಗಿ ಜೇಮ್ಸ್ ಆ್ಯಂಡರ್ಸನ್ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಭಾರತದ ಪ್ರಮುಖ ಆಟಗಾರರಾದ ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ ಮತ್ತು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರ ವಿಕೆಟ್‍ಗಳನ್ನು ವೇಗವಾಗಿ ಪಡೆದುಕೊಳ್ಳುವುದರ ಮೂಲಕ ಅತ್ಯುತ್ತಮ ಪ್ರದರ್ಶನವನ್ನು ನೀಡಿದರು. ಈ ಮೂಲಕ ವಿರಾಟ್ ಕೊಹ್ಲಿಯನ್ನು ಅತಿಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಎಂಬ ಖ್ಯಾತಿಗೂ ಸಹ ಜೇಮ್ಸ್ ಆ್ಯಂಡರ್ಸನ್ ಪಾತ್ರರಾದರು.
ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ 8 ಓವರ್ ಬೌಲಿಂಗ್ ಮಾಡಿದ ಜೇಮ್ಸ್ ಆ್ಯಂಡರ್ಸನ್ ಕೇವಲ 6 ರನ್ ನೀಡಿ, 5 ಮೇಡನ್ ಓವರ್ ಮಾಡಿ ಟೀಮ್ ಇಂಡಿಯಾದ ಪ್ರಮುಖ 3 ವಿಕೆಟ್‍ಗಳನ್ನು ಪಡೆದುಕೊಂಡು ಅತ್ಯುತ್ತಮ ಬೌಲಿಂಗ್ ಮಾಡಿದರು. ಹೀಗೆ ಭಾರತದ ಪ್ರಮುಖ ಆಟಗಾರರ ವಿಕೆಟ್‍ಗಳನ್ನು ಪಡೆದುಕೊಂಡು ಟೀಮ್ ಇಂಡಿಯಾವನ್ನು ಒತ್ತಡಕ್ಕೆ ಜೇಮ್ಸ್ ಆ್ಯಂಡರ್ಸನ್ ಬೌಲಿಂಗ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ಪ್ರಶಂಸೆಗಳು ವ್ಯಕ್ತವಾದವು.
ನಂತರ ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಉತ್ತಮ ಬೌಲಿಂಗ್ ಪ್ರದರ್ಶನ ಮಾಡುತ್ತಿರುವ ಜೇಮ್ಸ್ ಆ್ಯಂಡರ್ಸನ್ ಕುರಿತು ದಕ್ಷಿಣ ಆಫ್ರಿಕಾದ ವೇಗಿ ಡೇಲ್ ಸ್ಟೇನ್ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಟ್ವೀಟ್ ಮಾಡಿದ್ದು ಹಾಡಿ ಹೊಗಳಿದ್ದಾರೆ. ಜೇಮ್ಸ್ ಆ್ಯಂಡರ್ಸನ್ ಸ್ವಿಂಗ್ ಬೌಲಿಂಗ್ ನೋಡುವುದೇ ಸಡಗರ, ಶಕ್ತಿ ಉಳಿಸುವಂತಹ ನಯವಾದ ಬೌಲಿಂಗ್ ಮಾಡುವ ಬೌಲರ್ ಜೇಮ್ಸ್ ಆ್ಯಂಡರ್ಸನ್ ಎಂದು ಬರೆದು ಕೊಳ್ಳುವುದರ ಮೂಲಕ ಡೇಲ್ ಸ್ಟೇನ್ ಜೇಮ್ಸ್ ಆ್ಯಂಡರ್ಸನ್ ಅವರ ಉತ್ತಮ ಬೌಲಿಂಗ್ ಬಗ್ಗೆ ಟ್ವೀಟ್ ಮಾಡಿ ಹೊಗಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications